ಕರ್ನಾಟಕ ಸಾರಿಗೆ ಸಂಸ್ಥೆ: ಕೆಎಸ್‌ಆರ್ಟಿಸಿ  ಬಸ್ಸ್‌ಗಳಲ್ಲಿ ಇನ್ನು ಮುಂದೆ ಕ್ಯೂಆರ್‌ ಟಿಕೆಟ್ ಲಭ್ಯ

Please follow and like us:
ಬೆಂಗಳೂರು : ಇನ್ನು ಮುಂದೆ ಕೆಎಸ್‌ಆರ್ಟಿಸಿ  ಬಸ್ಸ್‌ಗಳಲ್ಲಿ ಕ್ಯೂಆರ್‌ ಟಿಕೆಟ್ ಲಭ್ಯವಿದ್ದು, ಯುಪಿಐನಲ್ಲಿ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕರ್ನಾಟಕ ಸಾರಿಗೆ ಸಂಸ್ಥೆ ಕಲ್ಪಿಸಿದೆ.

ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯಬೇಕಿದ್ದು ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್‌ಆರ್ಟಿಸಿಯು ಇನ್ನು ಮುಂದೆ ಬಸ್ಸ್‌ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.

ಇದನ್ನೂ ಓದಿ : ಪಾದಚಾರಿಯ ಮೇಲೆ ಹರಿದ ನೀರಿನ ಟ್ರ್ಯಾಕ್ಟರ್; ಸ್ಥಳದಲ್ಲೆ ವ್ಯಕ್ತಿ ಸಾವು

ಹೌದು ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ಕಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ

ಆನ್ನೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ವೇ, ಫೋನ್ ವೇ. ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ.

ಮುಂದಿನ ದಿನಗಳಲ್ಲಿ ಎಟಿಎಂ ಡೆಬಿಟ್ ಕಾರ್ಡ್‌ ಕ್ರೆಡಿಟ್ ಕಾರ್ಡ್‌ಗಳಲ್ಲೂ ಹಣ ಸ್ವೀಕರಿಸಲಾಗುತ್ತದೆ ಎಂದು ಕೆಎಸ್‌ಆರ್ಟಿಸಿ  ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ನೋಡಿ : ನೋವು ಮೆಟ್ಟಿ ಬದುಕು ಕಟ್ಟಿಕೊಳ್ಳೊಣ – ಪಪ್ಪೆಟ್ ಜಾನು ಜೊತೆ ಮಾತುಕತೆ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *