ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಬೆಂಗಳೂರು – ಕರಾವಳಿ ಸೇರಿ 12 ಜಿಲ್ಲೆಗಳಲ್ಲಿ ಮಳೆ ಸಾದ್ಯತೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ 

ಶನಿವಾರವೂ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಅರ್ಧ ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆಯಾಗಿದೆ. ಇನ್ನು ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದಾಗಿ, ದಕ್ಷಿಣ ಮಧ್ಯ ಮಹಾರಾಷ್ಟ್ರ, ತಮಿಳು ನಾಡು ಹಾಗೂ ಒಳನಾಡು ಕರ್ನಾಟಕದ ಮೂಲಕ ದಟ್ಟ ಮೋಡ (ಟ್ರಫ್)ವು ಹಾದುಹೋಗಿದೆ.

ಇಂದು ಎಲ್ಲೆಲ್ಲಿ ಮಳೆ ಸಾಧ್ಯತೆ?

ದಕ್ಷಿಣ ಕನ್ನಡ, ಉಡುಪಿಯಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಇರಲಿದೆ. ದಕ್ಷಿಣ ಕರ್ನಾಟಕದ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ಕೋಲಾರ, ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: ಶರಾವತಿ ಮುಳುಗಡೆ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಮಾ. 2ರಂದು ರಾಷ್ಟ್ರೀಯ ಹೆದ್ದಾರಿ ತಡೆ ಪ್ರತಿಭಟನೆ

ವಿಜಯನಗರ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಒಣ ಹವೆ ಇರಲಿದ್ದು, ಮಳೆಯಾಗುವ ಮುನ್ಸೂಚನೆ ಇಲ್ಲ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿಯೂ ಬಿಸಿಲು ವಾತಾವರಣ ಮುಂದುವರಿಯಲಿದೆ. ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಕರಾವಳಿಯ ಜಿಲ್ಲೆಗಳಲ್ಲಿ ಮಾತ್ರ ಕನಿಷ್ಠ ತಾಪಮಾನವು ಗಮನಾರ್ಹವಾಗಿ ಹೆಚ್ಚಾಗಿದೆ.

ನಾಳೆಯ ಹವಾಮಾನ

ಇನ್ನು ಇಂದು ಮಾತ್ರ ಮಳೆಯ ಮುನ್ಸೂಚನೆಯಿದ್ದು, ನಾಳೆಯಿಂದ ಫೆಬ್ರವರಿ 23 ರಿಂದ 28 ರವರೆಗೂ ಮತ್ತೆ ಬಿಸಿಲು, ಒಣಹವೆ ಮುಂದುವರಿಯಲಿದೆ.

ಬೆಂಗಳೂರು ವಾತಾವರಣ

ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಕೆಲವೆಡೆ ಬೆಳಗ್ಗೆ ಮಂಜು ಮುಸುಕುವ ಸಾಧ್ಯತೆ ಇದ್ದು, ಗರಿಷ್ಠ ತಾಪಮಾನ 31 ಡಿಗ್ರಿ ಸೆ, ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಇದನ್ನೂ ನೋಡಿ: ದಲಿತ ನೋವಿನ ಧ್ವನಿ – ಸಂಬಳಿಗೋಲು | ಪುಸ್ತಕ ಬಿಡುಗಡೆ Janashakthi Media

Donate Janashakthi Media

Leave a Reply

Your email address will not be published. Required fields are marked *