ನವದೆಹಲಿ: ಪಂಜಾಬ್‌ನ ಮತಗಳ ಎಣಿಕೆಯ ಪ್ರಕ್ರಿಯೆಯಲ್ಲಿ ಆರಂಭಿಕವಾಗಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ(ಎಎಪಿ) ಈಗಾಗಲೇ ಪ್ರಕಟಗೊಂಡಿದ್ದ ಚುನಾವಣೋತ್ತರ ಸಮೀಕ್ಷೆಯಂತೆಯೇ ಭಾರೀ ಮುನ್ನಡೆ ಸಾಧಿಸಿದೆ. ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷಕ್ಕೆ ಎರಡನೇ ಸ್ಥಾನಕ್ಕೆ ಕುಸಿದಿದ್ದು, ಅಕಾಲಿ ದಳ ಕಳಪೆ ಸಾಧನೆ ಮಾಡಿದೆ.
ಮಧ್ಯಾಹ್ನ 12:30 ರ ಹೊತ್ತಿಗೆ, ಒಟ್ಟು 117 ಸ್ಥಾನಗಳಲ್ಲಿ ಎಎಪಿ 90 ಹಾಗೂ ಕಾಂಗ್ರೆಸ್ 18 ರಲ್ಲಿ ಮುನ್ನಡೆ ಸಾಧಿಸಿದೆ. ಅಕಾಲಿದಳ 06 ಬಿಜೆಪಿ ಮತ್ತು ಮಿತ್ರಪಕ್ಷಗಳು 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
“ಪಂಜಾಬ್ ಕೇಜ್ರಿವಾಲ್ ಮಾದರಿಯ ಆಡಳಿತವನ್ನು ಸ್ವೀಕರಿಸಿದೆ” ಎಂದು ಎಎಪಿಯ ರಾಘವ್ ಚಡ್ಡಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.
ಪಂಜಾಬ್‌ನಲ್ಲಿ ಆಂತರಿಕ ಕಲಹದಿಂದಾಗಿ ಕಾಂಗ್ರೆಸ್ ತೊರೆದಿದ್ದ ಕ್ಯಾಪ್ಟನ್ ಅಮರೀಂದರ್ ಸಿಂಗ್ 1,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕ್ಯಾಪ್ಟನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅಧಿಕಾರಕ್ಕೇರಿದ ದಲಿತ ನಾಯಕ ಚರಣ್‌ಜಿತ್ ಸಿಂಗ್ ಚನ್ನಿ ಅವರು ಸ್ಪರ್ಧಿಸಿರುವ ಎರಡೂ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಅಮೃತಸರ ಪೂರ್ವದಲ್ಲಿ ನವಜೋತ್ ಸಿಂಗ್ ಸಿಧು ಹಿನ್ನಡೆ ಅನುಭವಿಸಿದ್ದಾರೆ. ಪ್ರಕಾಶ್ ಸಿಂಗ್ ಬಾದಲ್ ಅವರು ಸಹ ಹಿನ್ನಡೆಯಲ್ಲಿದ್ದಾರೆ.