ಬೆಂಗಳೂರು: ರಾಜ್ಯ ಸರ್ಕಾರ ನನ್ನ ಮನವಿಯನ್ನು ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಚ್ಚುವುದಾಗಿ ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಎಂದು ಹೇಳಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಈ ಬಗ್ಗೆ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ , ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದೆ ಎಂದು ವರದಿಯಾಗಿದೆ.
“ಹಿಂದೂ ಸಮಾಜದ ನಾಯಕನೆಂದು ಹೇಳಿಕೊಳ್ಳುವ ಪುನೀತ್ ಕೆರೆಹಳ್ಳಿ ಈಗಾಗಲೇ ಹಲವು ಸಮಾಜ ವಿರೋಧಿ ಕೃತ್ಯಗಳಲ್ಲಿ ಭಾಗಿಯಾಗಿರುವ ಮಾಹಿತಿ ಇದೆ. ಈತ ಈಗ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದಾನೆ. ಈತನಿಗೆ ಅನೇಕ ಹಿಂದುತ್ವ ಸಂಘಟನೆಗಳ ನಾಯಕರು ಹಾಗೂ ಬಿಜೆಪಿ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ. ಈತ ಅವರ ಮುಂದೆ ಬಹಿರಂಗವಾಗಿ ವಿಧಾನಸೌಧಕ್ಕ ಕಲ್ಲು ಎಸೆಯುತ್ತೇನೆ ಹಾಗೂ ಬಸ್ಸಿಗೆ ಬೆಂಕಿ ಹಚ್ಚುತ್ತೇನೆ ಎಂದು ಕಾನೂನು ಸುವ್ಯವಸ್ಥೆಗೆ ಬಹಿರಂಗ ಸವಾಲು ಹಾಕಿರುವ ಹಿನ್ನೆಲೆಯಲ್ಲಿ ಕೂಡಲೇ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.
ಇದನ್ನೂ ಓದಿ: ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣ : ಪುನೀತ್ ಕೆರೆಹಳ್ಳಿ ಬಂಧಿಸಲು ನಾಲ್ಕು ತಂಡಗಳ ರಚನೆ
“ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಎಂಬುವ ಪದ ಬಳಿಸಿರುವುದೇ ಅತ್ಯಂತ ಕಾನೂನು ವಿರೋಧಿ ಕೃತ್ಯ ಆತನ ಹೇಳಿಕೆಯ ಹಿನ್ನೆಲೆಯಲ್ಲಿ ಈ ಕೂಡಲೇ ಪ್ರಕರಣ ದಾಖಲಿಸಿಕೊಂಡು ಅವನಿಗೆ ಬೆಂಬಲ ವ್ಯಕ್ತಪಡಿಸಿರುವ ವ್ಯಕ್ತಿಗಳ ವಿರುದ್ಧವೂ ತನಿಖ ನಡೆಸಬೇಕು ” ಎಂದು ದೂರಿನಲ್ಲಿ ತಿಳಿಸಲಾಗಿದೆ” ಎಂದು ವರದಿಯಾಗಿದೆ.
ವೀಡಿಯೋದಲ್ಲಿ ಏನಿದೆ?
ಪುನೀತ್ ಕೆರೆಹಳ್ಳಿ ರಾಜ್ಯ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಂದರ್ಭದಲ್ಲಿ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ತನ್ನ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದ ಪುತ್ತೂರು ಪುತ್ತಿಲ ಅವರ ನಿಯೋಗದೊಂದಿಗೆ ಮಾತನಾಡುತ್ತಿದ್ದ ಪುನೀತ್ ಕೆರೆಹಳ್ಳಿ “ನಾನು ನಿಮಗೆ ನಿಮ್ಮ ತಮ್ಮನಾಗಿ ಬೇಕು ಅಂದ್ರೆ ಕಾಂಗ್ರೆಸ್ ಸರ್ಕಾರದ ಯಾವುದಾದರೂ ಪ್ರತಿನಿಧಿ ನನ್ನನ್ನು ಭೇಟಿಯಾಗಿ, ನನ್ನ ಮನವಿಯನ್ನು ಸ್ವೀಕರಿಸಬೇಕು ಅವರು ಬರದೇ ಇದ್ದರೆ ಬಸ್ಸಿಗೆ ಬೆಂಕಿ ಹಾಕುವ…ಪೊಲೀಸರನ್ನು ಜಾಗ ಬಿಡಲಿಕ್ಕೆ ಹೇಳಿ, ನಾನು ಹೋಗ್ತೇನೆ ನನ್ನನ್ನು ಇಲ್ಲಿಂದ ಬಿಡುಗಡೆಗೊಳಿಸಿದರೆ ಮತ್ತೆ ಸತ್ಯಾಗ್ರಹ ಏಕೆ ಮಾಡಲಿ? ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ದಾಖಲಾಗಿದೆ.
"ವಿಧಾನಸೌಧಕ್ಕೇ ಕಲ್ಲು ಹೊಡೆಯುತ್ತಾನೆ ಬಿಡಿ ನನ್ನ" ಎಂದು ಹುಚ್ಚಾಟ ಮುಂದುವರೆಸಿದ ಪುನೀತ್ ಕೆರೆಹಳ್ಳಿ https://t.co/Z5ujApj0R7 pic.twitter.com/iEX2s1F0dT
— 👑Che_ಕೃಷ್ಣ🇮🇳💛❤️ (@ChekrishnaCk) October 5, 2023
ಈ ಹಿಂದೆ ಮಂಡ್ಯದ ಇದ್ರೀಸ್ ಪಾಷಾ ಎಂಬ ವ್ಯಕ್ತಿಯನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿದ ಆರೋಪ ಮತ್ತು ಇನ್ನಿತರ ಪ್ರಕರಣಗಳು ಸೇರಿದಂತೆ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿತ್ತು.
ತನ್ನನ್ನು ಬಂಧಿಸಿರುವುದು ಆರೋಪಿಸಿ ಪುನೀತ್ ಕೆರೆಹಳ್ಳಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದು, ಇದರ ವಿಚಾರಣೆಗಾಗಿ ರಾಜ್ಯ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ್ದ ಸಮಿತಿ, ‘ಬಂಧಿತ ಪುನೀತ್ ಕೆರೆಹಳ್ಳಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ’ ಎಂದು ಅಭಿಪ್ರಾಯಪಟ್ಟಿದ್ದು, ವರದಿಯನ್ನು ಸೆ.13ರಂದು ಸರ್ಕಾರಕ್ಕೆ ಸಲ್ಲಿಸಿತ್ತು. ವರದಿ ಅನ್ವಯ ಪುನಿತ್ ಕರೆಹಳ್ಳಿಯ್ನು ಬಿಡಗಡೆಮಾಡಲಾಗಿತ್ತು.
ವಿಡಿಯೋ ನೋಡಿ: “ಕೊನೆಯ ಹೀರೋಗಳು” ದಾಖಲೆಗಳಲ್ಲಿ ಇಲ್ಲದಿರುವ ಅಸಂಖ್ಯಾತ ಸ್ವಾತಂತ್ರ್ಯ ಯೋಧರಿಗೆ ದನಿಯಾದ ಪುಸ್ತಕ