ಕಾಂಗ್ರೆಸ್ ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ‘ಪ್ಯಾರಿ ದೀದಿ ಯೋಜನೆʼ ಜಾರಿಗೆ ತರುತ್ತೇವೆ: ಡಿಕೆ ಶಿವಕುಮಾರ್

ನವದೆಹಲಿ: ಕಾಂಗ್ರೆಸ್ ದೆಹಲಿಯಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಆರ್ಥಿಕ ನೆರವು ನೀಡುವ ‘ಪ್ಯಾರಿ ದೀದಿ ಯೋಜನೆ’ಯನ್ನು ಜಾರಿಗೆ ತರುತ್ತೇವೆ ಎಂದು ಕಾಂಗ್ರೆಸ್ ಸೋಮವಾರ ಘೋಷಿಸಿದೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಯೋಜನೆಯನ್ನು ಘೋಷಿಸಿದ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಮೊದಲ ಸಚಿವ ಸಂಪುಟದ ಸಭೆಯಲ್ಲೇ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.

‘ಇಂದು ನಾನು ಪ್ಯಾರಿ ದೀದಿ ಯೋಜನೆಗೆ ಚಾಲನೆ ನೀಡಲು ಇಲ್ಲಿಗೆ ಬಂದಿದ್ದೇನೆ. ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುವ ವಿಶ್ವಾಸವಿದೆ ಮತ್ತು ಹೊಸ ಸಚಿವ ಸಂಪುಟದ ಮೊದಲ ದಿನದಲ್ಲಿಯೇ ನಾವು ರಾಜಧಾನಿಯಲ್ಲಿರುವ ಪ್ರತಿ ಮಹಿಳೆಗೆ ತಿಂಗಳಿಗೆ 2,500 ರೂ. ಆರ್ಥಿಕ ನೆರವನ್ನು ನೀಡುವ ಯೋಜನೆಯನ್ನು ನಾವು ಜಾರಿಗೆ ತರುತ್ತೇವೆ’ ಎಂದು ಹೇಳಿದರು.

ಇದನ್ನೂ ಓದಿ : ಸಾರಿಗೆ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಅತ್ಯಂತ ಉತ್ತಮ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿಯಲ್ಲಿ ಚುನಾವಣೆ ನಡೆಯಲಿದೆ.ದೆಹಲಿ ಕಾಂಗ್ರೆಸ್‌ ಮುಖ್ಯಸ್ಮ ದೇವೇಂದ್ರ ಯಾದವ್, ಪಕ್ಷದ ದೆಹಲಿ ಉಸ್ತುವಾರಿ ಖಾಜಿ ವಿಜಾಮುದ್ದೀನ್‌ ಮತ್ತು ಇತರ ಹಿರಿಯ ನಾಯಕರು ಘೋಷಣೆಯ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಎಎಪಿ ಮತ್ತು ಕಾಂಗ್ರೆಸ್‌ ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದರೂ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಮತಿ ಇಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿವೆ. ಚುನಾವಣೆಯಲ್ಲಿ ಸತತ ನಾಲ್ಕನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿರುವ ಎಎಪಿ ಹಲವು ವಿಶೇಷ ಯೋಜನೆಗಳನ್ನು ಈಗಾಗಲೇ ಘೋಷಿಸಿದ. ಈ ಬೆನ್ನಲ್ಲೇ ಕಾಂಗ್ರೆಸ್ ಕೂಡ ಇದೀಗ ಹಲವು ಘೋಷಣೆಗಳನ್ನು ಮಾಡುತ್ತಿದೆ.

ಇದನ್ನೂ ನೋಡಿ : ವಕ್ಫ್ ಆಸ್ತಿ ಗೊಂದಲ: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ – ಸಿಎಂ Janashakthi Media

Donate Janashakthi Media

Leave a Reply

Your email address will not be published. Required fields are marked *