ನವದೆಹಲಿ: ಉದ್ಯಮಿ ಗೌತಮ್ ಅದಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಶುಕ್ರವಾರ) ಸಹ ವಿಪಕ್ಷಗಳ ನಾಯಕರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಉದ್ಯಮಿ
‘ಮೋದಿ-ಅದಾನಿ ಭಾಯ್ ಭಾಯ್’ ಎಂದು ಬರೆದಿರುವ ಕಪ್ಪು ಮಾಸ್ಕ್ ಧರಿಸಿ ವಿಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೌತಮ್ ಅದಾನಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಇದನ್ನೂ ಓದಿ : ಎಂಎಸ್ಪಿ ಖಾತರಿ ಕಾನೂನು ಜಾರಿಗೆ ರೈತರ ಪ್ರತಿಭಟನೆ: ಇಂದು (ಶುಕ್ರವಾರ) ಮಧ್ಯಾಹ್ನ 1 ಗಂಟೆಗೆ ದೆಹಲಿಗೆ ಪಾದಯಾತ್ರೆ
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಯನಾಡು ಲೋಕಸಭಾ ಕ್ಷೇತ್ರದ ಸಂಸದೆ, ಸಹೋದರಿ ಪ್ರಿಯಾಂಕಾ ಗಾಂಧಿ ಸಂವಿಧಾನದ ಪ್ರತಿ ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದರು. ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳಾದ ಅರ್ಜೆಡಿ, ಜೆಎಂಎಂ ಸಂಸದರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.ಆದರೆ ಟಿಎಂಸಿ ಹಾಗೂ ಸಮಾಜವಾದಿ ಪಕ್ಷದ ಸದಸ್ಯರು ಪ್ರತಿಭಟನೆಯಿಂದ ದೂರವುಳಿದರು.
ನಂತರ ಪ್ರತಿಕ್ರಿಯಿಸಿದ ಪ್ರಿಯಾಂಕಾ, ‘ಅದಾನಿ ಪ್ರಕರಣದಲ್ಲಿ ಚರ್ಚೆ ನಡೆಸಲು ಪ್ರಧಾನಿ ಮೋದಿ ಹೆದರುತ್ತಾರೆ’ ಎಂದು ಆರೋಪಿಸಿದ್ದಾರೆ.
ಗುರುವಾರ ‘ಮೋದಿ ಅದಾನಿ ಏಕ್ ಹೈ’, ‘ಅದಾನಿ ಸೇಫ್ ಹೈ’ ಎಂದು ಬರೆದಿರುವ ಜಾಕೆಟ್ ಧರಿಸಿ ವಿಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿದ್ದರು. ಅದಾನಿ ಪ್ರಕರಣದ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸಿದ್ದಾರೆ.
ಇದನ್ನೂ ನೋಡಿ : ಒಂದು ದೇಶ, ಒಂದು ಚುನಾವಣೆ | ಒಂದು… ಒಂದು.. ಎನ್ನುವುದರ ಹಿಂದೆ ದೇಶಕ್ಕೆ ಕಾದಿದೆ ಅಪಾಯ – ಡಾ.ಸಿದ್ದನಗೌಡ ಪಾಟೀಲ್