ಪುಣೆಯ ಫ್ಯಾಶನ್ ಸ್ಟ್ರೀಟ್ ನಲ್ಲಿ ಬೆಂಕಿ ಅವಗಡ 500 ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಪುಣೆ : ಮಹಾರಾಷ್ಟ್ರದ ಪುಣೆಯ ಫ್ಯಾಶನ್ ಸ್ಟ್ರೀಟ್ ಮಾರುಕಟ್ಟೆಯಲ್ಲಿ ಬೆಂಕಿ ಅವಗಡಕ್ಕೆ ಸುಮಾರು 500 ಕ್ಕೂ ಹೆಚ್ಚು ಅಂಗಡಿಗಳು ಬೆಂಕಿಯಲ್ಲಿ ಸುಟ್ಟುಹೋಗಿದ್ದು, ಯಾವುದೆ ಅಪಘಾತ ಸಂಭವಿಸಿಲ್ಲ ಎಂದು ಎಎನ್‌ಐ ವರದಿ ಮಾಡಿದೆ.

ನಿನ್ನೆ ರಾತ್ರಿ ಮಹಾರಾಷ್ಟ್ರದ ಪುಣೆಯ ಮಾರುಕಟ್ಟೆಯಲ್ಲಿ ಸಂಭವಿಸಿದ ಬೆಂಕಿ ಅವಗಡದಲ್ಲಿ 500 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟುಹೋಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಸುಮಾರು 16 ಅಗ್ನಿಶಾಮಕ ಟೆಂಡರ್‌ಗಳು ಮತ್ತು ಎರಡು ವಾಟರ್‌ ಟ್ಯಾಂಕರ್‌ಗಳು ಸ್ಥಳದಲ್ಲಿ ಬೆಂಕಿಯನ್ನು ನಂದಿಸುವ ಕಾರ್ಯಚರಣೆಯಲ್ಲಿ ತೊಡಗಿದ್ದವು ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

ಹೊತ್ತಿ ಉರಿಯುತ್ತಿರುವ ಬೆಂಕಿಯನ್ನು ನಂದಿಸಲು 10 ಅಧಿಕಾರಿಗಳು ಸೇರಿದಂತೆ 60 ಅಗ್ನಿಶಾಮಕ ಅಧಿಕಾರಿಗಳು ಕಾರ್ಯಚರಣೆ ನಡೆಸುತ್ತಿದ್ದು, ಮಧ್ಯರಾತ್ರಿ 1 ಗಂಟೆಗೆ ಬೆಂಕಿಯನ್ನು ನಿಯತ್ರಣಕ್ಕೆ ತರಲಾಯಿತು ಎಂದು ಪುಣೆ ಮಹಾನಗರ ಪಾಲಿಕೆಯ ಮುಖ್ಯ ಅಗ್ನಿಶಾಮಕ ಅಧಿಕಾರಿ ಪ್ರಶಾಂತ್ ರಾನ್‌ಪೈಸ್ ಹೇಳಿದ್ದಾರೆ.

ಎಂಜಿ ರಸ್ತೆಯಲ್ಲಿರುವ ಫ್ಯಾಶನ್ ಸ್ಟ್ರೀಟ್ ಪ್ರಸಿದ್ಧ `ವಿಂಡೋ ಶಾಪಿಂಗ್ ‘ತಾಣವಾಗಿದ್ದು, ಇದು ಉಡುಪುಗಳು, ಬೂಟುಗಳು, ಕನ್ನಡಕಗಳು ಮತ್ತು ಇತರ ಪರಿಕರಗಳನ್ನು ಮಾರಾಟ ಮಾಡುವ ಸಣ್ಣ ಮಳಿಗೆಗಳನ್ನು ಹೊಂದಿದೆ.

Donate Janashakthi Media

Leave a Reply

Your email address will not be published. Required fields are marked *