ರಾಜ್ಯದಲ್ಳಿ ಮಳೆ ಹೆಚ್ಚಾಗಿ 44,000 ಹೆಕ್ಟರ್ ಬೆಳೆ ಕೃಷಿ ಭೂಮಿಯಲ್ಲಿ ಹಾನಿಯಾಗಿದೆ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಳಿ ಮಳೆ ಹೆಚ್ಚಾಗಿ 44,000 ಹೆಕ್ಟರ್ ಬೆಳೆ ಕೃಷಿ ಭೂಮಿಯಲ್ಲಿ ಹಾನಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಹೆಕ್ಟರ್

ಅಥಣಿಯಲ್ಲಿ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು, ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ತಕ್ಷಣವೇ ಸರ್ವೇ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಡೆ ಶೇಕಡ 28ರಷ್ಟು ಮಳೆ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಹೆಚ್ಚಿನ ಮಳೆಯಾದ ಪರಿಣಾಮ ಕೃಷ್ಣಾ, ಮಲಪ್ರಭಾ, ಘಟಪ್ರಭಾ ಜೊತೆಗೆ ಅನೇಕ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ನದಿ ದಡದ ಗ್ರಾಮಗಳ ಸಾವಿರಾರು ಜನ ಕಾಳಜಿ ಕೇಂದ್ರಗಳಲ್ಲಿದ್ದಾರೆ.

ಇದನ್ನೂ ಓದಿ: ಧಾರಕಾರ ಮಳೆಯಿಂದಾಗಿ ಎಸ್ಕಾಂಗಳಿಗೆ ಒಟ್ಟಾರೆ 96.66 ಕೋಟಿ ರೂ. ನಷ್ಟ; ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ 64 ಕಾಳಜಿ ಕೇಂದ್ರ ಆರಂಭಿಸಿದ್ದು, 10,000ಕ್ಕೂ ಅಧಿಕ ಸಂತ್ರಸ್ತರು ಆಶ್ರಯ ಪಡೆದುಕೊಂಡಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ 800ಕ್ಕೂ ಅಧಿಕ ಮನೆಗಳು ಸಂಪೂರ್ಣ ಹಾನಿಯಾಗಿದ್ದು, 4000 ಮನೆಗಳು ಭಾಗಶಃ ಹಾನಿಯಾಗಿವೆ. ಇದುವರೆಗೆ 43 ಜನ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ನೋಡಿ: ಬುಲ್ಡೋಜರ್ ದಾಳಿJanashakthi Media

Donate Janashakthi Media

Leave a Reply

Your email address will not be published. Required fields are marked *