ರಾಜ್ಯದಲ್ಲಿ ಕೋವಿಡ್‌ 3ನೇ ಅಲೆ ಆತಂಕ: ಸರ್ಕಾರಕ್ಕೆ ಸಲಹೆ ನೀಡಿದ ಸಿದ್ದರಾಮಯ್ಯ

ಮೈಸೂರು: “ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ 3ನೇ ಅಲೆಯ ಭೀತಿಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸದೇ ಸಕಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ʻʻ2ನೇ ಅಲೆಯನ್ನು ನಿರ್ಲಕ್ಷಿಸಿದ ಪರಿಣಾಮ ಅನೇಕ ಸಾವುಗಳು ಉಂಟಾದವು. 3ನೇ ಅಲೆ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯಕ್ಕೆ ಮೂರನೇ ಅಲೆ ಎದುರಾಗದಂತೆ ಎಚ್ಚರ ವಹಿಸಬೇಕಾದುದು ಸರ್ಕಾರದ ಕರ್ತವ್ಯವಾಗಿದೆ. ಅತ್ಯಂತ ಪ್ರಮುಖವಾಗಿ ಸಾವು ನೋವು ಹೆಚ್ಚಾಗದಂತೆ ಸರ್ಕಾರ ತ್ವರಿತ ನಿರ್ಧಾರವನ್ನು ಕೈಗೊಳ್ಳಬೇಕು” ಎಂದು ಹೇಳಿದರು.

ʻʻಕೋವಿಡ್‌-19ರ ಸಾಂಕ್ರಾಮಿಕತೆಯ ಹೊಸ ರೂಪಾಂತರಿ ತಳಿಗಳು ಕಾಣಿಸಲು ಆರಂಭಿಸಿದೆ. ಈಗಾಗಲೇ ಹಲವು ದೇಶಗಳಲ್ಲಿ ಓಮಿಕ್ರಾನ್‌ ಎಷ್ಟು ಆತಂಕಕ್ಕೆ ಕಾರಣವಾಗಿದೆ. ಇದು ಭಾರತಕ್ಕೂ ಬರಬಹುದು ಎನ್ನಲಾಗಿದ್ದು, ಕರ್ನಾಟಕ ಸರ್ಕಾರ ವಿದೇಶದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಬೇಕು” ಎಂದು ಹೇಳಿದರು.

‘ಕೊರೊನಾ 3ನೇ ಅಲೆ ಬಂದ ನಂತರದಲ್ಲಿ ಸರ್ಕಾರವು ಕಾರ್ಯಪ್ರವೃತ್ತ ಆಗಬಾರದು. ಮುಂಚಿತವಾಗಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮವನ್ನು ವಹಿಸಬೇಕು” ಎಂದು ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದರು.

ಕೊರೊನಾ 1 ಮತ್ತು 2ನೇ ಅಲೆ ಸಂದರ್ಭದಲ್ಲಿ ನಿರ್ಲಕ್ಷ್ಯ ವಹಿಸಿದಂತೆ ಅಗತ್ಯ ಕ್ರಮಕೈಗೊಂಡು, ಆಸ್ಪತ್ರೆ, ಬೆಡ್, ಆಕ್ಸಿಜನ್, ವೆಂಟಿಲೇಟರ್ ಸಮಸ್ಯೆ ಆಗದಂತೆ ಎಚ್ಚರವಹಿಸಲು ಸಲಹೆ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *