- ರಾಜ್ಯದಲ್ಲಿ 15 ಜಿಲ್ಲೆ ಸೇರಿದಂತೆ ಬಾರಿ ಮಳೆ ಸಾಧ್ಯತೆ
- ಇಂದು ಮತ್ತು ನಾಳೆ ‘ಯೆಲ್ಲೋ ಅಲರ್ಟ್ ಘೋಷಿಣೆ
ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ (ಸೆ:11ರ ವರೆಗೆ) ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ಶಿವಮೊಗ್ಗ, ಕೊಡಗು, ತುಮಕೂರು, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಇಂದು ಮತ್ತು ನಾಳೆ ‘ಯೆಲ್ಲೋ ಅಲರ್ಟ್ ಘೋಷಿಣೆ ಮಾಡಲಾಗಿದೆ.
ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಕಳೆದ ದಿನದಿಂದ ಹಲವು ಕಡೆಗಳಲ್ಲಿ ಮಳೆಯಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ 8 ಸೆಂ.ಮೀ, ದಕ್ಷಿಣ ಕನ್ನಡದ ಮಾನಿ 5, ಉಡುಪಿ ಜಿಲ್ಲೆಯ ಬ್ರಹ್ಮಾವರ, ಆಗುಂಬೆ ತಲಾ 4, ಉಡುಪಿಯ ಕಾರ್ಕಳ, ಬೆಳ್ತಂಗಡಿಯಲ್ಲಿ 3 ಸೆಂ.ಮೀ ಮಳೆಯಾಗಿದೆ.