ವಾರ್ಡ್‌ಗಳ ಸಮಸ್ಯೆ ಬಗ್ಗೆ ದೂರು ನೀಡಲು ಕ್ಯೂಆರ್ ಕೋಡ್ ಸೌಲಭ್ಯ ಜಾರಿ: ದರ್ಶನ್ ಧ್ರುವನಾರಾಯಣ

ನಂಜನಗೂಡು: ‘ರಾಜ್ಯದಲ್ಲಿ ಮೊದಲ ಬಾರಿಗೆ ನಗರಸಭೆ ವ್ಯಾಪ್ತಿಯ ವಾರ್ಡ್‌ಗಳ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಕ್ಯೂಆರ್ ಕೋಡ್ ಸೌಲಭ್ಯ ಜಾರಿ ತರಲಾಗಿತ್ತು. ಆ ಮೂಲಕ ಸಾಕಷ್ಟು ದೂರುಗಳು ಬಂದಿವೆ’ ಎಂದು ನಗರದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಡಿಸೆಂಬರ್‌ 22ರಂದು ನಗರಸಭೆಯ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

‘ನಾಗರಿಕರ ಸಮಸ್ಯೆಗಳಿಗೆ ನಿಮ್ಮ ವ್ಯಾಪ್ತಿಯಲ್ಲಿಯೇ ತುರ್ತಾಗಿ ಪರಿಹಾರ ನೀಡಲಾಗಿದೆ. ಪ್ರಮುಖ ಸಮಸ್ಯೆಗಳ ಇತ್ಯರ್ಥಕ್ಕೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ನಗರಸಭೆ ಸೇವೆಗಳ ಮಾಹಿತಿ ಹಾಗೂ ವಾರ್ಡ್ ಸಮಸ್ಯೆಗಳ ಬಗ್ಗೆ ದೂರು ನೀಡಲು ಪ್ರತಿ ವಾರ್ಡ್‌ಗಳಲ್ಲಿ ಕ್ಯೂಆರ್ ಕೋಡ್ ಫಲಕ ಹಾಕಿಸಿದ್ದು, ಈ ಸೌಲಭ್ಯ ಸಾಕಷ್ಟು ಅನುಕೂಲಕರವಾಗಿದೆ’ ಎಂದರು.

ಇದನ್ನೂ ಓದಿ: ಕೊಡೈನ್ ಮಿಶ್ರಿತ ಕೆಮ್ಮಿನ ಸಿರಪ್‌ ಅಕ್ರಮ ವ್ಯಾಪಾರ: 6 ಮಂದಿ ಬಂಧನ

‘ಜನರ ಸೇವೆ ಮಾಡದೆ ಕಾಲಹರಣ ಮಾಡುತ್ತಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯವೈಖರಿಯಲ್ಲಿ ಬದಲಾವಣೆ ತಂದಿದೆ, ನಗರಸಭೆ ಸೇವೆಗಳಲ್ಲಿ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ತುರ್ತಾಗಿ ಕ್ಯೂಆರ್ ಕೋಡ್ ಬಳಸಿ ಮೇಲಾಧಿಕಾರಿಗಳ ಗಮನಕ್ಕೆ ತರಬಹುದು. ತಕ್ಷಣ ಸಮಸ್ಯೆಗೆ ಪರಿಹಾರವನ್ನು ಕೂಡ ಕಂಡುಕೊಳ್ಳಬಹುದು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಆಯುಕ್ತ ಬಸವರಾಜು, ಎಇಇ ಮಹೇಶ್ ಕುಮಾರ್ ಉಪಸ್ಥಿತರಿದ್ದರು.

ಇದನ್ನೂ ನೋಡಿ: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳ ಸ್ಥಿತಿಗತಿಯೇನು ಸಚಿವರೇ? Janashakthi Media

Donate Janashakthi Media

Leave a Reply

Your email address will not be published. Required fields are marked *