ರಾಜ್ಯದಲ್ಲಿ ನೈಟ್, ವೀಕೆಂಡ್ ಕರ್ಫ್ಯೂ ಇಲ್ಲ: ವಾರದ ಬಳಿಕ ಪರಿಸ್ಥಿತಿ ನೋಡಿಕೊಂಡು ನಿರ್ಧಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಸಂಬಂಧ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇರಳ ವಿದ್ಯಾರ್ಥಿಗಳು ಹಾಗೂ ಗಡಿಭಾಗದಲ್ಲಿ ಬರುವವರಿಗೆ ಕೋವಿಡ್‌ ಪರೀಕ್ಷೆ ಮಾಡುವುದನ್ನು ಮುಂದುವರಿಯುತ್ತದೆ. ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಬಗ್ಗೆ ಮುಂದಿನ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಿದರು.

ವಾರದ ಬಳಿಕ ಮುಂದಿನ ಬೆಳವಣಿಗೆಗಳನ್ನು ಅವಲೋಕಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದ ಅವರು, ವಾರದ ಬಳಿಕ ಕ್ರಿಸ್‌ಮಸ್, ಹೊಸ ವರ್ಷಾಚರಣೆ ಬಗ್ಗೆ ನಿರ್ಧಾರ ಮಾಡಲಾಗುವುದು. ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಮುಂದುವರಿಯುತ್ತೆ. ಮೂವರಿಗೆ ಕೊರೊನಾ ಪಾಸಿಟಿವ್ ಬಂದರೆ ಕ್ಲಸ್ಟರ್ ಮಾಡುತ್ತೇವೆ.  ಸದ್ಯಕ್ಕೆ ಹೊಸದಾಗಿ ಯಾವುದೇ ನಿರ್ಬಂಧ ವಿಧಿಸಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ.

ತಾಂತ್ರಿಕ ಸಲಹಾ ಸಮಿತಿ ಇನ್ನೆರಡು ದಿನದಲ್ಲಿ ಶಿಫಾರಸ್ಸುಗಳನ್ನು ಸಲ್ಲಿಸಲಿದೆ. ಅದನ್ನು ಪರಿಶೀಲಿಸಿದ ಬಳಿಕ ಸರ್ಕಾರ ಮುಂದಿನ ನಿರ್ಧಾರ ಕೈಗೊಳ್ಳಲಿದೆ. ಬಹುತೇಕ ಸಭೆ, ಸಮಾರಂಭ, ಮೆರವಣಿಗೆ, ಕಾರ್ಯಕ್ರಮಗಳು, ಹೊಸ ವರ್ಷಾಚರಣೆಗಳಿಗೆ ನಿರ್ಬಂಧ ಹೇರುವ ಸಾಧ್ಯತೆಗಳಿವೆ.

ಇಂದಿನ ಸಭೆಯಲ್ಲಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಸಚಿವ ನಾರಾಯಣಗೌಡ, ಸಚಿವ ಸುನಿಲ್ ಕುಮಾರ್ ಸೇರಿ ಪ್ರಮುಖರು ಉಪಸ್ಥಿತರಿರಲಿಲ್ಲ.

ಮುಂಜಾಗ್ರತ ಕ್ರಮಕೈಗೊಳ್ಳಲು ತಾಂತ್ರಿಕ ಸಲಹಾ ಸಮಿತಿ

ಸಚಿವ ಸಂಪುಟ ಸಭೆ ಬಳಿಕ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ. ಎಂ. ಕೆ. ಸುದರ್ಶನ್ ಎಚ್ಚರಿಕೆ ನೀಡಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿದ್ದರೆ ತೊಂದರೆಗಳು ಎದುರಾಗಲಿವೆ. ನೈಟ್ ಕರ್ಫ್ಯೂ ಅಥವಾ ಲಾಕ್​ಡೌನ್ ಮಾಡಬಾರದು ಎಂದರೆ ಈಗಲೇ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಸಮಾರಂಭಗಳು, ಜನ ಸೇರುವ ಕಾರ್ಯಕ್ರಮಗಳು, ಜಾತ್ರೆಗಳು, ಮದುವೆಗಳಿಗೆ ಜನದಟ್ಟಣೆಯಾಗದಂತೆ ನೀಡಿಕೊಳ್ಳಬೇಕು. ಹೊಸ ವರ್ಷಾಚರಣೆಗೆ ಅವಕಾಶ ನೀಡಬಾರದು. ಪ್ರತಿಭಟನೆಗಳಿಗೆ ಅವಕಾಶ ಬೇಡ. ಚುನಾವಣಾ ಫಲಿತಾಂಶದ ಸಂಭ್ರಾಮಾಚರಣೆ ಬೇಡ. ಇದಕ್ಕೆ ಮುಖ್ಯಮಂತ್ರಿಗಳು ಬಹುತೇಕ ಒಪ್ಪಿಗೆ ಸೂಚಿಸಿದ್ದಾರೆ ಎಂದು ಡಾ.ಎಂಕೆ ಸುದರ್ಶನ್ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *