ಕೇರಳದ ವಯನಾಡು ಕ್ಷೇತ್ರಕ್ಕೆ ಭೇಟಿ ನೀಡಲಿರುವ ರಾಹುಲ್‌ ಗಾಂಧಿ

ನವದೆಹಲಿ: ಆಗಸ್ಟ್‌ 12 ಹಾಗೂ 13ರಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ವಯನಾಡಿಗೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಮಂಗಳವಾರ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ರದ್ದುಪಡಿಸಿದ ಬಳಿಕ ರಾಹಲ್‌ ತಮ್ಮ ಕ್ಷೇತ್ರಕ್ಕೆ ನೀಡುತ್ತಿರುವ ಪ್ರಥಮ ಭೇಟಿ ಇದಾಗಿದೆ.

ಕೇರಳದ ವಯನಾಡು ಕ್ಷೇತ್ರದಿಂದ ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಲೋಕಸಭೆಗೆ ಆಯ್ಕೆಯಾಗಿದ್ದರು

ಪಕ್ಷದ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ಪ್ರಜಾಪ್ರಭುತ್ವದ ಗೆಲುವನ್ನು ವಯನಾಡಿನ ಜನತೆ ಸಂಭ್ರಮಿಸುತ್ತಿದ್ದಾರೆ.ಅವರ ಧ್ವನಿ ಮತ್ತೆ ಸಂಸತ್ತಿನಲ್ಲಿ ಮರುಕಳಿಸಲಿದೆ.ರಾಹುಲ್‌ ಕೇವಲ ಸಂಸದ ಮಾತ್ರವಲ್ಲ ಕುಟುಂಬದ ಸದ್ಯಸರಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ನಾಳೆಯಿಂದ ಲೋಕಸಭೆಯಲ್ಲಿ ಅವಿಶ್ವಾಸ ಚರ್ಚೆ : ರಾಹುಲ್‌ ಗಾಂಧಿ ಭಾಷಣ

ಸೂರತ್‌ ನ್ಯಾಯಾಲಯವು ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ ಗಾಂಧಿ ತಪ್ಪಿತಸ್ಥ ಎಂದು ಆದೇಶಿಸಿ ಮಾರ್ಚ್‌ 23ರಂದು 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.ಇದರ ಬೆನ್ನಲ್ಲೇ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡಿದ್ದರು.

ರಾಹುಲ್‌ ಗಾಂಧಿ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಲೇರಿದ್ದರು.ಬಳಿಕ ಸೂರತ್‌ ನ್ಯಾಯಾಲಯ ನೀಡಿರುವ ತೀರ್ಪಿಗೆ ಸುಪ್ರೀಂ ಕೋರ್ಟ್‌ ತಡೆ ನೀಡಿತ್ತು.

Donate Janashakthi Media

Leave a Reply

Your email address will not be published. Required fields are marked *