ರೈತ-ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ತಹಶಿಲ್ದಾರ್‌ ಕಛೇರಿ ಮುತ್ತಿಗೆ

ಕೋಲಾರ: ಕ್ವಿಟ್ ಇಂಡಿಯಾ ಚಳುವಳಿಯ ನೆನಪಿನ ಅಂಗವಾಗಿ ರೈತ ಕಾರ್ಮಿಕರ ಸಮಸ್ಯೆಗಳನ್ನು ಬಗೆಹರಿಸುವಂತೆ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದ ತಹಶಿಲ್ದಾರ್ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು.

ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರನ್ನು ಭಾರತ ಬಿಟ್ಟು ತೊಲಗುವಂತೆ ಐತಿಹಾಸಿಕ ಹೋರಾಟವನ್ನು ನಡೆಸಿದರು. ದೇಶದ ರೈತರ ಕಾರ್ಮಿಕರ ಕೃಷಿ ಕೂಲಿಕಾರರ ಸಮಸ್ಯೆಗಳನ್ನು ಬಗೆಹರಿಸಲು ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್‌), ಅಖಿಲ ಭಾರತ ಕೃಷಿ ಕೂಲಿಕಾರರ ಸಂಘಟನೆ(ಎಐಎಡಬ್ಲ್ಯೂಯು), ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌(ಸಿಐಟಿಯು) ಸಂಘಟನೆಗಳು ಜುಲೈ 25ರಿಂದ ದೇಶಾದ್ಯಂತ ಕೋಟ್ಯಾಂತರ ಜನರಿಗೆ ಜಾಗೃತಿ ಮೂಡಿಸಲಾಗಿದ್ದು ಅಂತಿಮವಾಗಿ ಈ ಪ್ರತಿಭಟನೆ ನಡೆಸುತ್ತಾ ಇದ್ದು ರೈತ ಕಾರ್ಮಿಕ ಜನ ವಿರೋಧಿ ನೀತಿಗಳನ್ನು ತರುವ ಬಿಜೆಪಿ ಸರಕಾರವನ್ನು ತೊಲಗಿಸಬೇಕಾಗಿದೆ ಎಂದು ಒತ್ತಾಯಿಸಿದರು.

ಕೇಂದ್ರದಲ್ಲಿ ಅಧಿಕಾರ ನಡೆಸುವ ಬಿಜೆಪಿ‌ ಸರಕಾರವು ಕಾರ್ಪೊರೇಟ್ ಸಂಸ್ಥೆಗಳ ಹಾಗೂ ಬಂಡವಾಳಶಾಹಿಗಳ ಹಿತಕಾಪಾಡುವ ಉದ್ದೇಶದಿಂದ ಅದಾನಿ-ಅಂಬಾನಿ ಕಂಪನಿಗಳಿಗೆ ಸರಕಾರದ ಸಂಸ್ಥೆಗಳನ್ನು ಒಪ್ಪಿಸಿದ್ದು ಕಾರ್ಪೊರೇಟ್ ಸಂಸ್ಥೆಗಳು ಯಾವತ್ತೂ ಬಡಜನರ ಪರವಾಗಿ ಕೆಲಸ ಮಾಡುವುದಿಲ್ಲ ಶ್ರೀಮಂತರ ಪರವಾದ ನೀತಿಗಳನ್ನು ತಂದು ಬಡವರನ್ನು ಬೀದಿಗೆ ತಳ್ಳುತ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಜನ ವಿರೋಧಿ ನೀತಿಗಳನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿ: ರೈತ-ಕೂಲಿಕಾರ-ಕಾರ್ಮಿಕರ ಸಮಸ್ಯೆ ಇತ್ಯರ್ಥ್ಯಕ್ಕಾಗಿ ಜಂಟಿ ಆಂದೋಲನ

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಸಂಹಿತೆಗಳು ಹಾಗೂ ಜನ ವಿರೋಧಿ ಕೃಷಿ ಕಾನೂನುಗಳು ಮತ್ತು ವಿದ್ಯುತ್ ತಿದ್ದುಪಡಿ ಮಸೂದೆಯನ್ನು ರದ್ದುಪಡಿಸಬೇಕು ರಾಜ್ಯ ಸರ್ಕಾರ ಶ್ರೀಮಂತರಿಗೆ ಅನುಕೂಲವಾಗುವಂತೆ ಭೂಸುಧಾರಣ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು, ಭೂಮಿ ಇಲ್ಲದ ಬಡವರು ಸಾಗುವಳಿ ಮಾಡುತ್ತಿರುವ ಸರ್ಕಾರಿ ಭೂಮಿಗೆ ಸಾಗುವಳಿ ಚೀಟಿನೀಡಿ ಸಕ್ರಮಗೊಳಿಸಬೇಕು ನಿವೇಶನ ರಹಿತರಿಗೆ ನಿವೇಶನ ವಸತಿ ಹಂಚಿಕೆ ಮಾಡಲು ಸಮಗ್ರ ಯೋಜನೆ ಯೊಂದನ್ನು ಘೋಷಣೆ ಮಾಡಬೇಕು‌ಎಂದು ಒತ್ತಾಯಿಸಿದರು

ರಾಜ್ಯ ಸರಕಾರ ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಜಾನುವಾರು ಹತ್ಯಾ ಕಾಯಿದೆಗಳ ಜನವಿರೋಧಿ ತಿದ್ದುಪಡಿಯನ್ನು ರಾಜ್ಯ ಸರ್ಕಾರ ವಾಪಸ್ಸು ಪಡೆಯಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಖಾದ್ಯ ತೈಲ ಇತ್ಯಾದಿ ಎಲ್ಲಾ ಅಗತ್ಯ ಸರಕುಗಳ ಬೆಲೆಯಲ್ಲಿ ಆಗಿರುವ ತೀವ್ರ ಏರಿಕೆಯನ್ನು ನಿವಾರಿಸಬೇಕು ಉದ್ಯೋಗ ಕಡಿತ ಅಥವಾ ವೇತನ ಕಡಿತ ಮಾಡಬಾರದು. ಕರೋನಾ ಪಿಡುಗಿನ ಅವಧಿಯಲ್ಲಿ ಆದ ಉದ್ಯೋಗ ಹಾಗೂ ವೇತನ ನಷ್ಟಕ್ಕೆ ಪರಿಹಾರ ನೀಡಬೇಕು. ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸಬೇಕು. ಸರ್ಕಾರಿ ಹಾಗೂ ಸಾರ್ವಜನಿಕ ಕ್ಷೇತ್ರದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದರು.

ಪ್ರತಿಭಟನೆಯ ನೇತೃತ್ವವನ್ನು ವಿವಿಧ ಸಂಘಟನೆಗಳ ಮುಖಂಡರಾದ ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ ವೆಂಕಟೇಶ್, ಅಬ್ಬಣಿ ಶಿವಪ್ಪ, ಕೆ.ಚಂದ್ರಾರೆಡ್ಡಿ, ಎನ್ ಎನ್ ಶ್ರೀರಾಮ್, ವಿಜಯಕೃಷ್ಣ, ಭೀಮರಾಜ್,ಆಶಾ, ವೆಂಕಟಲಕ್ಷಮ್ಮ, ಎಚ್.ಎಂ.ಯಲ್ಲಪ್ಪ, ವಿ.ನಾರಾಯಣರೆಡ್ಡಿ, ಪಿ.ವಿ ರಮಣ್, ಮಂಜುಳ, ಮುರಳಿಗೌಡ, ಆಲಹಳ್ಳಿ ವೆಂಕಟೇಶ್ ಮುಂತಾದವರು ವಹಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *