ಜೈಪುರ: ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಪಕ್ಷ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.ರಾಜಸ್ಥಾನದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜಾತಿ ಗಣತಿ, ಪ್ರತಿ ಪಂಚಾಯತ್ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಮಾಡಲಾಗುವುದೆಂದು ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.
ಪ್ರಣಾಳಿಕೆ ಬಿಡುಗಡೆ ಮಾಡಿದ ಮಾತನಾಡಿದ ಮುಖ್ಯುಮಂತ್ರಿ ಅಶೋಕ್ ಗೆಹ್ಲೋಟ್, ರಾಜ್ಯ ಸರ್ಕಾರದ ವತಿಯಿಂದ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಗಟ್ಟಲು ಪ್ರತ್ಯೇಕ ಕಾನೂನನ್ನು ಜಾರಿ ಮಾಡಲಾಗುವುದು. ನಮ್ಮ ಅಧಿಕಾರದ ಅವಧಿಯಲ್ಲಿ ಜಾರತಿಗೆ ತರಲಾದ ಯೋಜನೆಗಳು ಹಾಗೂ ಕಾನೂನುಗಳು ಜನರ ಮೇಲೆ ಪ್ರಭಾವ ಬೀರಿದ್ದು, ಮತ್ತೊಮ್ಮೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರಬೇಕು ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ.
ಇದನ್ನೂ ಓದಿ: ವಿಶ್ವಕಪ್ ಪಂದ್ಯ ವೀಕ್ಷಿಸುವ ಮೋದಿಗೆ ಮಣಿಪುರಕ್ಕೆ ಹೋಗಲು ಸಮಯವಿಲ್ಲವೇ: ಜೈ ರಾಮ್ ರಮೇಶ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ನಾವು ಘೋಷಿಸಿರುವ ಗ್ಯಾರಂಟಿಗಳನ್ನು ತಕ್ಷಣವೇ ಜಾರಿಗೆ ತರಲಾಗುವುದು. ನಾವು ಹಿಂದಿನ ಚುನಾವಣೆಯಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ. ಅದೇ ರೀತಿ ಈ ಬಾರಿಯೂ ಸಹ ನಾವು ನುಡಿದಂತೆ ನಡೆಯುತ್ತೇವೆ ಎಂದು ಪ್ರಣಾಳಿಕೆ ಬಿಡುಗಡೆ ಬಳಿಕ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಶ್ವಾಸನೆ ನೀಡಿದ್ದಾರೆ.
ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಕಾಂಗ್ರೆಸ್ ಪ್ರಣಾಳಿಕೆಯ ಪ್ರಮುಖ ಘೋಷಣೆಗಳು
- ಮನೆಯೊಡತಿಗೆ ವಾರ್ಷಿಕ 10,000 ಸಹಾಯಧನ
- 1.4 ಕುಟಂಬಗಳಿಗೆ 500ಗೆ ಎಲ್‌ಪಿಜಿ ಸಿಲಿಂಡರ್
- ಚಿರಂಜೀವಿ ವಿಮೆ ಮೊತ್ತವನ್ನು 25 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಿಸಲಾಗುವುದು.
- ಕೆ.ಜಿಗೆ 2ರೂ ರಂತೆ ರೈತರಿಂದ ಸಗಣಿ ಖರೀದಿ
- ಸರ್ಕಾರಿ ಉದ್ಯೋಗಿಗಳಿಗೆ ಹಳೆ ಪಿಂಚಣಿ ಪಡೆಯಲು ಹೊಸ ಕಾನೂನು
- ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಅಥವಾ ಟ್ಯಾಬ್ಲೆಟ್
- ಪ್ರಕೃತಿ ವಿಕೋಪದಿಂದಾಗುವ ನಷ್ಟವನ್ನು ಸರಿದೂಗಿಸಲು ಪ್ರತಿ ಕುಟುಂಬಕ್ಕೆ 15 ಲಕ್ಷದವರಗೆ ವಿಮೆ
ವಿಡಿಯೋ ನೋಡಿ: ಕಾರ್ನಾಡ್ ನೆನಪು : ಕಾರ್ನಾಡ್ ನಾಟಕಗಳಲ್ಲಿ ʻಪೌರಾಣಿಕ ವಸ್ತುʼ – ಡಾ.ಎಚ್, ಎಲ್, ಪುಷ್ಪಾರವರ ಮಾತುಗಳು