ರಾಜ್ಯವನ್ನು ಲಾಕ್‌ಡೌನ್‌ ಮಾಡುವುದು ಅನಿವಾರ್ಯ: ಮುಖ್ಯಮಂತ್ರಿ ಬಿಎಸ್‌ವೈ

ಬೆಂಗಳೂರು: ರಾಜ್ಯದಲ್ಲಿ ಹೇರಲಾಗಿರುವ ಕರ್ಫ್ಯೂ ನಿರೀಕ್ಷಿತವಾಗಿ ಫಲ ನೀಡದೆ ಇರುವುದರಿಂದ ಇನ್ನು ಕಠಿಣ ನಿಯಮ ಅಥವಾ ಲಾಕ್‌ಡೌನ್‌ ಮಾಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಇಂದು ಬೆಳಿಗ್ಗೆ ನಗರದ ಅಣ್ಣಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು ಒಂದೆರಡು ದಿನಗಳಲ್ಲಿ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಯ ಬಗ್ಗೆ ಅಧಿಕೃತವಾಗಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿಗಳು ಸುಳಿವು ನೀಡಿದ್ದಾರೆ.

ಇದನ್ನು ಓದಿ: ಆಕ್ಸಜಿನ್‌ ಘಟಕವಿದೆ ಆದರೆ ಉತ್ಪಾದನೆ ಇಲ್ಲ : ಡಿಸಿಎಂ ನಿರ್ಲಕ್ಷ್ಯವೇ ಕಾರಣ

ಇಂದು ಮುಖ್ಯಮಂತ್ರಿಗಳು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿದರು. ಉಪಮುಖ್ಯಮಂತ್ರಿಗಳಾದ ಡಾ. ಸಿ ಎನ್‌ ಅಶ್ವಥನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಡಾ. ಕೆ. ಸುಧಾಕರ್‌, ಆರ್.‌ ಅಶೋಕ, ಅರವಿಂದ ಲಿಂಬಾವಳಿ ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ರಾಜ್ಯ ಸರಕಾರವು ಏಪ್ರಿಲ್‌ 27 ರಿಂದ ರಾಜ್ಯದಲ್ಲಿ 14 ದಿನಗಳ ಕಠಿಣ ನಿಯಮಗಳೊಂದಿಗೆ ಜನತಾ ಕರ್ಫ್ಯೂ ಜಾರಿಗೊಳಿಸಿತು. ಆದರೂ ಸಹ ಏನೂ ಪ್ರಯೋಜನ ಕಾಣದ ಪರಿಣಮವಾಗಿ ಕಾಣಲಿಲ್ಲ. ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ, ದಿನೇ ದಿನೇ ಹೆಚ್ಚುತ್ತಿಲೆ ಇರುವ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಆತಂಕವನ್ನು ಸೃಷ್ಠಿಸಿದೆ.

ಇದನ್ನು ಓದಿ: ಆಕ್ಸಿಜನ್‌ಗಾಗಿ ನಿಲ್ಲದ ಹಾಹಾಕಾರ – ಕರ್ನಾಟಕದಲ್ಲಿ ಆಕ್ಸಿಜನ್‌ ಉತ್ಪಾದನೆ ಹೇಗಿದೆ?

ಕೋವಿಡ್‌ ನಿಂದ ಸೋಂಕಿಗೆ ಒಳಗಾದವರನ್ನು ಮೊದಲು ಅವರ ಚಿಕಿತ್ಸೆ ಮೊದಲು ಆದ್ಯತೆ ನೀಡಬೇಕು ಅದನ್ನು ಬಿಟ್ಟು ಸೋಂಕಿತರನ್ನು ಮುಖ್ಯಮಂತ್ರಿ ನಿವಾಸ ಮತ್ತು ವಿಧಾನಸೌಧದ ಮುಂದೆ ತಂದು ನಿಲ್ಲಿಸುವುದು ಸರಿಯಲ್ಲ. ಅವರು ಬರುವುದು ತಪ್ಪು ಎಂದು ಹೇಳುತ್ತಿಲ್ಲ, ತೊಂದರೆ ಇರುವುದು ನಿಜ. ಗೊತ್ತಾದ ತಕ್ಷಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಕರ್ಫ್ಯೂ ಸಂದರ್ಭದಲ್ಲೂ ಜನರು ಆ ನಿಯಮಗಳನ್ನು ಪಾಲಿಸದೆ ಉಲ್ಲಂಘನೆ ಮಾಡುತ್ತಿದ್ದಾರೆ. ಹಾಗಾಗಿ ಇನ್ನಷ್ಟು ಕಠಿಣ ನಿಯಮ ಅಥವಾ ಲಾಕ್‌ಡೌನ್‌ ಜಾರಿ ಮಾಡುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ಸಚಿವರು ಮತ್ತು ಅಧಿಕಾರಿಗಳ ಜತೆ ಇವತ್ತು ಸಭೆ ಇದೆ. ಇವತ್ತು ಅಥವಾ ನಾಳೆ ಈ ಸಂಬಂಧ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಈಗಾಗಲೇ ಹಲವಾರು ಸಚಿವರು, ಜನಪ್ರತಿನಿಧಿಗಳು ಕೋವಿಡ್‌ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೂಡಲೇ ಲಾಕ್‌ಡೌನ್‌ ಮಾಡಬೇಕೆಂದು ಅಭಿಪ್ರಾಯ ತಿಳಿಸಿದ್ದಾರೆ. ಸ್ವತಃ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಒಳಗೊಂಡು ಸಚಿವರಾದ ಶಶಿಕಲಾ ಜೊಲ್ಲೆ, ಸಂಸದರಾದ ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ ಸೇರಿದಂತೆ ಹಲವರು ಲಾಕ್‌ಡೌನ್‌ ಮಾಡಬೇಕೆಂದು ಸೂಚನೆಗಳನ್ನು ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *