ರಾಜ್ಯ ಬಜೆಟ್‌ 2022-23: ಕೃಷಿ, ಆರೋಗ್ಯ, ಶಿಕ್ಷಣ ಒಳಗೊಂಡು ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?

ಬೆಂಗಳೂರು: ಕರ್ನಾಟಕ ರಾಜ್ಯದ 2022-23ನೇ ಸಾಲಿನ ಆಯವ್ಯಯದಲ್ಲಿ ರಾಜ್ಯ ಸರ್ಕಾರವು ಯಾವ ಕ್ಷೇತ್ರದ ವಿಭಾಗಗಳಿಗೆ ಎಷ್ಟು ಅನುದಾನವನ್ನು ಘೋಷಣೆ ಮಾಡಿದೆ ಎಂಬ ಬಗ್ಗೆ ಸಂಕ್ಷಿಪ್ತ ವಿವರಗಳು ಹೀಗಿವೆ;

ವಲಯವಾರು ವಿಭಾಗಿಸಲ್ಪಟ್ಟ ಅನುದಾನ

  • ಕೃಷಿ ಮತ್ತು ಪೂರಕ ಚಟುವಟಿಕೆಗಳಿಗಾಗಿ ₹ 33,700 ಕೋಟಿ
  • ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ₹ 8,409 ಕೋಟಿ
  • ಆರ್ಥಿಕ ಅಭಿವೃದ್ಧಿಗೆ ಉತ್ತೇಜನಕ್ಕೆ ₹ 55,657 ಕೋಟಿ
  • ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗಾಗಿ ₹68,479 ಕೋಟಿ
  • ಸಂಸ್ಕೃತಿ, ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಾಗಿ ₹56,710 ಕೋಟಿ
  • ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ₹43,188 ಕೋಟಿ
  • ಮಕ್ಕಳ ಅಭ್ಯುದಯಕ್ಕೆ ₹ 40,944 ಕೋಟಿ
  • ಆರೋಗ್ಯ, ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳಿಗೆ ₹ 6,329 ಕೋಟಿ

ಕೃಷಿ

ಕೃಷಿ ವಲಯಕ್ಕೆ 33,700 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ‘ರೈತಶಕ್ತಿ’ ಎಂಬ ಹೊಸ ಯೋಜನೆ ಘೋಷಿಸಲಾಗಿದೆ.

  • ರೈತ ಶಕ್ತಿ ಯೋಜನೆಗೆ 500 ಕೋಟಿ ರೂಪಾಯಿ
  • 33 ಲಕ್ಷ ರೈತರಿಗೆ ಕೃಷಿ ಸಾಲ ಸೌಲಭ್ಯ
  • ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ
  • ರೈತರ ಆರೋಗ್ಯ ಸೇವೆಗಾಗಿ ಯಶಸ್ವಿನಿ ಯೋಜನೆ ಪರಿಷ್ಕರಣೆ, ಉತ್ತಮ ವೈದ್ಯಕೀಯ ಸೌಲಭ್ಯ ಕಲ್ಪಿಸಲು 300 ಕೋಟಿ ಅನುದಾನ
  • ಕೃಷಿ ಜಮೀನು ಸರ್ವೇಗೆ ಡ್ರೋನ್ ಬಳಕೆ, ಜಮೀನು ಸರ್ವೆಗೆ 287 ಕೋಟಿ ಅನುದಾನ
  • ತೋಟಗಾರಿಕೆಯಲ್ಲಿ ತಂತ್ರಜ್ಞಾನ ಬಳಕೆಗೆ ಅನುದಾನ

ಆರೋಗ್ಯ, ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮ

ಈ ಸಾಲಿನಲ್ಲಿ ಶಿಕ್ಷಣ, ಆರೋಗ್ಯ,ಕೌಶಲ್ಯಾಭಿವೃದ್ಧಿ ಮತ್ತು ವಿವಿಧ ಕಲ್ಯಾಣ ಇಲಾಖೆಗಳಿಗೆ 6,329 ಕೋಟಿ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗಿದೆ.

ಆರೋಗ್ಯ

ರಾಜ್ಯ ರಾಜಧಾನಿ ಬೃಹತ್‌ ಬೆಂಗಳೂರಿನ ಎಲ್ಲ ವಾರ್ಡ್‌ಗಳಲ್ಲಿ ಹಾಗೂ ಪ್ರಮುಖ ನಗರಗಳಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ತಪಾಸಣೆಗಾಗಿ 438 ‘ನಮ್ಮ ಕ್ಲಿನಿಕ್‘ಗಳ ಸ್ಥಾಪನೆ

‘ಎಲ್ಲರಿಗೂ ಆರೋಗ್ಯ, ಎಲ್ಲೆಡೆ ಆರೋಗ್ಯ’ ಎಂಬ ಧ್ಯೇಯದೊಂದಿಗೆ ಆರೋಗ್ಯ ಕ್ಷೇತ್ರಕ್ಕೆ ನೀಡಲಾಗುತ್ತಿರುವ ಕೊಡುಗೆ ಹೀಗಿವೆ;

  • ಬೆಂಗಳೂರಿನ ಎಲ್ಲಾ ವಾರ್ಡ್‍ಗಳಲ್ಲಿ ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಅಸಾಂಕ್ರಾಮಿಕ ರೋಗಗಳ ತಪಾಸಣೆಗೆ ಒಟ್ಟು 438 “ನಮ್ಮ ಕ್ಲಿನಿಕ್”ಗಳ ಸ್ಥಾಪನೆ.
  • ರಾಜ್ಯದಲ್ಲಿ ಮಹಿಳಾ ಆರೋಗ್ಯ ಸಮಸ್ಯೆಗಳಿಗೆ ಸಲಹೆ ನೀಡಲು 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ.
  • ಬಡ ಹಿರಿಯ ನಾಗರಿಕರಿಗೆ ಯೋಜನೆಯಡಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಮತ್ತು ಕನ್ನಡಕ ಸೌಲಭ್ಯ.
  • ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಹೃದ್ರೋಗ ಕೇಂದ್ರ ಸ್ಥಾಪನೆ.
  • ಬೆಳಗಾವಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆ.
  • ಆಯ್ದ 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ಸ್ಥಾಪಿನೆ
  • ಏಳು ತಾಲ್ಲೂಕು ಆಸ್ಪತ್ರೆಗಳು 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.
  • ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ ಸ್ಥಾಪನೆ; 2022-23ರಲ್ಲಿ 10 ಕೋಟಿ ರೂ. ಅನುದಾನ.
  • ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ 75 ತಾಲ್ಲೂಕು ಆಸ್ಪತ್ರೆಗಳ ಮ್ಯಾಪಿಂಗ್, ತಾಲ್ಲೂಕು ಮಟ್ಟದಲ್ಲಿ ಹೃದಯ ಸಂಬಂಧಿ ಚಿಕಿತ್ಸೆ.
  • ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‍ಗಳನ್ನು ಜಿಲ್ಲಾ ಮಟ್ಟದಲ್ಲಿ ಪ್ರಾರಂಭಿಸಲು ಅನುವಾಗುವಂತೆ 200ಕ್ಕೂ ಹೆಚ್ಚು ಹಾಸಿಗೆಗಳ ಸಾಮಥ್ರ್ಯವಿರುವ ಸರ್ಕಾರಿ ಆಸ್ಪತ್ರೆಗಳನ್ನು ಎನ್.ಎಂ.ಸಿ.ಯ ಅನುಮೋದನೆ ಪಡೆದು ಬೋಧನಾ ಆಸ್ಪತ್ರೆಗಳಾಗಿ ಪರಿವರ್ತನೆ; ಈ ವರ್ಷ ತುಮಕೂರು ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಪ್ರಾರಂಭ.
  • “ಮುಖ್ಯಮಂತ್ರಿ ಆರೋಗ್ಯ ವಾಹಿನಿ” ಯೋಜನೆಯಡಿ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲು ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಂಚಾರಿ ಕ್ಲಿನಿಕ್ ಪ್ರಾರಂಭ.
  • ಸವಣೂರಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ.

ಬಡವರಿಗೆ ವೈದ್ಯಕೀಯ ಶಿಕ್ಷಣ ಒದಗಿಸಲು ಕ್ರಮ:

ಅ. ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ.
ಆ. ಸರ್ಕಾರಿ ಕೋಟಾದಡಿ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜಿಗೆ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿಂದ ಶೈಕ್ಷಣಿಕ ಸಾಲ ಒದಗಿಸಲು ನೆರವು.
ಇ. ಖಾಸಗಿ ವೈದ್ಯಕೀಯ ಕಾಲೇಜುಗಳ ವರ್ಗೀಕರಣ ಹಾಗೂ ಶುಲ್ಕ ನಿಯಂತ್ರಣ ಸಮಿತಿಯ ಮೂಲಕ ಶುಲ್ಕ ನಿಗದಿಪಡಿಸಲು ಕ್ರಮ

ಅಪೌಷ್ಟಿಕತೆ ನಿವಾರಣೆಗೆ ಒತ್ತು

  • ಪೌಷ್ಟಿಕ ಕರ್ನಾಟಕ ಯೋಜನೆಯಡಿ 93 ಕೋಟಿ ರೂ. ವೆಚ್ಚದಲ್ಲಿ ಪ್ರಾಯೋಗಿಕವಾಗಿ ರಾಜ್ಯದ 14 ಜಿಲ್ಲೆಗಳಲ್ಲಿ ಸಾರವರ್ಧಿತ ಅಕ್ಕಿ ವಿತರಣೆ.
  • ಬಾಲ್ಯವಿವಾಹ ಹಾಗೂ ಹೆಣ್ಣುಮಕ್ಕಳು ಶಾಲೆಬಿಡುವುದನ್ನು ತಪ್ಪಿಸಿ, ಅಪೌಷ್ಟಿಕತೆ ನಿವಾರಿಸುವ “ಸ್ಫೂರ್ತಿ” ಯೋಜನೆ ರಾಜ್ಯಾದ್ಯಂತ ವಿಸ್ತರಣೆ.

ಶಿಕ್ಷಣ

  • ರಾಷ್ಟ್ರೀಯ ಶಿಕ್ಷಣ ನೀತಿ-2020ರ ಮಾರ್ಗಸೂಚಿಯಂತೆ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣ, ಶಿಕ್ಷಕರ ಶಿಕ್ಷಣ ಹಾಗೂ ವಯಸ್ಕರ ಶಿಕ್ಷಣ ಕ್ಷೇತ್ರಗಳಿಗೆ ನೂತನ ಪಠ್ಯಕ್ರಮ ರಚನೆ.
  • ಹೋಬಳಿ ಮಟ್ಟದಲ್ಲಿ “ಮಾದರಿ ಶಾಲೆ”ಗಳಾಗಿ ಮೂಲಭೂತ ಸೌಕರ್ಯವಿರುವ ಶಾಲೆಗಳ ಉನ್ನತೀಕರಣ,
  • ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ 500 ಕೋಟಿ ರೂ. ಅನುದಾನ, ಆಯ ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಆದ್ಯತೆ.
  • ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಪೀಠೋಪಕರಣ ಒದಗಿಸಲು 100 ಕೋಟಿ ರೂ.
  • ‘ನೋಡಿ ಕಲಿ ಮಾಡಿ ತಿಳಿ’ ಪರಿಕಲ್ಪನೆಯಡಿ ರಾಜ್ಯದ 169 ಸರ್ಕಾರಿ ಬಾಲಕಿಯರ ಪ್ರೌಢಶಾಲೆಗಳಿಗೆ ಲ್ಯಾಬ್-ಇನ್-ಎ-ಕಿಟ್ ವಿತರಣೆ,
  • ರಾಜ್ಯದ ಹೆಣ್ಣು ಮಕ್ಕಳಿಗೆ  ಮಾಸಿಕ ದಿನಗಳಿಗೆ ನ್ಯಾಪ್ಕಿನ್​ ನೀಡುವುದು.
  • ಕರ್ನಾಟಕ ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಉನ್ನತೀಕರಣ. ಪ್ರತಿಷ್ಠಿತ ವಿದೇಶಿ ವಿಶ್ವವಿದ್ಯಾಲಯಗಳೊಂದಿಗೆ ಒಪ್ಪಂದ.
Donate Janashakthi Media

Leave a Reply

Your email address will not be published. Required fields are marked *