ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ 24308 ಮಕ್ಕಳು: ಹೈಕೋರ್ಟ್ ಗೆ ಮಾಹಿತಿ

ಬೆಂಗಳೂರು: ಕರ್ನಾಟಕದಲ್ಲಿ ಶಾಲೆಗಳಿಂದ ಹೊರಗುಳಿಯುವ ಮಕ್ಕಳ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಬಗ್ಗೆ ಕರ್ನಾಟಕ ಹೈಕೋರ್ಟಿಗೆ ಸಲ್ಲಿಸಲಾದ ಮಾಹಿತಿಯಲ್ಲಿ ಬಹಿರಂಗಗೊಂಡಿದ್ದು, ವರದಿಯಂತೆ ಸದ್ಯ 24,308 ಮಕ್ಕಳು ಶಾಲೆಗಳಿಂದ ಹೊರಗುಳಿದಿದ್ದಾರೆ ಎಂಬುದು ತಿಳಿದುಬಂದಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರ ವಿಭಾಗೀಯ ಪೀಠಕ್ಕೆ ರಾಜ್ಯ ಅಂತರ್ ಇಲಾಖಾ ಉನ್ನತಾಧಿಕಾರ ಸಮಿತಿ ಸಭೆಯ ನಡಾವಳಿಗಳು ಮತ್ತು ತೆಗೆದುಕೊಂಡ ಕ್ರಮಗಳನ್ನು ನ್ಯಾಯಾಲಯ ಆಲಿಸಿತು.

ಕರ್ನಾಟಕ ಹೈಕೋರ್ಟ್ ನೀಡಲಾಗಿರುವ ಮಾಹಿತಿಯಂತೆ ರಾಜ್ಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ 24,308ರಷ್ಟಿದ್ದು, ಈ ಪೈಕಿ 14,963 ಡ್ರಾಪ್‌ಔಟ್‌ಗಳು ಮತ್ತು ಈ ಪೈಕಿ ಎಂದಿಗೂ ದಾಖಲಾಗದ 9,345 ಮಕ್ಕಳಿದ್ದಾರೆ ಎನ್ನಲಾಗಿದೆ. ಅಂತೆಯೇ 11,710 ಡ್ರಾಪ್‌ಔಟ್‌ಗಳು ಮತ್ತು 6,874 ಸೇರಿದಂತೆ 6-14 ವರ್ಷ ವಯಸ್ಸಿನ 18,584 ಮಕ್ಕಳನ್ನು ಪತ್ತೆಹಚ್ಚಲಾಗಿದೆ ಎಂದು ಕರ್ನಾಟಕ ಹೈಕೋರ್ಟ್‌ಗೆ ತಿಳಿಸಲಾಗಿದೆ. ಒಟ್ಟಾರೆಯಾಗಿ, 5,724 ಮಕ್ಕಳನ್ನು (3,253 ಡ್ರಾಪ್‌ಔಟ್‌ಗಳು ಮತ್ತು 2,471 ಎಂದಿಗೂ ದಾಖಲಾಗದ) ಇನ್ನೂ ಪತ್ತೆ  ಹಚ್ಚಬೇಕಿದೆ ಎನ್ನಲಾಗಿದೆ.

6-14 ವರ್ಷದೊಳಗಿನ ಒಎಸ್‌ಸಿ ಮಕ್ಕಳನ್ನು ಗುರುತಿಸುವಿಕೆಯನ್ನು ಮುಂದುವರಿಸಲು ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗಳಿಗೆ ನಿರ್ದೇಶನಗಳನ್ನು ನೀಡುವಂತೆ ಮತ್ತು ಅಂತಹ ಮಕ್ಕಳನ್ನು ನಿಗದಿತ ಸಮಯದೊಳಗೆ ಶಿಕ್ಷಣದ ಮುಖ್ಯವಾಹಿನಿಗೆ ತರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅಮಿಕಸ್ ಕ್ಯೂರಿ ನ್ಯಾಯಾಲಯವನ್ನು ಕೋರಿದರು.

ಅಂತೆಯೇ ನ್ಯಾಯಾಲಯವು 3-6 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ದಾಖಲಾತಿ ಮಾಡಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಿಗೆ ನಿರ್ದೇಶನ ನೀಡುವಂತೆ ಮತ್ತು ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವಂತೆ ವರದಿಯಲ್ಲಿ ತಿಳಿಸಲಾಗಿದೆ. ದಾಖಲಾತಿಯಲ್ಲಿನ ಪ್ರಗತಿಯ ಕುರಿತು ಸ್ಥಿತಿ ವರದಿಯನ್ನು ಒದಗಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಮುಂದಿನ ಸ್ಥಿತಿಗತಿ ವರದಿಯನ್ನು ಸಲ್ಲಿಸಲು ರಾಜ್ಯ ಸರ್ಕಾರಕ್ಕೆ 12 ವಾರಗಳ ಕಾಲಾವಕಾಶವನ್ನು ನೀಡಿದೆ.

Donate Janashakthi Media

Leave a Reply

Your email address will not be published. Required fields are marked *