4.61 ಲಕ್ಷ ರೈತರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಬೆಳೆ ಪರಿಹಾರ ಹಣ ವಿತರಣೆ: ಸಚಿವ ಆರ್.‌ ಅಶೋಕ್

ಬೆಂಗಳೂರು: ಬೆಳೆ ಪರಿಹಾರದ ಮೊತ್ತವನ್ನು ಇಂದಿನವರೆಗೆ 3 ಲಕ್ಷ ರೈತರಿಗೆ 226.57 ಕೋಟಿ ಪರಿಹಾರ ವಿತರಿಸಿದ್ದೇವೆ. ಇಂದು 1.61 ರೈತರಿಗೆ 92.30 ಕೋಟಿ ಹಣ ಬಿಡುಗಡೆ ಮಾಡುತ್ತಿದ್ದೇವೆ. ಒಟ್ಟು 4.61 ರೈತರಿಗೆ 318.87 ಕೋಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಆಗಿದ್ದು, ಮಧ್ಯವರ್ತಿಗಳಿಗೆ ಯಾವುದೇ ಅವಕಾಶ ಸಿಗದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯಾದ್ಯಂತ ಸುರಿದ ಅಕಾಲಿಕ ಮಳೆಯಿಂದ ಅಪಾರ ಬೆಳೆ ಮತ್ತು ಆಸ್ತಿ ಹಾನಿ ಸಂಭವಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ತುಮಕೂರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆ ಪ್ರವಾಸ ನಡೆಸಿ ಪರಿಶೀಲನೆ ನಡೆಸಿ ಶೀಘ್ರ ಪರಿಹಾರ ವಿತರಿಸುವ ಭರವಸೆ ನೀಡಲಾಗಿದೆ ಎಂದು ತಿಳಿಸಿದರು.

ಮಧ್ಯವರ್ತಿಗಳಿಗೆ ಅವಕಾಶವಿಲ್ಲದಂತೆ ನೇರವಾಗಿ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಈ ಹಿಂದೆ ಮೂರು ತಿಂಗಳಿಗೊಮ್ಮೆ ಬೆಳೆ ಪರಿಹಾರ ವಿತರಿಸಲಾಗುತ್ತಿತ್ತು. ಈಗ ಈ ವ್ಯವಸ್ಥೆಯನ್ನು ಸಂಪೂರ್ಣ ಬದಲಾವಣೆ ಮಾಡಿದ್ದು, ಎರಡು ಮೂರು ದಿನಕ್ಕೆ ಒಮ್ಮೆ ತಂತ್ರಾಂಶದಲ್ಲಿ ನಮೂದಿಸಿ ಪರಿಹಾರ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಲಾಗಿದೆ. ಕೇಂದ್ರಕ್ಕೆ ಹೆಚ್ಚಿನ ಪರಿಹಾರ ನೀಡುವಂತೆ ವರದಿ ಸಿದ್ಧಪಡಿಸುತ್ತಿದ್ದೇವೆ. ಬೆಳೆ ಪರಿಹಾರ ನೀಡಲು ರಾಜ್ಯದಲ್ಲಿ ಹಣಕಾಸಿನ ಕೊರತೆ ಇಲ್ಲ. ರೈತರಿಗೆ ಅನುಕೂಲವಾಗಬೇಕು. ರೈತರ ಹಿತ ಕಾಯಲು ರಾಜ್ಯ ಸರ್ಕಾರ ಸದಾ ಬದ್ಧವಾಗಿದೆ ಎಂದರು.

Donate Janashakthi Media

Leave a Reply

Your email address will not be published. Required fields are marked *