- ಕೆಲ ಪ್ರದೇಶಗಳಲ್ಲಿ ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ
- ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ರಾಜ್ಯ ಹವಾಮಾನ ಇಲಾಖೆ ಬುಧವಾರ ರೆಡ್ ಅಲರ್ಟ್ ಘೋಷಿಸಿದೆ.
ಕಳೆದವಾರ ಆಸಾನಿಯ ಚಂಡಮಾರುತ ಚನೈ ರಾಜ್ಯದಲ್ಲಾದರು ಅದರ ಪ್ರಭಾವ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಿಗೂ ತಟ್ಟಿತ್ತು. ನಂತರ ಹಲವು ರಾಜ್ಯಗಳಲ್ಲಿ ವರುಣನ ಅರ್ಭಟಕ್ಕೆ ಮಳೆ, ಗಾಳಿ,ಸಿಡಿಲು, ಗುಡುಗಿನಿಂದ ಜನರು ತತ್ತರಿಸಿದ್ದರು. ಇದಾದ ನಂತರ ಮಳೆ ಸ್ವಲ್ಪ ಬಿಡುವನ್ನ ನೀಡಿದ್ದು ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ ರಾಜ್ಯಕ್ಕೆ ಮತ್ತೆ ಹೆಚ್ಚು ಮಳೆಯಾಗುವುದು ಹವಾಮಾನ ಇಲಾಖೆಯಿಂದ ತಿಳಿದು ಬಂದಿದೆ.
ಕರ್ನಾಟಕದ ಹಲವು ಜಿಲ್ಲೆಗಳಾದ ಕಾರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡು,ಸೇರಿದಂತೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಬಾರಿ ಮಳೆಯಾಗುವ ಸೂಚನೆಯಿದ್ದು, ಇಂದು ಕರಾವಳಿ ಪ್ರದೇಶದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಆ ಪ್ರದೇಶಗಳಿಗೆ ರೆಡ್ ಅಲರ್ಟ್ ಸೂಚಿಸಲಾಗಿದೆ. ಹಾಗು ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿಯೂ ಐದು ದಿನ ಸಾಧಾರಣ ಮಳೆ ಇರಲಿದ್ದು, ಕೆಲ ಪ್ರದೇಶಗಳಲ್ಲಿ ಮಾತ್ರ ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯತಜ್ಞ ಪ್ರಸಾದ್ ಹೇಳಿದ್ದಾರೆ.
ರಾಜ್ಯದಲ್ಲಿ ಈಗಾಗಲೆ ಗಾಳಿ ಮತ್ತು ಸಿಡಿಲಿನ ಅಬ್ಬರಕ್ಕೆ ಸಾವುಗಳು ಸಂಬವಿಸಿದ್ದು,ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮೇ 17ರಿಂದ 20ವರೆಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಂಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಕ್ಕ ಪಕ್ಕದ ಪ್ರದೇಶಗಳಲ್ಲಿ ಕಡಿಮೆ ಉಷ್ಣವಲಯದ ನೈರುತ್ಯ ಮಾರುತಗಳು ಬಲಗೊಳ್ಳುವುದರಿಂದ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಕಚೇರಿ ತಿಳಿಸಿದೆ. ಇಂದಿನಿಂದ ಕರಾವಳಿ ಭಾಗದಲ್ಲಿ ಬಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ.