ನವದೆಹಲಿ: ಹಿರಿಯ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ಇಂದು ಪುಣೆಯಲ್ಲಿ ನಿಧನ ಶನಿವಾರ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಹೃದಯದ ಸಮಸ್ಯೆ ಹಾಗೂ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ಒಂದು ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗ್ಯೂ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾಗಿ ಬಜಾಜ್ ಸಮೂಹದ ಮೂಲಗಳು ತಿಳಿಸಿವೆ.
ರಾಹುಲ್ ಬಜಾಜ್ ಅವರು 1938ರಲ್ಲಿ ಕೋಲ್ಕತ್ತದಲ್ಲಿ ಜನಿಸಿದ್ದರು. ರಾಹುಲ್ ಬಜಾಜ್ 1965ರಲ್ಲಿ ಬಜಾಜ್ ಗ್ರೂಪ್ನ ಜವಾಬ್ದಾರಿ ವಹಿಸಿಕೊಂಡಿದ್ದರು. ಅವರ ಆಡಳಿತದಲ್ಲಿ ಕಂಪನಿಯು ದೇಶದ ಅತಿದೊಡ್ಡ ಕಂಪನಿಗಳಲ್ಲಿ ಒಂದಾಗಿ ಹೊರಹೊಮ್ಮಿತ್ತು.
ಉದ್ಯಮ ಕ್ಷೇತ್ರದಲ್ಲಿ ರಾಹುಲ್ ಬಜಾಜ್ ಅವರ ಸಾಧನೆ ಗುರುತಿಸಿ ಭಾರತ ಸರ್ಕಾರವು ಅವರಿಗೆ ಪದ್ಮಭೂಷಣ ನೀಡಿ ಗೌರವಿಸಿತ್ತು.