ಪುಣೆ : ಹಿಂದುತ್ವ ಸಿದ್ಧಾಂತವಾದಿ ಸಾವರ್ಕರ್ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರ ಮೇಲೆ ಮಾನನಷ್ಟ ಮೊಕದ್ದಮೆ ಪ್ರಕರಣ ದಾಕಲಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 19 ರಂದು ಪುಣೆಯ ನ್ಯಾಯಾಲಯದ ಮುಂದೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸೂಚಿಸಿದೆ.
ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಅಕ್ಷಿ ಜೈನ್ ಗುರುವಾರ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 2023 ರಲ್ಲಿ “ಲಂಡನ್‌ನಲ್ಲಿರುವ ಭಾರತೀಯ ಡಯಾಸ್ಪೊರಾ” ದಲ್ಲಿ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಸಾವರ್ಕರ್ ಕುರಿತು ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂದು ವಿಚಾರಣೆಯಲ್ಲಿ ಪುಣೆ ನಗರ ಪೊಲೀಸರು ತಿಳಿಸಿದ್ದಾರೆ.
ಈ ವಿಚಾರವಾಗಿ ರಾಹುಲ್ ಗಾಂಧಿ ವಿರುದ್ಧ ಸಾವರ್ಕರ್ ಅವರ ಸಂಬಂಧಿಕರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಪೊಲೀಸರು ಮೇ 27 ರಂದು ತನಿಖಾ ವರದಿಯನ್ನು ಪುಣೆಯ ಜೆಎಂಎಫ್‌ಸಿ ಅಕ್ಷಿ ಜೈನ್ ಅವರ ಮುಂದೆ ಸಲ್ಲಿಸಿದ್ದಾರೆ.
ಪೊಲೀಸರು ಸಲ್ಲಿಸಿದ ತನಿಖಾ ವರದಿ ಮತ್ತು ಸಾಕ್ಷಿಗಳ ಹೇಳಿಕೆಯನ್ನು ಪರಿಗಣಿಸಿ, ಜೆಎಂಎಫ್‌ಸಿ ನ್ಯಾಯಾಲಯವು ರಾಹುಲ್ ಗಾಂಧಿ ಅವರನ್ನು ಆಗಸ್ಟ್ 19 ರಂದು ತನ್ನ ಮುಂದೆ ಹಾಜರಾಗುವಂತೆ ಆದೇಶಿಸಿದೆ ಎಂದು ಈ ಪ್ರಕರಣದ ದೂರುದಾರ ಸತ್ಯಕಿ ಸಾವರ್ಕರ್ ಪರ ವಕೀಲ ಸಂಗ್ರಾಮ್ ಕೊಲ್ಹಟ್ಕರ್ ಹೇಳಿದರು.
ಇದನ್ನು ಓದಿ : ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ರದ್ದು ಮಾಡುವಂತೆ ಕೋರ್ಟ್ ಮೊರೆ ಹೋದ ಎಸ್‌ಐಟಿ
ಸಾತ್ಯಕಿ ಸಾವರ್ಕರ್ ಅವರ ಮೊಮ್ಮಗ. ಕಳೆದ ವರ್ಷ ಏಪ್ರಿಲ್‌ನಲ್ಲಿ, ಮಾರ್ಚ್ 5, 2023 ರಂದು ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಹುಲ್ ಗಾಂಧಿಯವರು ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ನಂತರ ಸತ್ಯಕಿ ಪುಣೆಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.
ದೂರಿನ ಜೊತೆಗೆ, ಸತ್ಯಕಿ ಅವರು ಕೆಲವು ಸುದ್ದಿ ವರದಿಗಳನ್ನು ಮತ್ತು ಲಂಡನ್‌ನಲ್ಲಿ ಗಾಂಧಿಯವರ ಭಾಷಣದ ವೀಡಿಯೊದ ಯೂಟ್ಯೂಬ್ ಲಿಂಕ್ ಅನ್ನು ಸಾಕ್ಷಿಯಾಗಿ ಸಲ್ಲಿಸಿದ್ದರು.
ರಾಹುಲ್ ಗಾಂಧಿ ಲಂಡನ್‌ನಲ್ಲಿ, ʼಸಾವರ್ಕರ್ ಮತ್ತು ಅವರ ಐದಾರು ಜನ ಸ್ನೇಹಿತರು ಸೇರಿ ಮುಸ್ಲಿಮನನ್ನು ಥಳಿಸಿ , ಅದರಿಂದ ಖುಷಿ ಪಡುದ್ದರು ಎನ್ನುವ ಸಲುಗಳನ್ನು ತಮ್ಮ ಪುಸ್ತಕದಲ್ಲಿ ಬರೆದುಕೊಂಡಿದ್ದಾರೆʼ ಎಂಬ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಲಾಗಿದೆ.
“ಇದು ಹೇಡಿತನದ ಕೃತ್ಯವಲ್ಲವೇ ಎಂದು ರಾಹುಲ್ ಗಾಂಧಿ ಕೇಳಿದ್ದಾರೆ, ಆದರೆ ರಾಹುಲ್ ಗಾಂಧಿ ಹೇಳಿಕೊಳ್ಳುವಂತಹ ಯಾವುದೇ ಪುಸ್ತಕವನ್ನು ಸಾವರ್ಕರ್ ಬರೆದಿಲ್ಲ ಅಥವಾ ಅಂತಹ ಘಟನೆ ನಡೆದಿಲ್ಲ. ಹೀಗಾಗಿ ಪುಣೆ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಸಾತ್ಯಕಿ ಹೇಳಿದ್ದಾರೆ.
“ರಾಹುಲ್ ಗಾಂಧಿ, ಸಾವರ್ಕರ್ ಹೆಸರನ್ನು ಹಾಳು ಮಾಡಲು ಹೊರಟಿದ್ದಾರೆ, ಈ ಕಾರನದಿಂದಲೇ ಇಂತಹ ಅವಹೇಲನಕಾರಿ ಹೇಳಿಕೆ ನೀಡಿದ್ದಾರೆʼ ಎಂದು ಸಾತ್ಯಕಿ ಅವರು ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 500 (ಮಾನನಷ್ಟಕ್ಕೆ ಶಿಕ್ಷೆ) ಅಡಿಯಲ್ಲಿ ಆರೋಪಿಗಳಿಗೆ ಗರಿಷ್ಠ ಶಿಕ್ಷೆಯನ್ನು ವಿಧಿಸಬೇಕೆಂದು ಸತ್ಯಕಿ ಒತ್ತಾಯಿಸಿದ್ದಾರೆ. “ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 357 (ಪರಿಹಾರ ಪಾವತಿಸಲು ಆದೇಶ) ಪ್ರಕಾರ ಆರೋಪಿಯ ಮೇಲೆ ಗರಿಷ್ಠ ಪರಿಹಾರ ನೀಡುವಂತಹ ಶಿಕ್ಷೆ ವಿಧಿಸಬೇಕು” ಸಾತ್ಯಕಿ ಎಂದು ಹೇಳಿದ್ದಾರೆ.
ಇದನ್ನು ನೋಡಿ : ಹಾಸನ ಚಲೋ | ಪ್ರಜ್ವಲ್ ರೇವಣ್ಣನನ್ನು ಬಂಧಿಸಿ – ಸಹಸ್ರಾರು ಜನರ ಹಕ್ಕೋತ್ತಾಯJanashakthi Media