ನವೆಂಬರ್ 26 ರಿಂದ ರೈತ – ಕಾರ್ಮಿಕರ ಮಹಾಧರಣಿ

ಬೆಂಗಳೂರು: ರೈತ, ಕಾರ್ಮಿಕ, ದಲಿತ, ಮಹಿಳೆಯರ ಹಕ್ಕುಗಳಿಗಾಗಿ ನವೆಂಬರ್‌ 26ರಿಂದ ಮೂರು ದಿನಗಳ ಕಾಲ ಮಹಾಧರಣಿ ನಡೆಯಲಿದೆ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ತಿಳಿಸಿದೆ.

“ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸೋಣ, ಪರ್ಯಾಯ ನೀತಿಗಳಿಗಾಗಿ ಹೋರಾಡೋಣ ” ಎಂಬ ಘೋಷಣೆಯಡಿ ಅಕ್ಟೋಬರ್‌ 09 ರಂದು ಎಸ್‌ಕೆಎಂ ಹಾಗೂ ಜೆಸಿಟಿಯು ಆಯೋಜಿಸಿದ್ದ ರಾಜ್ಯ ಸಮಾವೇಶದಲ್ಲಿ ನಿರ್ಣಯಿಸಲಾಗಿದೆ.

ವಿದ್ಯುತ್ ತಿದ್ದುಪಡಿ ಮಸೂದೆ-2022 ವಾಪಸ್‌ ಪಡೆಯಬೇಕು. ಹೊಸ ಶಿಕ್ಷಣ ನೀತಿಯನ್ನು ರದ್ದು ಮಾಡಬೇಕು. ಮನರೇಗಾ ಉದ್ಯೋಗದ ದಿನಗಳನ್ನು ಹೆಚ್ಚಿಸಬೇಕು. ಬಿತ್ತನೆ ಬೀಜ, ರಸಗೊಬ್ಬರ, ವಿದ್ಯುಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಿಸಬೇಕು. ಸ್ವಾಮಿನಾಥನ್ ಶಿಪಾರಸ್ಸಿನಂತೆ ಕೃಷಿ ಉತ್ಪನ್ನಗಳಿಗೆ ಸಿ2+50% ಪ್ರಕಾರ ಕನಿಷ್ಟ ಬೆಂಬಲ ಬೆಲೆ ನಿಗದಿ ಪಡಿಸಬೇಕು. ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಬೇಕು. ರಣ್ಯ ಸಂರಕ್ಷಣಾ ತಿದ್ದುಪಡಿ ಕಾಯ್ದೆ-2023ಯನ್ನು ವಜಾಗೊಳಿಸಬೇಕು. ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು, ಬೆಲೆ ಏರಿಕೆ ನಿಯಂತ್ರಿಸಬೇಕು. ಅಗತ್ಯ ವಸ್ತುಗಳಾದ ಆಹಾರ, ಔಷಧ. ಕೃಷಿ ಲಾಗುವಾಡು ಯಂತ್ರೋಪಕರಣಗಳ ಮೇಲಿನ ಜಿ.ಎಸ್.ಟಿ. ರದ್ದುಪಡಿಸಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಕೇಂದ್ರೀಯ ತೆರಿಗೆಯನ್ನು ಗಣನೀಯವಾಗಿ ಇಳಿಕೆ ಮಾಡಬೇಕು ಎಂಬ ಹಕ್ಕೊತ್ತಾಯಗಳ ಈಡೇರಿಕೆಗಾಗಿ ನವೆಂಬರ್‌ 26 ರಿಂದ 28 ರವರೆಗೆ ಬೆಂಗಳೂರಿನಲ್ಲಿ ಮಹಾಧರಣಿ ನಡೆಯಲಿದೆ.

ಮೂರುದಿನಗಳ ಕಾಲ ನಡೆಯುವ ಈ ಹೋರಾಟದಲ್ಲಿ ರೈತರು, ಕಾರ್ಮಿಕರು, ಕೂಲಿಕಾರರು, ಮಹಿಳಾ-ಯುವಜನ ಸಂಘಟನೆಗಳು, ದಲಿತ ಸಂಘಟನೆಗಳ ನೇತೃತ್ವದಲ್ಲಿ 1 ಲಕ್ಷಕ್ಕೂ ಅಧಿಕ ಜನ ಮೂರು ದಿನಗಳ ಕಾಲ ನಡೆಯುವ ಮಹಾಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದರು.

 

ಇದನ್ನೂ ಓದಿ:ಐತಿಹಾಸಿಕ ದೆಹಲಿ ಹೋರಾಟದ ನೆನಪಿನಲ್ಲಿ | ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು, ಪರ್ಯಾಯ ನೀತಿಗಾಗಿ | ರಾಜ್ಯ ಮಟ್ಟದ ಸಮಾವೇಶ

 

ಹಕ್ಕೊತ್ತಾಯಗಳು:

  • ರೈತರಿಗೆ ನೀಡುವ, ಬೀಜ, ರಸಗೊಬ್ಬರ, ಹಾಗೂ ವಿದ್ಯುತ್ ಚ್ಛಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಳವಾಗಬೇಕು. ರೈತರ ಉತ್ಪನ್ನಗಳಿಗೆ ಎಂ.ಎಸ್. ಸ್ವಾಮಿನಾಥನ್‌ ಶಿಪಾರಸ್ಸಿನ ಸೂತ್ರ, C2+50% ಪ್ರಕಾರ ಕನಿಷ್ಟ ಬೆಂಬಲ ಬೆಲೆ ಹಾಗೂ ಖರೀದಿ ಖಾತರಿ ಒದಗಿಸುವ ಶಾಸನ ಜಾರಿ ಮಾಡಬೇಕು. ರೈತರ ಆತ್ಮಹತ್ಯೆ ತಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು.
  • ರಾಷ್ಟ್ರೀಯ ಕನಿಷ್ಟ ವೇತನ ಮಾಸಿಕ 26000 ರೂ ನಿಗದಿಯಾಗಬೇಕು.
  • ಕಾರ್ಪೊರೇಟ್ ಪರವಾದ ಪಿಎಂ ಫಸಲ್ ಭೀಮಾ ಯೋಜನೆಯನ್ನು ರದ್ದುಪಡಿಸಿ, ಹವಾಮಾನ ಬದಲಾವಣೆ, ಬರ, ಪ್ರವಾಹ, ಬೆಳೆ ರೋಗ ಮುಂತಾದ ವಿಕೋಪಗಳಿಗೆ ರೈತರಿಗೆ ಪರಿಹಾರ ಒದಗಿಸುವ, ಎಲ್ಲಾ ಬೆಳೆಗಳಿಗೂ ಏಮೆ ಒದಗಿಸುವ, ಸಮಗ್ರ ಸಾರ್ವಜನಿಕ ವಿಮಾ ಯೋಜನೆಯನ್ನು ಜಾರಿಗೆ ತರಬೇಕು.
  • ಎಲ್ಲಾ ರೈತರು/ಕೃಷಿ ಕೂಲಿಕಾರರನ್ನು ಸಾಲಭಾದೆಯಿಂದ ರಕ್ಷಿಸಲು ಸಮಗ್ರ ಸಾಲ ಮನ್ನಾ ಯೋಜನೆ ಜಾರಿಗೆ ತರಬೇಕು.
  • ಐತಿಹಾಸಿಕ ದೆಹಲಿ ರೈತ ಹೋರಾಟದ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಜಾರಿ ಮಾಡಬೇಕು. ಈ ಆಧಾರದಲ್ಲಿ ಹೋರಾಟವನ್ನು ಮುಂದೂಡಲಾಗಿತ್ತು. ಸಿಂಗು ಗಡಿಯಲ್ಲಿ ಹುತಾತ್ಮ ರೈತರ ಸ್ಮಾರಕ ನಿರ್ಮಿಸಲು ಜಾಗ ನೀಡಬೇಕು, ಹುತಾತ್ಮ ರೈತ ಕುಟುಂಬಕ್ಕೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಬೇಕು. ಹೋರಾಟ ಸಂದರ್ಭದಲ್ಲಿ ರೈತರ ಮೇಲೆ ಹಾಕಿರುವ ಎಲ್ಲಾ ಪೊಲೀಸ್ ಕೇಸ್ ಗಳನ್ನು ವಾಪಸ್ಸು ಪಡೆಯಬೇಕು. ರೈತರ ಹತ್ಯಾಕಾಂಡ ನಡೆಸಿದ ಅಜಯ್ ಮೀಶ, ತೇಣಿ ಯನ್ನು ಕೇಂದ್ರ ಮಂತ್ರಿ ಮಂಡಲದಿಂದ ತೆಗೆಯಬೇಕು.
  • ನಾವು ದುಡಿದವರಾಗಿ ಮಾಡಬೇಕು ಮಂಜೂರಾಗಿರುವ ಎಲ್ಲಾ ಉದ್ಯೋಗಗಳನ್ನು ಭರ್ತಿ ಮಾಡಬೇಕು. ನಿರುದ್ಯೋಗಿ ಯುವಜನತೆಗೆ ಕೆಲಸ ಒದಗಿಸಲು, ಉದ್ಯೋಗ ಸೃಷ್ಟಿಸಬೇಕು. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. 200 ದಿನಗಳಿಗೆ ವಿಸ್ತರಿಸಿ 600 ರೂ. ಕೂಲಿ ನಿಗದಿ ಮಾಡಬೇಕು.
  • ಗೃಹ ಕೃತ್ಯಗಳ ಕೆಲಸಗಾರರು ಹಾಗೂ ಗೃಹ ಆಧಾರಿತ ಕೆಲಸಗಾರರಿಗೆ ILO ಸಮ್ಮೇಳನ ಶಿಪಾರಸ್ಸುಗಳನ್ನು ಖಾತರಿಪಡಿಸಲು ಸೂಕ್ತ ಕಾನೂನು ರಚಿಸಬೇಕು. ವಲಸೆ ಕಾರ್ಮಿಕರ ಕುರಿತು ಸಮಗ್ರ ಧೋರಣೆ ರೂಪಿಸಬೇಕು. ಈಗ ಇರುವ ಅಂತರ್ ರಾಜ್ಯ ವಲಸೆ ಕೆಲಸಗಾರರ, ಉದ್ಯೋಗ ನಿಯಂತ್ರಣ) ಕಾಯ್ದೆ 1979 ಅನ್ನು ಸಾಮಾಜಿಕ ಸುರಕ್ಷೆ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಬಲಪಡಿಸಬೇಕು.
  • ಹೊಸ ಪಿಂಚಣಿ ಯೋಜನೆ (NPS) ಅನ್ನು ರದ್ದು ಮಾಡಿ, ಹಳೇ ಪಿಂಚಣಿ ಯೋಜನೆ (OPS) ಜಾರಿ ಮಾಡಬೇಕು. ಎಲ್ಲರಿಗೂ ಸಾಮಾಜಿಕ ಭವತ ಒದಗಿಸಬೇಕು.
  • ಬೆಲೆ ಏರಿಕೆ ನಿಯಂತ್ರಿಸಬೇಕು. ಅಗತ್ಯ ವಸ್ತುಗಳಾದ ಆಹಾರ, ಔಷಧ. ಕೃಷಿ ಲಾಗುವಾಡು ಯಂತ್ರೋಪಕರಣಗಳ ಮೇಲಿನ ಜಿ.ಎಸ್.ಟಿ. ರದ್ದುಪಡಿಸಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಕೇಂದ್ರೀಯ ತೆರಿಗೆಯನ್ನು ಗಣನೀಯವಾಗಿ ಇಳಿಕೆ ಮಾಡಬೇಕು.
  • ಕೋಡ್ ನೆಪದಲ್ಲಿ ಹಿರಿಯ ನಾಗರಿಕರು, ಮಹಿಳೆಯರು, ಅಂಗವಿಕಲರು, ಕ್ರೀಡಾಪಟುಗಳಿಗೆ ರದ್ದುಪಡಿಸಿದ್ದ ರೈಲ್ವೆ ಪ್ರಯಾಣ ರಿಯಾಯಿತಿಯನ್ನು ಪುನರ್ ಸ್ಥಾಪಿಸಬೇಕು.

ಈ ವಿಡಿಯೋ ನೋಡಿನಮಗೆ ಸೆಂಗೋಲ್ ಬೇಡ ನೇಗಿಲು ಬೇಕು – ಮಾವಳ್ಳಿ ಶಂಕರ್

  • ಆಹಾರ ಭದ್ರತೆ/ಪೋಷಕಾಂಶ, ಸುರಕ್ಷತೆಯನ್ನು ಖಾತರಿಪಡಿಸಬೇಕು, ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿಗೆ ಬರಬೇಕು. ಮೂಲಭೂತ ಅಗತ್ಯ ವಸ್ತುಗಳನ್ನು ಪಿಡಿಎಸ್ ಮೂಲಕ ವಿತರಿಸಬೇಕು. ನೇರ ನಗದು ವರ್ಗಾವಣೆ ರದ್ದುಪಡಿಸಬೇಕು.
  • ಉಚಿತ ಶಿಕ್ಷಣ, ಉಚಿತ ಆರೋಗ್ಯ ಸೇವೆ, ಉಚಿತ ನೀರು ಮತ್ತು ನೈರ್ಮಲ್ಯವನ್ನು ಮೂಲಭೂತ ಹಕ್ಕಾಗಿ ಒದಗಿಸಬೇಕು. ರಾಷ್ಟ್ರೀಯ ಶಿಕ್ಷಣ ನೀತಿ 2020 ರದ್ದಾಗಬೇಕು.
  • ಪ್ರತಿಯೊಬ್ಬರಿಗೂ ವಸತಿ ಹಕ್ಕನ್ನು ಖಾತರಿಪಡಿಸಬೇಕು. ವಸತಿ ನಿವೇಶನಕ್ಕಾಗಿ ಭೂ ಸ್ವಾಧೀನ ನೀತಿ ಜಾರಿ ಮಾಡಬೇಕು.
  • ಅರಣ್ಯ ಹಕ್ಕು ಕಾಯ್ದೆ-2006 ಅನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಅರಣ್ಯಗಳನ್ನು ಕಾರ್ಪೊರೇಟ್ ಗೆ ಹಸ್ತಾಂತರಿಸಲು ಅವಕಾಶ ನೀಡಿರುವ ಅರಣ್ಯ ಸಂರಕ್ಷಣಾ ತಿದ್ದುಪಡಿ ಕಾಯ್ದೆ-2023 ಹಾಗೂ ಜೀವ ವೈವಿಧ್ಯ ಕಾಯ್ದೆ ಮತ್ತು ನಿಯಮಗಳನ್ನು ರದ್ದುಪಡಿಸಬೇಕು. ಬಗರ್ ಹುಕುಂ ಸಾಗುವಳಿದಾರರು ಸೇರಿದಂತೆ ಎಲ್ಲಾ ಉಳುಮೆ ರೈತರಿಗೆ ಭೂಮಿ ಹಕ್ಕು ಖಾತರಿಪಡಿಸಬೇಕು. ಬಲವಂತದ ಭೂ ಸ್ವಾಧೀನ ನಿಲ್ಲಿಸಬೇಕು ಮತ್ತು ಪರಿಹಾರ ಕ್ರಮ ವೈಜ್ಞಾನಿಕ ಹಾಗೂ ರೈತ ಸ್ನೇಹಿಯಾಗಿರಬೇಕು.
  • ಸಾರ್ವಜನಿಕ ಉದ್ದಿಮೆಗಳ ಹಾಗೂ ಸರ್ಕಾರಿ ಇಲಾಖೆಗಳ ಖಾಸಗೀಕರಣ ನಿಲ್ಲಬೇಕು. ರಾಷ್ಟ್ರೀಯ ನಗದೀಕರಣ ಪೈಪ್ ಲೈನ್ ಯೋಜನೆ ರದ್ದಾಗಬೇಕು.
  • ನಿಜ ಹಾಗೂ ಲೋಹ ಗಣಿಗಾರಿಕಾ ಕಾಯ್ದೆ ಗೆ ತಿದ್ದುಪಡಿ ತಂದು ಕಲ್ಲಿದ್ದಲು ಸೇರಿದಂತೆ ಗಣಿ ಕಂಪನಿಗಳ ಲಾಭದ ಶೇ.50 ರಷ್ಟನ್ನು ಆದಿವಾಸಿಗಳು, ರೈತರು ಮುಂತಾದ ಸ್ಥಳೀಯ ನಿವಾಸಿಗಳ ಅಭಿವೃದ್ಧಿಗೆ ಬಳಸಬೇಕು.
  • ವಿದ್ಯುತ್ ತಿದ್ದುಪಡಿ ಮಸೂದೆ 2022 ಅನ್ನು ಸಂಸತ್ತಿನಿಂದ ವಾಪಸ್ಸು ಪಡೆಯಬೇಕು. ಯಾವುದೇ ಕಾರಣಕ್ಕೂ ಪೀ ಪೇಯ್ಡ್ ಮೀಟರ್ ಅಳವಡಿಸಬಾರದು.
  • ಭಾರತೀಯ ಕಾರ್ಮಿಕ ಸಮ್ಮೇಳನವನ್ನು ನಿಯಮಿತವಾಗಿ ಆಯೋಜಿಸಬೇಕು. 19. ನಾಲ್ಕು ಕಾರ್ಮಿಕ ಸಂಹಿತೆಗಳನ್ನು, ನಿಗದಿತ ಅವಧಿಗೆ ಮಾತ್ರ ಉದ್ಯೋಗ ಪದ್ಧತಿಯನ್ನು ರದ್ದುಪಡಿಸಬೇಕು. ಕೆಲಸದ ಸ್ಥಳದಲ್ಲಿ ಸಮಾನತೆ ಹಾಗೂ ಸುರಕ್ಷಿತ ಖಾತರಿಪಡಿಸಬೇಕು. ಶಮವನ್ನು ಶಾಶ್ವತ ಖಾಯಂ ರಹಿತವಾಗಿ ದುಡಿಸಿಕೊಳ್ಳುವ ಪ್ರವೃತ್ತಿ ನಿಲ್ಲಬೇಕು. ಗೃಹ ಅಧಾರಿತ ಕಾರ್ಮಿಕರು, ಸಣ್ಣ ಪುಟ್ಟ ವ್ಯಾಪಾರಸ್ಥರು, ಚಿಂದಿ ಆಯುವವರು, ಮನೆಗೆಲಸಗಾರರು, ಕಟ್ಟಡ ಕಾರ್ಮಿಕರು, ವಲಸೆ ಕಾರ್ಮಿಕರು, ಅಂಗನವಾಡಿ, ಬಿಸಿಯೂಟ, ಆಶಾ ಸೇರಿದಂತೆ ಯೋಜನಾ ಕಾರ್ಮಿಕರು, ಕೃಷಿ ಕೂಲಿಕಾರರು, ಅಂಗಡಿ/ಮಳಿಗೆಗಳ ಕಾರ್ಮಿಕರು, ಹಮಾಲಿ ಕಾರ್ಮಿಕರು, ಗೀಗ್, ಕಾರ್ಮಿಕರು, ಊದುಬತಿ ಉಪ್ಪಿನಕಾಯಿ, ಕಾರ್ಮಿಕರು, ಬೀಡಿ ಕಾರ್ಮಿಕರು, ಸೇಂದಿ ಕಾರ್ಮಿಕರು, ರಿಕ್ಷಾ ಎಳೆಯುವವರು, ಆಟೋ ರಿಕ್ಷಾ/ಟಾಕ್ಸಿ ಚಾಲಕರು, ವಿದೇಶಿ ಕಾರ್ಮಿಕರು, ಮೀನುಗಾರ ಸಮುದಾಯ ಮುಂತಾದ ಎಲ್ಲಾ ರೀತಿಯ ಅಸಂಘಟಿತ ವಲಯದ ಕಾರ್ಮಿಕರನ್ನು ನೊಂದಾಯಿಸಿ, ಪಿಂಚಣಿ ಸೇರಿದಂತೆ ಸಮಗ್ರ ಸಾಮಾಜಿಕ ಸುರಕೆಯನ್ನು ಒದಗಿಸಬೇಕು. ಐಸಿಡಿಎಸ್, ಅಕ್ಷರ ದಾಸೋಹ, ಆಶಾ ಮುಂತದಾ ಯೋಜನೆಗಳನ್ನು ಯಾವುದೇ ಸ್ವರೂಪದಲ್ಲಿ ಖಾಸಗೀಕರಣ ಮಾಡಬಾರದು.
  • ಕಲ್ಯಾಣ ಮಂಡಳಿಯ ನಿಧಿ ಬಳಸಿಕೊಂಡು ಕಟ್ಟಡ ಕಾರ್ಮಿಕರಿಗೆ ಇ.ಎಸ್.ಐ. ಸೌಲಭವನ್ನು ಒದಗಿಸಬೇಕು. ಇ-ಶಮ್ ಪೋರ್ಟಲ್ ನಲ್ಲಿ ನೊಂದಾಯಿಸಿರುವ ಎಲ್ಲ ಕಾರ್ಮಿಕರಿಗೆ ಆರೋಗ್ಯ ಯೋಜನೆ, ತಾಯ್ತನದ ಆರೈಕೆ
  • ಸೌಲಭ್ಯ, ಜೀವ ಹಾಗೂ ಅಂಗವೈಕಲ್ಯ ವಿಮೆಯನ್ನು ಒದಗಿಸಬೇಕು.
  • ಸಂವಿಧಾನದ ಮೂಲಭೂತ ಮೌಲ್ಯಗಳಾದ ಅಭಿವ್ಯಕ್ತಿ ಸ್ವಾತಂತ್ಯ, ಭಿನ್ನಾಭಿಪ್ರಾಯ ಹೊಂದುವ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ, ಸಾಂಸ್ಕೃತಿಕ -ಭಾಷೆ ವೈವಿಧ್ಯತೆ ಗೆ ಮನ್ನಣೆ, ದೇಶದ ಕಾನೂನಿನ ಮುಂದೆ ಎಲ್ಲರೂ ಸಮಾನರು ಹಾಗೂ ಒಕ್ಕೂಟ ರಚನೆ ಮುಂತಾದವುಗಳ ಮೇಲಿನ ಆಕ್ರಮಣವನ್ನು ನಿಲ್ಲಿಸಬೇಕು.

ವಿಡಿಯೋ ನೋಡಿ:ರೈತ, ಕಾರ್ಮಿಕ, ದಲಿತ, ಕೂಲಿಕಾರರ, ಮಹಿಳೆಯರ ಹಕ್ಕುಗಳಿಗಾಗಿ ಮಹಾಧರಣಿ

 

Donate Janashakthi Media

Leave a Reply

Your email address will not be published. Required fields are marked *