ಬೆಂಗಳೂರು: ದಕ್ಷಿಣ ಒಳನಾಡಿನ ಕೆಲವೆಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಕೊಡುಗು ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಹಾಗೂ ಒಳನಾಡಿನ ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಒಂದೆರಡು ಕಡೆ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಕಡಿಮೆ, ಕರಾವಳಿಯ ಒಂದೆರಡು ಕಡೆ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ಶನಿವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (38.2 ಡಿಗ್ರಿ ಸೆಲ್ಸಿಯಸ್) ಹಾಗೂ ಧಾರವಾಡದಲ್ಲಿ ಕನಿಷ್ಠ ಉಷ್ಣಾಂಶ (15.6 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನೂ ಓದಿ : ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆ ಸಾಧ್ಯತೆ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ಹೇಳಿದೆ.