ರಾಜ್ಯದ 17 ನದಿಗಳ ನೀರು ನೇರವಾಗಿ ಕುಡಿಯಲು ಯೋಗ್ಯವಲ್ಲ; ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

ಬೆಂಗಳೂರು: ರಾಜ್ಯದ ಪ್ರಮುಖ 17 ಜೀವನದಿಯ ನೀರು ನೇರವಾಗಿ ಕುಡಿಯಲು ಯೋಗ್ಯವಲ್ಲ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತನ್ನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ನದಿಗಳು ಕಲುಷಿತಗೊಂಡಿದೆ ಎಂದು ವರದಿ ತಿಳಿಸುತ್ತದೆ.

ಮಂಡಳಿಯು ಬಿಡುಗಡೆಗೊಳಿಸಿರುವ ವರದಿಯಲ್ಲಿ ಕಾವೇರಿ, ಕಬಿನಿ, ಕಾಳಿ, ಕೃಷ್ಣ, ಮಲಪ್ರಭಾ, ತುಂಗಭದ್ರಾ, ನೇತ್ರಾವತಿ ಸೇರಿದಂತೆ ಪ್ರಮುಖ ನದಿಗಳ ಬಗ್ಗೆಯೂ ಉಲ್ಲೇಖಿಸಲಾಗಿದೆ. ನದಿ ಪಾತ್ರದ ಪ್ರದೇಶಗಳಲ್ಲಿ ಆಧುನಿಕತೆ ಬೆಳೆದಂತೆ ಪರಿಸರ ಮಾಲಿನ್ಯ ಅಧಿಕ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಇದರಿಂದಾಗಿ ನದಿ ನೀರು ಸಹ ಕಲುಷಿತಗೊಳ್ಳುವ ಪ್ರಮಾಣ ಹೆಚ್ಚಾಗುತ್ತಿದೆ ಎಂದು ತಿಳಿಸಲಾಗಿದೆ.

ಇದನ್ನು ಓದಿ: ಕಲುಷಿತ ನೀರು ಕುಡಿದು ಜನ ಅಸ್ವಸ್ಥ – ಗ್ರಾಮೀಣಾಭಿವೃದ್ಧಿ ಇಲಾಖೆ ಬದುಕಿದೆಯೇ? ಕಾಂಗ್ರೆಸ್‌ ಸರಣಿ ಟ್ವೀಟ್

ಮಾಲಿನ್ಯ ನಿಯಂತ್ರಣ ಮಂಡಳಿಯು 17 ನದಿಗಳ ನೀರನ್ನು ಪರೀಕ್ಷೆಗೆ ಒಳಪಡಿಸಿದ್ದು, ರಾಷ್ಟ್ರೀಯ ನೀರಿನ ಗುಣಮಟ್ಟ ಯೋಜನೆಯಡಿ ನದಿ ಮತ್ತು ಕೆರೆಗಳ ನೀರಿನ ಗುಣಮಟ್ಟದ 2022ರ ಏಪ್ರಿಲ್‌ನಿಂದ ನವೆಂಬರ್‌ವರೆಗಿನ ಅಧ್ಯಯನ ‌ವರದಿಯನ್ನು ಬಿಡುಗಡೆಗೊಳಿಸಿದೆ.

ಅಷ್ಟೇ ಅಲ್ಲದೆ, ಸಾಮಾನ್ಯ ಸಂಸ್ಕರಣೆ ಮಾಡಿ ಕುಡಿಯಬಹುದಾದ ಜಲಮೂಲ ಈಗ ಇಲ್ಲವಾಗಿದೆ ಎಂಬುದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.  ರಾಜ್ಯದ 17 ನದಿಗಳ ನೀರು ಹರಿವಿನಲ್ಲಿ ವಿವಿಧ ಜಿಲ್ಲೆಗಳಲ್ಲಿ 103 ತಪಾಸಣೆ ಕೇಂದ್ರಗಳನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪಿಸಿದೆ. ಅಲ್ಲಿಂದ ನೀರಿನ ಮಾದರಿ ಸಂಗ್ರಹಿಸಿ, ಅಧ್ಯಯನ ನಡೆಸಿ ಗುಣಮಟ್ಟವನ್ನು ದಾಖಲಿಸಿಕೊಂಡಿದೆ. ಐದು ವರ್ಗಗಳಲ್ಲಿ ನೀರಿನ ಮಟ್ಟವನ್ನು ಗುರುತಿಸಲಾಗಿದೆ.

ಇದನ್ನು ಓದಿ: ಶಹಾಪುರದಲ್ಲಿ ಕಲುಷಿತ ನೀರು ಸೇವಿಸಿ 40 ಮಂದಿ ಅಸ್ವಸ್ಥ – ಒಬ್ಬ ನಿಧನ

ಮಹಾನಗರಗಳು ಹಾಗೂ ನಗರಗಳಲ್ಲಿನ ಕಾರ್ಖಾನೆ, ಸಂಸ್ಥೆಗಳು, ಹೊರಸೂಸುವ ರಾಸಾಯನಿಯ ಹಾಗೂ ತ್ಯಾಜ್ಯದಿಂದಲೇ ನೀರು ಕಲುಷಿತವಾಗುತ್ತಿದೆ ಎಂದು ತಿಳಿದುಬಂದಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯವರು ಮಾಲಿನ್ಯ ಉಂಟಾಗುವ ಸ್ಥಳಗಳಲ್ಲಿ ಪ್ಲಾಂಟ್‌ಗಳನ್ನ ರಚನೆ ಮಾಡಿ ನಿಯಂತ್ರಣಕ್ಕೆ ಮುಂದಾಗದಿರುವುದು ಮಾಲಿನ್ಯಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಸರ್ಕಾರ ಕೂಡಲೇ ಎಚ್ಚೆತ್ತು ಮಾಲಿನ್ಯ ನಿಯಂತ್ರಣ ಕ್ರಮವಹಿಸಬೇಕಿದೆ.

ಬೆಂಗಳೂರು ನಗರದ 106 ಕೆರೆಗಳಲ್ಲಿನ ನೀರಿನ ಗುಣಮಟ್ಟವನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ 66 ಕೆರೆಗಳ ನೀರು ಮಾತ್ರ ವನ್ಯಜೀವಿಗಳು ಕುಡಿಯಲು ಮತ್ತು ಮೀನುಗಾರಿಕೆಗೆ ಯೋಗ್ಯ. ಉಳಿದ ಕೆರೆಗಳಲ್ಲಿ ಲೋಹ, ಒಳಚರಂಡಿ ತ್ಯಾಜ್ಯ ಸೇರಿಕೊಂಡು ಕುಡಿಯಲು ಯೋಗ್ಯವಲ್ಲದಷ್ಟು ಕಲುಷಿತಗೊಂಡಿದೆ ಎನ್ನಲಾಗಿದೆ.

ಮಂಡಳಿ ಅಧ್ಯಯನ ನಡೆಸಿದ ನದಿಗಳು

ಅರ್ಕಾವತಿ ನದಿ, ಲಕ್ಷ್ಮಣ ತೀರ್ಥ ನದಿ, ಮಲಪ್ರಭಾ ನದಿ, ತುಂಗಭದ್ರಾ ನದಿ, ಭದ್ರಾ ನದಿ, ಕಾವೇರಿ ನದಿ, ಕಬಿನಿ ನದಿ, ಕಗಿನಿ ನದಿ, ಕಾಳಿ ನದಿ, ಕೃಷ್ಣ ನದಿ, ಅಸಂಗಿ ಕೃಷ್ಣ ನದಿ, ಶಿಂಷಾ ನದಿ, ಭೀಮಾ ನದಿ, ನೇತಾವತಿ ನದಿ, ಕುಮಾರಧಾರ ನದಿ, ತುಂಗಾ ನದಿ, ಯಗಚಿ ನದಿಗಳ ನೀರು ನೇರವಾಗಿ ಕುಡಿಯಲು ಯೋಗ್ಯವಲ್ಲವೆಂದು ತಿಳಿದು ಬಂದಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *