ಹಿಂದಿಯಲ್ಲಿ : ಕರವೇ ಪ್ರತಿಭಟನೆ, ರಾಜ್ಯದ ಹಲವು ನಗರಗಳಲ್ಲಿ ಆಕ್ರೋಶ

ಬೆಂಗಳೂರು: ರೈಲ್ವೆ ಇಲಾಖೆಯ ಪದೋನ್ನತಿ ಪರೀಕ್ಷೆಯನ್ನು ಕನ್ನಡದ ಬದಲು ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ನಡೆಸಲು ಮುಂದಾಗಿರುವ ಕ್ರಮಕ್ಕೆ ವಿರೋಧವಾಗಿ ಕರ್ನಾಟಕದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಕನ್ನಡಪರ ಸಂಘಟನೆಗಳಾದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಈ ಕ್ರಮವನ್ನು ಖಂಡಿಸಿ ಬೆಂಗಳೂರು ಸೇರಿದಂತೆ ಹುಬ್ಬಳ್ಳಿ, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಹೋರಾಟಕ್ಕೆ ಕರೆ ನೀಡಿದೆ. ಸ್ಥಳೀಯ ಭಾಷೆಗೆ ಅವಕಾಶ ನೀಡದೇ ಪರೀಕ್ಷೆ ನಡೆಸುವುದು ಕನ್ನಡಿಗರ ವಿರುದ್ಧ ಅನ್ಯಾಯ ಎಂದು ಸಂಘಟನೆ ಆರೋಪಿಸಿದೆ.

ಈ ಪರೀಕ್ಷೆ ಗೂಡ್ಸ್‌ ಟ್ರೈನ್‌ ಮ್ಯಾನೇಜರ್‌ ಹುದ್ದೆಗಳಿಗೆ ಸಂಬಂಧಿಸಿದ್ದು, ಅಭ್ಯರ್ಥಿಗಳಿಗೆ ಕನ್ನಡದಲ್ಲಿ ಬರೆಯುವ ಅವಕಾಶ ಇಲ್ಲದಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಿಂದಿ–ಇಂಗ್ಲಿಷ್‌ ಮಾತ್ರ ಆಯ್ಕೆಯಾಗಿರುವುದು ಭಾಷಾ ಭೇದಭಾವಕ್ಕೆ ಉದಾಹರಣೆಯಾಗಿದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಇದನ್ನೂ ಓದಿ : ಪೆಟ್ರೋಲ್‌, ಡೀಸೆಲ್ ಬೆಲೆ: ಐದು ರಾಜ್ಯಗಳ ಚುನಾವಣೆ ಮುಗಿಯುವ ವರೆಗೂ ಬಚಾವ್?

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಕೆಲ ಕಡೆಗಳಲ್ಲಿ ಪರೀಕ್ಷೆ ಮುಂದೂಡಲಾಗಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕರವೇ ನಾಯಕರು, ಕನ್ನಡಕ್ಕೆ ಅವಕಾಶ ನೀಡದೇ ಪರೀಕ್ಷೆ ನಡೆಸಲು ಮುಂದಾದರೆ ಅದನ್ನು ತಡೆಯಲು ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವು ರಾಜ್ಯದಲ್ಲಿ ಭಾಷಾ ಹಕ್ಕುಗಳ ಕುರಿತ ಚರ್ಚೆಗೆ ಮತ್ತೊಮ್ಮೆ ಕಾರಣವಾಗಿದೆ.

ಇದನ್ನೂ ನೋಡಿ : ಓದು ಕಾರ್ಯಾಗಾರ | ವಿದ್ಯಾರ್ಥಿಗಳ ಕಣ್ಣಲ್ಲಿ ಕುವೆಂಪು Janashakthi Media

Donate Janashakthi Media

Leave a Reply

Your email address will not be published. Required fields are marked *