ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಆಯೋಜಿಸಿರುವ ರಾಜಭವನ ಚಲೋಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ. ಹಗರಣ
ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆಯಿಂದ ಆರಂಭಗೊಂಡು ರಾಜಭವನದ ವರೆಗೂ ಬೃಹತ್ ಕಾಲ್ನಾಡಿಗೆ ಜಾಥಾ ನಡೆಯುತ್ತಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಮುರಗೇಶ್ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಮೂಲಕ ಆಗ್ರಹಿಸಲಿದ್ದಾರೆ.
ಇದನ್ನು ಓದಿ : ಕೆಎಎಸ್ ಪರೀಕ್ಷೆಯಲ್ಲಿ ಕನ್ನಡಕ್ಕೆ, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯ ಮರುಪರೀಕ್ಷೆಗೆ ಕರವೇ ಆಗ್ರಹ
ಈ ಸಂದರ್ಭದಲ್ಲಿ ಸಚಿವರಾದ ಜಿ.ಪರಮೇಶ್ವರ್, ರಾಮಲಿಂಗಾ ರೆಡ್ಡಿ, ಡಿ.ಸುಧಾಕರ್, ಹೆಚ್.ಕೆ. ಪಾಟೀಲ್, ಬೋಸರಾಜು, ಶರಣಪ್ರಕಾಶ್ ಪಾಟೀಲ್, ಝಮೀರ್ ಅಹ್ಮದ್, ಈಶ್ವರ್ ಖಂಡ್ರೆ, ವೆಂಕಟೇಶ್, ಎಸ್.ಎಸ್ ಮಲ್ಲಿಕಾರ್ಜುನ್, ದಿನೇಶ್ ಗುಂಡೂರಾವ್, ಶಾಸಕರಾದ ಶಿವಲಿಂಗೇಗೌಡ, ಪ್ರದೀಪ್ ಈಶ್ವರ್, ನಯನ ಮೋಟಮ್ಮ, ಕಂಪ್ಲಿ ಗಣೇಶ್, ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾದ ಯು. ಬಿ ವೆಂಕಟೇಶ್, ಸುಧಾಮ್ ದಾಸ್, ಐವಾನ್ ಡಿಸೋಜ, ಸಂಸದರಾದ ಶ್ರೇಯಸ್ ಪಟೇಲ್, ಹಿರಿಯ ಮುಖಂಡರಾದ ವೀರಪ್ಪ ಮೊಯ್ಲಿ, ಎಂ.ಆರ್ ಸೀತಾರಾಮ್, ವಿ.ಎಸ್ ಉಗ್ರಪ್ಪ, ಆರ್.ವಿ ದೇಶಪಾಂಡೆ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.
ಇದನ್ನು ನೋಡಿ : 18ನೇ ವಯಸ್ಸಿಗೆ ಸರ್ಕಾರವನ್ನು ಆರಿಸುವವಳಿಗೆ ಬಾಳ ಸಂಗಾತಿಯನ್ನು ಆರಿಸಲು ಅರ್ಹತೆ ಇರುವುದಿಲ್ಲವೆ? – ಕೆ.ಎಸ್ ವಿಮಲಾ