ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೆಪ್ಟೆಂಬರ್ನಲ್ಲಿ ಐದು ದಿನಗಳ ಕಾಲ ಯುರೋಪ್ ಪ್ರವಾಸ ಕೈಗೊಳ್ಳಲಿದ್ದು, ಪ್ಯಾರಿಸ್ನ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ಸೆಪ್ಟೆಂಬರ್ 7ರಂದು ಬ್ರಸೆಲ್ಸ್ನಲ್ಲಿ ಯುರೋಪಿಯನ್ ಯೂನಿಯನ್ ಸದಸ್ಯರ ಸಭೆಯಲ್ಲಿ ಭಾಗವಹಿಸಲಿದ್ದಾರೆ, ಸೆಪ್ಟೆಂಬರ್ 8ರಂದು ಪ್ಯಾರಿಸ್ನ ವಿಶ್ವವಿದ್ಯಾಲಯದಲ್ಲಿ ವಿದ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸೆಪ್ಟೆಂಬರ್ 9ರಂದು ಫ್ರಾನ್ಸ್ನ ಕಾರ್ಮಿಕ ಒಕ್ಕೂಟದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 10 ರಂದು ನಾರ್ವೆಗೆ ಭೇಟಿ ನೀಡಲಿರುವ ಅವರು ರಾಹುಲ್ ಗಾಂಧಿ ಅಲ್ಲಿ ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಲಡಾಖ್ ಪ್ರವಾಸ: ಖರ್ದುಂಗ್ ಲಾಗೆ ಭೇಟಿ ನೀಡಿದ ರಾಹುಲ್ ಗಾಂಧಿ
ಈ ಸಂದರ್ಭ ಅನಿವಾಸಿ ಭಾರತೀಯರನ್ನು ಭೇಟಿ ಮಾಡಲಿರುವ ರಾಹುಲ್ ಗಾಂಧಿ ಅವರೊಂದಿಗೆ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ.