ಬೆಂಗಳೂರು : ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು” “ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿ ಮಾತನಾಡುತ್ತಾ, “20 ವರ್ಷಗಳ ಹಿಂದೆ ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲಾ ಆಶ್ಚರ್ಯ ಉಂಟು ಮಾಡಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಪ್ರಾರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ ಈ ಹಕ್ಕು ಈಗ ಮೊಟಕಾಗಿದೆ. ಆದಕಾರಣ ಇಡೀ ದೇಶದ ಉದ್ದಗಲಕ್ಕೂ ಈ ಬಗ್ಗೆ ಹೋರಾಟ ರೂಪಿಸಲಾಗಿದೆ” ಎಂದರು.
ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ದೊರೆಯುತ್ತಿತ್ತು. “ಪ್ರತಿವರ್ಷ 6 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ಮನರೇಗಾ ಅಡಿ ನಡೆಯುತ್ತಿದ್ದವು. ವಿಧಾನಸಭೆಯಲ್ಲೂ ಇದರ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ” ಎಂದರು.
ಕೃಷಿ ಕರಾಳ ಕಾಯ್ದೆ ಹಿಂಪಡೆದಂತೆ ಗ್ರಾಮ್ ಜಿ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ “ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು” ಎಂದರು.ರೈತರ ಕರಾಳ ಕಾಯ್ದೆಗಳನ್ನು ಹೇಗೆ ಹಿಂಪಡೆಯಲಾಯಿತೋ ಅದೇ ರೀತಿ ಇದನ್ನೂ ಹಿಂಪಡೆಯಬೇಕು. ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಲಾಗುವುದು” ಯಾವ ರೀತಿಯ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಕೇಳಿದಾಗ, “ಮನರೇಗಾವನ್ನು ನಾಶ ಮಾಡುವ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗುವುದು ಎಂದರು.
ಇದನ್ನೂ ಓದಿ : ಕೇರಳ | ಪಕ್ಷದ ಚೌಕಟ್ಟಿನಲ್ಲೇ ಮಾತು: ವೈಯಕ್ತಿಕ ನಿಲುವಲ್ಲ ಸಿಂಧೂರ’ ಕುರಿತು ಶಶಿ ತರೂರ್ ಹೇಳಿಕೆ
ಹೊಸ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ. ಜೆಡಿಎಸ್ ಮನರೇಗಾ ಬದಲಾವಣೆ ಬಗ್ಗೆ ವಿರೋಧ ವ್ಯಕ್ತಪಡಿಸದೇ ಇರುವ ಬಗ್ಗೆ ಕೇಳಿದಾಗ, “ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಸಹ ಬಾಯಿ ಬಿಡುತ್ತಿಲ್ಲ. ಗ್ರಾಮೀಣ ಭಾಗದ ಜನಪ್ರತಿನಿಧಿಯಾಗಿ ನನ್ನ ಅನುಭವದಲ್ಲಿ ಹೇಳುವುದಾದರೆ ಇದರ ಅನುಷ್ಠಾನ ಅಸಾಧ್ಯ” ಎಂದರು.
“ಈ ಯೋಜನೆಗೆ ಅನುದಾನ ಒಗಗಿಸಿ ಕೊಡುವವರು ಯಾರು? ಕೇಂದ್ರವೇ ಅನುದಾನ ಒದಗಿಸಿಕೊಡಲಿ. ಕೆಲವು ನಾಯಕರು ಚರ್ಚೆಗೆ ಬರುತ್ತೇವೆ ಎಂದು ಹೇಳಿದ್ದಾರೆ. ನಾವು ಸದನದಲ್ಲಿ ಅವರ ಚರ್ಚೆಗೆ ಉತ್ತರ ನೀಡಲು ಸಿದ್ಧರಿದ್ದೇವೆ” ಎಂದರು.
2028 ಕ್ಕೆ ಮುಖ್ಯಮಂತ್ರಿಯಾಗುತ್ತೇನೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಇಂತಹ ಒಳ್ಳೆ ದಿನ ಏಕೆ ಅಶುಭ ಮಾತನ್ನಾಡುವುದು, ಆ ವಿಚಾರ ಬೇಡ ಬಿಡಿ” ಎಂದರು.
ಇದನ್ನೂ ನೋಡಿ : ಹೊರಗುತ್ತಿಗೆ ಎಂಬ ‘ಜೀತʼದಿಂದ ಬಿಡುಗಡೆ ಸಿಗಲಿ – ಎಸ್. ವರಲಕ್ಷ್ಮಿ Janashakthi Media
