ಬೆಂಗಳೂರು : ಇಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿಯಗಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೋವಿಡ್ 19 ರ ಹೊಸ ಮಾದರಿಯ ವೈರಾಣುವಿನ ಆತಂಕದ ಹಿನ್ನಲೆಯಲ್ಲಿ ರಾಜ್ಯದಲ್ಲಿ ನೈಟ್ ಜಾರಿಗೊಳಿಸಲಾಗಿದೆ. ಜನವರಿ 2 ರವರಗೆ ಜಾರಿಯಲ್ಲಿರಲಿದೆ ಎಂದು ಸಿಎಂ ತಿಳಿಸಿದ್ದಾರೆ.
ರಾಜ್ಯಕ್ಕೆ ಈಗಾಗಲೇ ಇಂಗ್ಲೆಂಡ್ ನಿಂದ ಬಂದಿರುವವರನ್ನು ಪತ್ತೆ ಹಚ್ಚಿ, ಅವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈ ಮೂಲಕ ಹೊಸ ಮಾದರಿಯ ಕೊರೋನಾದ ಅಲೆಯನ್ನು ತಡೆಗಟ್ಟಲು ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮೂಲಕ ಕೊರೋನಾ ಹೊಸ ರೂಪಾಂತರದ ಅಲೆಯ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ. ಆ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಸರಕಾರದ ಈ ದಿಢೀರ್ ನೈಟ್ ಕರ್ಫ್ಯೂ ಜಾರಿ ಘೋಷಣೆಗೆ ಟ್ರಾವೆಲ್ಸ್ ಮಾಲೀಕರ ಸಂಘ ವಿರೋಧವನ್ನು ವ್ಯಕ್ತಪಡಿಸಿದೆ. ಈಗಾಗಲೆ ಎರಡು ದಿನಕ್ಕೆ ಜನರು ಬಸ್ ಗಳನ್ನು ಬುಕ್ ಮಾಡಿದ್ದಾರೆ. ಅವರುಗಳಿಗೆ ಏನು ಹೇಳುವುದು. ಸರಕಾರಿ ಕಳೆದ ಬಾರಿಯು ಈ ರೀತಿ ತರಾತುರಿ ನಿರ್ಧಾರ ತೆಗೆದುಕೊಂಡಿದ್ದರಿಂದ ನಮಗೆ ಸಾಕಷ್ಟು ಸಂಕಷ್ಟ ಎದುರಾಗಿತ್ತು. ಈಗ ಸರಕಾರ ತನ್ನ ಹಳೆ ಚಾಳಿಯನ್ನು ಮುಂದುವರೆಸಿದೆ ಎಂದು ಟ್ರಾವೆಲ್ ಮಾಲಿಕರ ಸಂಘ ಬೇಸರ ವ್ಯಕ್ತಪಡಿಸಿದೆ.
ಈ ಕುರಿತು ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರದ ಕುರಿತು ಇನ್ನು ಮಾರ್ಗ ಸೂಚಿ ಕೈ ಸೇರಿದ ಬಳಿಕ ಬಸ್ ಸಂಚಾರ ಬಂದ್ ಮಾಡಬೇಕಾ ಅಥವಾ ಬೇಡವಾ ಎನ್ನುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.