ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಹಾಸನ, ಮೈಸೂರು ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ.

ಇದನ್ನೂ ಓದಿ : ಮಳೆಯಿಂದ ಜನ ಹೈರಾಣರಾಗಿದ್ದರೂ, ಹೋಟೆಲ್ ದೋಸೆ ಸವಿಯಲು ಆಹ್ವಾನಿಸುವ ಸಂಸದ ತೇಜಸ್ವಿ ಸೂರ್ಯ

ಇಂದು ಕೊಡಗು, ಬೀದರ್ ಕಲಬುರುಗಿ ರಾಯಚೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ2 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.

Donate Janashakthi Media

Leave a Reply

Your email address will not be published. Required fields are marked *