ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಪ್ರಮುಖ ಆರೋಪಿ, ರೌಡಿಶೀಟರ್ ಸೋಮ, ಎ-3 ಅಮಿತ್ ಬುಧವಾರ ಕ್ಯಾತ್ಸಂದ್ರ ಠಾಣೆ ಪೊಲೀಸರಿಗೆ ಶರಣಾಗಿದ್ದಾರೆ.
ಇದನ್ನು ಓದಿ :-ವಿಟ್ಲ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಏಪ್ರೀಲ್ 3ರಂದು ಪ್ರತಿಭಟನೆ
ಕೊಲೆ ಸಂಚಿನ ವಿಷಯ ಹೊರ ಬಂದ ನಂತರ ಪ್ರಮುಖ ಆರೋಪಿ ಸೋಮ ತಲೆ ಮರೆಸಿಕೊಂಡಿದ್ದ. ಪ್ರಕರಣದ ತನಿಖೆಗೆ ರಚಿಸಿದ ವಿಶೇಷ ತಂಡ ಆರೋಪಿಗಳಾದ ಭರತ್, ಯತೀಶ್, ಪುಷ್ಪಾ ಮತ್ತು ಯಶೋದ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿತ್ತು. ಇದೀಗ ಸೋಮ, ಅಮಿತ್ ಕ್ಯಾತ್ಸಂದ್ರ ಠಾಣೆ ಪೊಲೀಸರ ಮುಂದೆ ಶರಣಾಗಿದ್ದಾರೆ.
ಇದನ್ನು ಓದಿ :-ಸಿದ್ದಾಪುರ| ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರ ನೇಮಕಕ್ಕೆ ಆಗ್ರಹಿಸಿ ಸಿಪಿಎಂ ಮನವಿ
ಪ್ರಮುಖ ಆರೋಪಿ ಸೋಮನಿಗೆ ₹5 ಲಕ್ಷ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಮನು ಎಂಬುವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.