ಹೈದಾರಾಬಾದ್: ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ವಿಜಯ ಭೇರಿ ಯಾತ್ರೆ ಹಮ್ಮಿಕೊಂಡಿದ್ದು, ಗುರುವಾರ ರಾಹುಲ್ ಗಾಂಧಿ ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.
ಇದನ್ನೂ ಓದಿ:ಮಣಿಪುರಕ್ಕಿಂತ ಇಸ್ರೇಲ್ ಬಗ್ಗೆ ಪ್ರಧಾನಿ ಮೋದಿಗೆ ಹೆಚ್ಚು ಕಾಳಜಿ : ರಾಹುಲ್ ಗಾಂಧಿ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ತೆಲಂಗಾಣ ಕಾಂಗ್ರೆಸ್, ಬುಧವಾರದಿಂದ ಆರಂಭವಾಗಿರುವ ಮೂರು ದಿನಗಳ ವಿಜಯ ಭೇರಿ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪೆದ್ದಪೆಲ್ಲಿ ಮತ್ತು ಕರೀಮ್‌ನಗರ ರ‍್ಯಾಲಿಯಲ್ಲಿ ಭಾಗವಹಿಸಿ, ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹೇಳಿದೆ.
ಇಲ್ಲಿನ ಕರೀಮ್‌ನಗರದ ಹೌಸಿಂಗ್ ಬೋರ್ಡ್‌ನಿಂದ ರಾಜೀವ್ ಚೌಕದ ಸರ್ಕಲ್‌ವರೆಗೂ ಪಾದಯಾತ್ರೆ ಕೈಗೊಂಡು ನಂತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ತಿಳಿದಿದೆ.
ಬುಧವಾರ ಅಕ್ಟೋಬರ್-18 ನಡೆದ ವಿಜಯ ಭೇರಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಪ್ರಿಯಾಂಕ ಗಾಂಧಿ ವಾದ್ರಾ ಅವರು ಬಿಜೆಪಿ ಹಾಗೂ ಬಿಆರ್‌ಎಸ್ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಡಿಯೋ ನೋಡಿ:ಒಂದು ದೇಶ ಒಂದು ಚುನಾವಣೆ : ದೇಶದ ಭದ್ರತೆಯನ್ನು ನಾಶ ಮಾಡುವ ಪ್ರಸ್ತಾಪ – ಎ ನಾರಾಯಣ Janashakthi Media