ಬೆಂಗಳೂರು: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ನಾಳೆ ಸಂಸದ ರಾಹುಲ್ ಗಾಂಧಿ ಹಾಜರಾಗಲಿದ್ದಾರೆ ಎನ್ನಲಾಗಿದೆ. ಬಿಜೆಪಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗಾಗಿ ರಾಹುಲ್ ಗಾಂಧಿ ಕೋರ್ಟ್‌ಗೆ ಹಾಜರಾಗಲಿದ್ದಾರೆ.
ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪದ ಜಾಹೀರಾತುಗಳನ್ನು ಕಾಂಗ್ರೆಸ್ ಪ್ರಕಟಿಸಿತ್ತು. ಇದರ ವಿರುದ್ಧ ಬಿಜೆಪಿಯ ಕರ್ನಾಟಕ ಘಟಕ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ಬೆಂಗಳೂರಿನ
ಇದನ್ನೂ ಓದಿ: ಮೋದಿಯವರಿಗೆ ಎಂತಹ ಪರಿಸ್ಥಿತಿಯನ್ನೂ ನಿಭಾಯಿಸುವ ಮುತ್ಸದ್ದಿತನ ಇದೆ: ಬಸವರಾಜ ಬೊಮ್ಮಾಯಿ
ಈ ಪ್ರಕರಣದ ವಿಚಾರಣೆಗಾಗಿ ನಾಳೆ ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಜೂನ್ 1ರಂದು ನಡೆದ ವಿಚಾರಣೆಗೆ ರಾಹುಲ್ ಗಾಂಧಿ ಹಾಜರಾಗಿರಲಿಲ್ಲ. ಆ ದಿನ ವಿಚಾರಣೆಗೆ ಹಾಜರಾಗದೇ ಇರುವುದಕ್ಕೆ ವಿನಾಯಿತಿ ನೀಡಿದ್ದ ನ್ಯಾಯಾಲಯ, ಜೂನ್ 7 ರಂದು ಹಾಜರಾಗಬೇಕು ಎಂದು ಸೂಚನೆ ನೀಡಿತ್ತು.
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಜೂ.1ರಂದು ಜಾಮೀನು ಮಂಜೂರು ಮಾಡಿದ್ದ ವಿಶೇಷ ನ್ಯಾಯಾಲಯವು ಜೂನ್ 7 ರಂದು ರಾಹುಲ್ ಗಾಂಧಿಯನ್ನು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿತ್ತು. ರಾಹುಲ್ ಗಾಂಧಿ ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದಾರೆ.
ಇದನ್ನೂ ನೋಡಿ: ಲೋಕಮತ 2024|ಕರ್ನಾಟಕದ ನೂತನ ಸಂಸದರುJanashakthi Media