ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹಗೊಳಿಸಿ ಅಧಿಸೂಚನೆ

ವದೆಹಲಿ: -ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಗುಜರಾತ್‌ ರಾಜ್ಯದಲ್ಲಿನ ಸೂರತ್ ಕೋರ್ಟ್ ದೋಷಿ ಎಂದು ತೀರ್ಪು ನೀಡಿದ್ದು, ಎರಡು ವರ್ಷ ಶಿಕ್ಷೆ ವಿಧಿಸಿದೆ. ಇದರಿಂದಾಗಿ ರಾಹುಲ್‌ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹಗೊಳಿಸಲಾಗಿದೆ.

2019ರ ಲೋಕಸಭೆ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್‌ ಅವರು, ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ  ʻಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆʼ ಎಂದು ಪ್ರಶ್ನಿಸಿದ್ದರು.

ಇದನ್ನು ಓದಿ: ‘ಮೋದಿ’ ಉಪನಾಮಕ್ಕೆ ಅಪಮಾನ ಪ್ರಕರಣ: ರಾಹುಲ್ ಗಾಂಧಿ ತಪ್ಪಿತಸ್ಥ

ಈ ವಿಚಾರದಲ್ಲಿ ಗುಜರಾತ್‌ನಲ್ಲಿ ಪ್ರಕರಣ ದಾಖಲಾಗಿ ವಿಚಾರಣೆ ನಡೆಯಿತು. ನ್ಯಾಯಾಲಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿಯೆಂದು ತೀರ್ಪು ನೀಡಿದ್ದು, 2013ರ ಸುಪ್ರೀಂ ಕೋರ್ಟ್ ಆದೇಶದಂತೆ ಅವರ ಲೋಕಸಭೆ ಸದಸ್ಯತ್ವ ಅನರ್ಹಗೊಂಡಿದೆ.

ಲೋಕಸಭಾಧ್ಯಕ್ಷ ನಿಯಮಾನುಸಾರ ವಯನಾಡು ಸಂಸದ ಸ್ಥಾನದಿಂದ ರಾಹುಲ್‌ ಗಾಂಧಿ ಅವರನ್ನು ಅನರ್ಹಗೊಳಿಸಿಸಲಾಗಿದೆ. ಪ್ರಧಾನಿ ಮೋದಿ ಉಪನಾಮ ಹೇಳಿಕೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೊಳಗಾದ 24 ತಾಸಿನಲ್ಲಿ ಈ ಆದೇಶ ಪ್ರಕಟಗೊಂಡಿದ್ದು ಭಾರಿ ಸಂಚಲನ ಸೃಷ್ಠಿಸಿದೆ.

ಇದನ್ನು ಓದಿ: ಹಿಂದುತ್ವ ವಿರುದ್ಧದ ಪೋಸ್ಟ್ ಆರೋಪ : 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನಟ ಚೇತನ್‌

ನಿಗದಿತ ಕೆಲವು ಪ್ರಕರಣಗಳಲ್ಲಿ ಎರಡು ವರ್ಷದ ವರೆಗೆ ಶಿಕ್ಷೆಗೆ ಗುರಿಯಾದರೆ, ಸಂಸತ್‌ ಸದಸ್ಯರು (ಲೋಕಸಭೆ ಮತ್ತು ರಾಜ್ಯಸಭೆ) ಶಾಸಕರು (ವಿಧಾನಸಭೆ ಮತ್ತು ವಿಧಾನ ಪರಿಷತ್‌) ತಮ್ಮ ಸದನದ ಸದಸ್ಯತ್ವದಿಂದ ಅನರ್ಹಗೊಳ್ಳುತ್ತಾರೆ.

ಆರ್ಟಿಕಲ್ 102(1)(ಇ)ನ ನಿಬಂಧನೆಗಳ ಪ್ರಕಾರ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಭಾರತದ ಸಂವಿಧಾನವು 1951ರ ಪ್ರಜಾ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ 8 ರೊಂದಿಗೆ ಹೇಳಿರುವಂತೆ ಈ ಕ್ರಮವನ್ನು ಜಾರಿಗೊಳಿಸಲಾಗಿದೆ ಎಂದು ಲೋಕಸಭೆಯ ಕಾರ್ಯದರ್ಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವುದು ಫ್ಯಾಸಿಸ್ಟ್‌ ವಿಧಾನ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌

 

ತಿರುವನಂತಪುರ: ಪ್ರಜಾಪ್ರಭುತ್ವದ ಮೇಲೆ ಸಂಘಪರಿವಾರ ನಡೆಸುತ್ತಿರುವ ಹಿಂಸಾತ್ಮಕ ದಾಳಿಯ ಅತ್ಯಂತ ಹೊಸ ಅಧ್ಯಾಯವಾಗಿದೆ. ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಜನ ಸಾಮಾನ್ಯರಿಗೆ ಇಲ್ಲಿ ರಕ್ಷಣೆಯಿದೆಯೆ? ಬಿಜೆಪಿಯೂ ತನ್ನ ಅಧಿಕಾರ ಬಳಸಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವುದು ಫ್ಯಾಸಿಸ್ಟ್ ವಿಧಾನವಾಗಿದೆ ಎಂದು ಕೇರಳದ ಎಡರಂಗ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಪ್ರಶ್ನಿಸಿದ್ದಾರೆ.

ಪ್ರಕರಣವೊಂದರ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ತರಾತುರಿಯಲ್ಲಿ ರದ್ದುಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಿಣರಾಯಿ ವಿಜಯನ್‌ ಅವರು, ರಾಹುಲ್ ಗಾಂಧಿ ಅವರ ರಾಜಕೀಯ ಭಾಷಣದ ಆಧಾರದ ಮೇಲೆ ಪ್ರಕರಣ ದಾಖಲಿಸಿ, ನ್ಯಾಯಾಲಯದ ತೀರ್ಪು ಬಂದಿದ್ದು, ಅದರ ಆಧಾರದಲ್ಲಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ವಿರೋಧ ಪಕ್ಷದ ಪ್ರಮುಖ ನಾಯಕನ ಮೇಲೆಯೆ ಈ ರೀತಿಯಾಗಿ ದಾಳಿ ನಡೆಸಲಾಗಿದೆ ಎಂದಿದ್ದಾರೆ.

ಸಾಂವಿಧಾನಿಕ ಮೌಲ್ಯಗಳಿಗೆ ಬೆಲೆ ಎಲ್ಲಿದೆ?

ಬಿಜೆಪಿ ಪಕ್ಷದ ನೇತೃತ್ವದಲ್ಲಿ ಆಡಳಿತವಿರದ ರಾಜ್ಯಗಳಲ್ಲಿ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗ ಪಡಿಸಲಾಗುತ್ತಿದ್ದು ಆ ಮೂಲಕ ರಾಜಕೀಯ ಹಸ್ತಕ್ಷೇಪದಲ್ಲಿ ಬಳಸಲಾಗುತ್ತಿದೆ. ಮನೀಶ್ ಸಿಸೋಡಿಯಾ ಮತ್ತು ರಾಹುಲ್ ಗಾಂಧಿ ವಿರುದ್ಧದ ಪ್ರಕರಣಗಳಿಗೆ ದೆಹಲಿಯಲ್ಲಿ ವಿರೋಧ ವ್ಯಕ್ತಪಡಿಸಿದ ವಿರೋಧ ಪಕ್ಷದ ಸಂಸದರನ್ನು ಬಂಧಿಸಿರುವುದು ಕೂಡಾ ಇದರ ಇನ್ನೊಂದು ಭಾಗವಾಗಿದೆ ಎಂದು ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ಪೋಸ್ಟರ್‌ ಗಳನ್ನು ಅಂಟಿಸಿದ್ದಕ್ಕಾಗಿ ದೆಹಲಿಯಲ್ಲಿ ಗುಂಪು ಗುಂಪಾಗಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಕೇಂದ್ರ ಸರ್ಕಾರದ ಈ ಯಾವುದೇ ಕ್ರಮಗಳು ನಮ್ಮ ಪ್ರಜಾಸತ್ತಾತ್ಮಕ ಸಮಾಜ ಮತ್ತು ಸಂವಿಧಾನದ ಮೌಲ್ಯಗಳಿಗೆ ಹೊಂದಿಕೆಯಾಗುವುದಿಲ್ಲ ಎಂದಿದ್ದಾರೆ.

ಟೀಕೆಗಳ ಬಗ್ಗೆ ಇರುವ ತೀವ್ರ ಅಸಹಿಷ್ಣುತೆ ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯ ತಂದೊಡ್ಡುತ್ತಿದೆ. ರಾಹುಲ್ ಗಾಂಧಿ ಅವರ ವಿರುದ್ಧ ನಡೆದ ಕ್ರಮಗಳನ್ನು ಈ ಹಿನ್ನೆಲೆಯಲ್ಲಿ ನೋಡಬೇಕಾಗಿದ್ದು ಮತ್ತು ಈ ಕ್ರಮದ ವಿರುದ್ಧ ತೀವ್ರವಾಗಿ ಪ್ರತಿರೋಧಿಸಲು ಪ್ರಜಾಪ್ರಭುತ್ವವಾದಿಗಳು ಒಗ್ಗೂಡಿ ಮುಂದೆ ಬರಬೇಕಾಗಿದೆ ಎಂದು ಪಿಣರಾಯಿ ವಿಜಯನ್‌ ಅವರು ಕರೆ ನೀಡಿದ್ದಾರೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *