ಬೆಂಗಳೂರು: ಕೋವಿಡ್ ಪ್ರಕರಣಗಳ ಉಲ್ಬಣದಿಂದಾಗಿ ರಾಜ್ಯದಲ್ಲಿ ಮತ್ತಷ್ಟು ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ನೆನ್ನೆಯಿಂದ ಜಾರಿಗೊಳಿಸಿದ ರಾಜ್ಯ ಸರಕಾರದ ಮಾರ್ಗಸೂಚಿ ಅನ್ವಯ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಗಿಗೊಳಿಸಲು ದಿಟ್ಟ ಕ್ರಮಕ್ಕೆ ಮುಂದಾಗಿರುವ ಸರಕಾರವು ಲಾಕ್‌ಡೌನ್ ಮಾದರಿಯಲ್ಲಿ ಜಾರಿಗೊಳಿಸುತ್ತಿದೆ.
ಇದನ್ನು ಓದಿ: ಆಕ್ಸಿಜನ್ ಗೆ ಪರದಾಟ ಕೇರಳದಲ್ಲಿ ಮಾತ್ರ ಇಲ್ಲ
ಇಂದು ಆಸ್ಪತ್ರೆಯಿಂದ ಮರಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಣಿಪಾಲ್ ಆಸ್ಪತ್ರೆಯಿಂದ ಮುಖ್ಯಮಂತ್ರಿ ಗೃಹಕ್ಕೆ ಮರಳುವ ಮಾರ್ಗಮಧ್ಯದಲ್ಲಿ ಅಂಗಡಿಗಳು ತೆರೆದಿರುವ ಬಗ್ಗೆ ಸಿಟ್ಟಾದ ಮುಖ್ಯಮಂತ್ರಿಗಳು ಬೆಂಗಳೂರು ಪೊಲೀಸ್ ಆಯುಕ್ತರಾದ ಕಮಲ್ ಪಂಥ್ ಅವರನ್ನು 144 ಸೆಕ್ಷನ್ ಜಾರಿಯಲ್ಲಿದ್ದರೂ ಅಂಗಡಿಗಳು ತೆರೆದಿವೆ. ಹೀಗಾದರೆ ಸರಕಾರದ ಮಾರ್ಗಸೂಚಿಗೆ ಏನು ಬೆಲೆ ಎಂದು ತರಾಟೆಗೆ ತೆಗೆದಕೊಂಡಿದ್ದಾರೆ.
ಮುಖ್ಯಮಂತ್ರಿಗಳ ಆದೇಶದ ಮೇರೆಗೆ ನಗರದಲ್ಲಿಯೂ ಅಗತ್ಯ ವಸ್ತುಗಳ ಅಂಗಡಿಗಳನ್ನು ಬಿಟ್ಟು ಉಳಿದ ಎಲ್ಲಾ ಅಂಗಡಿಗಳನ್ನು ಮುಚ್ಚಿಸಲು ಪೊಲೀಸರು ಮುಂದಾಗಿದ್ದಾರೆ.
ಲಾಕ್‌ಡೌನ್ ರೀತಿ ಬಿಗಿ ಕ್ರಮ:
ಅಗತ್ಯ ವಸ್ತುಗಳ ಹೊರತಾಗಿ ಉಳಿದ ಎಲ್ಲಾ ವ್ಯಾಪಾರ, ವಹಿವಾಟುಗಳನ್ನು ಬಂದ್ ಮಾಡಲಾಗಿದೆ ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗಿದೆ ಎಂದು ಚಿಕ್ಕಮಗಳೂರು ಡಿಸಿ ರಮೇಶ್ ತಿಳಿಸಿದ್ದಾರೆ. ಸರಕಾರದ ಆದೇಶದಂತೆ ಜಿಲ್ಲೆಯಲ್ಲಿ ಬಿಗಿಯಾದ ಕ್ರಮಕ್ಕೆ ಜಿಲ್ಲಾಡಳಿತ ಮುಂದಾಗಿದೆ.
ಇದನ್ನು ಓದಿ: 1500 ಮೆಟ್ರಿಕ್ ಟನ್ ಆಮ್ಲಜನಕ ಪೋರೈಸಿ : ರಾಜ್ಯ ಸರಕಾರದಿಂದ ಕೇಂದ್ರಕ್ಕೆ ಪತ್ರ
ಹಾಸನ ಜಿಲ್ಲೆಯಲ್ಲಿಯೂ ಲಾಕ್‌ಡೌನ್ ಜಾರಿ ಮಾಡಿದ್ದು ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಆದೇಶ ಜಾರಿ ಮಾಡಲಾಗಿದ್ದು, ಬಟ್ಟೆ ಅಂಗಡಿ, ಎಲೆಕ್ಟ್ರಾನಿಕ್ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶಿಸಲಾಗಿದೆ. ದಿನಸಿ, ಹಾಲು, ಮಾಂಸ, ಮೀನು ಮಾರಾಟ ಹಾಗೂ ಕೃಷಿ ಮತ್ತು ಕಟ್ಟಡ ನಿರ್ಮಾಣ ಸಂಬಂಧದ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರವೇ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಉಡುಪಿಯಲ್ಲಿ ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಅಗತ್ಯ ಸೇವೆಗೇ ಮಾತ್ರ ಸೀಮಿತಗೊಂಡಿರುವ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಬೇರೆಲ್ಲಾ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
ಅಂಗಡಿಗಳನ್ನು ಮುಚ್ಚುವಂತೆ ಮೈಕ್‌ಗಳ ಮೂಲಕ ಪ್ರಚಾರ ಕೈಗೊಂಡ ಅಧಿಕಾರಿಗಳು, ಮುಚ್ಚುವ ಲಕ್ಷಣ ಕಾಣಿಸದ ಅಂಗಡಿಗಳಿಗೆ ತೆರಳಿ ಅರ್ಧಗಂಟೆಯೊಳಗೆ ಅಂಗಡಿಯನ್ನು ಮುಚ್ಚುವಂತೆ ಹೇಳಿದ್ದಾರೆ. ಇಲ್ಲದೇ ಹೋದರೆ ಕ್ರಿಮಿನಲ್ ಮೊಕದ್ದಮೆ ಹೂಡುವ ಎಚ್ಚರಿಕೆ ನೀಡಿದರು.
ಇದನ್ನು ಓದಿ: ಕೋವಿಡ್ ನಿರ್ವಹಣೆಯಲ್ಲಿ ಹಿನ್ನಡೆ: ಕೇಂದ್ರಕ್ಕೆ ಪ್ರಶ್ನೆ ಮಾಡಿದ ಸುಪ್ರೀಂ
ದಕ್ಷಿಣ ಕನ್ನಡ ಜಿಲೆಯಲ್ಲಿಯೂ ಸರಕಾರದ ಆದೇಶ ಹೊರತಾಗಿಯೂ ಅಂಗಡಿ ಮುಂಗಟ್ಟುಗಳು ತೆರೆದಿದ್ದುದನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸರ ನೆರವಿನಿಂದ ಮುಚ್ಚಿಸಿದ ಘಟನೆಯೂ ನಡೆದಿದೆ.
ಸರಕಾರದ ಪರಿಷ್ಕೃತ ಆದೇಶದಂತೆ ಪಡಿತರ ಅಂಗಡಿಗಳು, ತರಕಾರಿ, ಡೈರಿ ಸೇರಿದಂತೆ ದಿನಬಳಕೆಯ ಸಾಮಗ್ರಿಗಳ ಅಂಗಡಿ ಮುಂಗಟ್ಟುಗಳಿಗೆ ಅವಕಾಶವಿದ್ದು, ಉಳಿದಂತೆ ಇತರ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ಹೇಳಲಾಗಿದೆ. ಜಿಲ್ಲೆಯ ಎಪಿಎಂಸಿ ಮಾರುಕಟ್ಟೆಯನ್ನು ಸಹ ಸತತ ನಾಲ್ಕು ದಿನಗಳವರೆಗೂ ರಜೆ ಘೋಷಣೆ ಮಾಡಿದ್ದು ಏಪ್ರಿಲ್ 24, 25, ಮೇ 1, 2ರಂದು ಎಲ್ಲಾ ರೀತಿಯ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ ಎಂದು ಕಾರ್ಯದರ್ಶಿ ಘೋಷಣೆ ಮಾಡಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿಯೂ ಸರಕಾರದ ಹೊಸ ಮಾರ್ಗಸೂಚಿಯಂತೆ ಕೊರೊನಾ ಉಲ್ಬಣಗೊಳ್ಳದಂತೆ ಇನ್ನಷ್ಟು ಕಠಿಣ ಕ್ರಮಕ್ಕೆ ಮುಂದಾಗಿರುವ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ನಗರದ ವಿವಿಧೆಡೆಯೇ ಮಧ್ಯಾಹ್ನದಿಂದ ಅಂಗಡಿಗಳನ್ನು ಬಂದ್ ಮಾಡಿಸಿವೆ.
ಚಿಕ್ಕಬಳ್ಳಾಪುರ ನಗರದಲ್ಲಿಯೂ ಪೊಲೀಸರು, ನಗರಸಭೆಯ ಅಧಿಕಾರಿಗಳು ಅಗತ್ಯ ವಸ್ತುಗಳಲ್ಲದ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಂತೆ ಅಂಗಡಿ ಮಾಲೀಕರ ತೀವ್ರವಾದ ಆಕ್ರೋಶಗೊಂಡರು.
ಬಿ ಬಿ ರಸ್ತೆಯಲ್ಲಿ ಪೊಲೀಸರು ಹಾಗೂ ಗಂಗಮ್ಮನ ಗುಡಿ ರಸ್ತೆ, ಬಜಾರ್ ರಸ್ತೆಯಲ್ಲಿ ನಗರಸಭೆ ಸಿಬ್ಬಂದಿಗಳು ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಏಕಾಏಕಿ ಬಾಗಿಲು ಮುಚ್ಚಿಸಲು ಮುಂದಾಗುತ್ತಿದ್ದಂತೆ ವ್ಯಾಪಾರಿಗಳು ಪೊಲೀಸರು ಮತ್ತು ನಗರಸಭೆ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ್ದಾರೆ.