ಪೊಲೀಸರಿಂದ ಲಾಠಿಚಾರ್ಜ್ , ಜಲಫಿರಂಗಿ ಪ್ರಯೋಗ
ದೆಹಲಿ ಜ 26 : ದೆಹಲಿಯ ಗಾಜಿಪುರ ಗಡಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿಗೆ ತೆರಳಿದ್ದವರ ಮೇಲೆ ಅಶ್ರುವಾಯು ಪ್ರಯೋಗ ಮಾಡಲಾಗಿದೆ. ಕಿಸಾನ್ ಟ್ರ್ಯಾಕ್ಟರ್ ಪರೇಡ್‌ಗೆ ತೆರಳಿದ್ದ ರೈತರ ಮೇಲೆ ಮನಬಂದಂತೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ.
ಇಂದು ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಈ ನಡುವೆ ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಬೆಂಗಳೂರು ಮತ್ತು ದೆಹಲಿಯಲ್ಲಿ ರೈತರ ಬೃಹತ್ ರ‍್ಯಾಲಿ ನಡೆಯುತ್ತಿದೆ.
ದೆಹಲಿಯಲ್ಲಿ ರೈತರ ಮೇಲೆ ಅಶ್ರುವಾಯು ಪ್ರಯೋಗ : ದೆಹಲಿಯ ಗಾಜಿಪುರ ಗಡಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿಗೆ ತೆರಳಿದ್ದವರ ಮೇಲೆ ಅಶ್ರುವಾಯು ಪ್ರಯೋಗ ಮಾಡಲಾಗಿದೆ. ಕಿಸಾನ್ ಟ್ರ್ಯಾಕ್ಟರ್ ಪರೇಡ್‌ಗೆ ತೆರಳಿದ್ದ ರೈತರ ಮೇಲೆ ಮನಬಂದಂತೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕೆಲವೆಡೆ ಪೊಲೀಸರ ಬ್ಯಾರಿಕೇಡ್ ತಳ್ಳಿ ನುಗ್ಗಲು ರೈತರು ಯತ್ನಿಸುತ್ತಿದ್ದಾರೆ. ದೆಹಲಿಯ ಸಿಂಘು ಗಡಿಯಲ್ಲಿ ರೈತರ ಮೇಲೆ ಲಾಠಿಚಾರ್ಜ್ ಮಾಡಲಾಗುತ್ತಿದೆ. ಹಾಗೂ ಅಕ್ಷರಧಾಮ ಬಳಿ ರೈತರ ಮೇಲೆ ಜಲಫಿರಂಗಿ ಪ್ರಯೋಗ ಮಾಡಲಾಗುತ್ತಿದೆ. ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.
ದೆಹಲಿ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ : ದೆಹಲಿ ಮುತ್ತಿಗೆಗೆ ಮಣ್ಣಿನ ಮಕ್ಕಳಾದ ರೈತರು ಸರ್ವಸನ್ನದ್ಧರಾಗಿಯೇ ಬಂದಂತೆ ಕಾಣುತ್ತಿದೆ. ಜೆಸಿಬಿ, ಟ್ರಕ್, ಕ್ರೇನ್, ಟ್ರ್ಯಾಕ್ಟರ್ ಮೂಲಕ ದೆಹಲಿಗೆ ಲಗ್ಗೆ ಇಟ್ಟಿದ್ದು ಬ್ಯಾರಿಕೇಡ್ಗಳನ್ನು ಕಿತ್ತೆಸೆದು ಅನ್ನದಾತರು ಮುನ್ನುಗ್ಗುತ್ತಿದ್ದಾರೆ. ಲಕ್ಷಾಂತರ ಟ್ರ್ಯಾಕ್ಟರ್ಗಳ ಮೂಲಕ ರೈತರು ದೆಹಲಿ ಚಲೋ ಮಾಡ್ತಿದ್ದು ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.