ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ: ಐಎಂಡಿ

ಬೆಂಗಳೂರು: ಮುಂದಿನ ಎರಡು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಬೀಳುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಮೇ 14 ಮತ್ತು ಮೇ.15 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ದಕ್ಷಿಣ ಒಳನಾಡಿನಲ್ಲೂ ಕೂಡ ಮೇ 15 ರಂದು ಮಳೆಯಾಗುವ ನಿರೀಕ್ಷೆಯಿದೆ.

ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಮೇ 14 ರಿಂದ 16 ರವರೆಗೆ ರಾಜ್ಯದ ಹಲವೆಡೆ ಆಲಿಕಲ್ಲು ಮಳೆ ಸಾಧ್ಯತೆಯಿದೆ.

ಇದನ್ನೂ ಓದಿ: 144 ಶಾಸಕರ ಬೆಂಬಲ: ವಿಶ್ವಾಸಮತ ಗೆದ್ದ ನೂತನ ಸಿಎಂ ವಿಜಯ್

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನಾಳೆ ದಾವಣಗೆರೆ, ವಿಜಯನಗರ, ಶಿವಮೊಗ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಂಜಿನ ಕಲ್ಲುಗಳು ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಈ ವಾರಾಂತ್ಯಕ್ಕೆ ಅಂಡಮಾನ್ ಪ್ರವೇಶಿಸಲಿದೆ. ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯ ನಿರೀಕ್ಷೆಯಿದೆ.

ಇದನ್ನೂ ನೋಡಿ: ಚುನಾವಣಾ ಫಲಿತಾಂಶ : ಹೆಚ್ಚಾದ ಹಿಂಸಾಚಾರ Janashakthi Media

Donate Janashakthi Media

Leave a Reply

Your email address will not be published. Required fields are marked *