ರಾಜ್ಯಕ್ಕೆ ಆಕ್ಸಿಜನ್‌ ಕೊರತೆ ಶೇ.50ಕ್ಕಿಂತ ಹೆಚ್ಚಿದೆ: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್‌ ರಾಜ್ಯದ ಬಳಕೆಗಾಗಿಯೇ ಆದ್ಯತೆಯಾಗಿ ಮೀಸಲಿಡಬೇಕು ಎಂದು ಸಿದ್ದಾರಾಮಯ್ಯ ಆಗ್ರಹಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು ರಾಜ್ಯದಲ್ಲಿ ಶೇ.50ಕ್ಕಿಂತ ಕಡಿಮೆ ಆಕ್ಸಿಜನ್‌ ದೊರೆಯುತ್ತಿದೆ. ಕೇಂದ್ರ ಸರಕಾರವು ರಾಜ್ಯಕ್ಕೆ ಆಕ್ಸಿಜನ್‌ ಪೂರೈಸಲು ಕ್ರಮವಹಿಸುತ್ತಿಲ್ಲ ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ: ಸಮರ್ಪಕವಾಗಿ ಕಾರ್ಯನಿರ್ವಹಿಸಿದರೂ ನಮ್ಮ ಮೇಲೆಯೇ ಆರೋಪ: ಭಾವುಕರಾದ ರೋಹಿಣಿ

ಆಕ್ಸಿಜನ್ ಕೊರತೆಯ ಬಗ್ಗೆ ವಿಧಾನಸೌಧದ ತಮ್ಮ ಕಛೇರಿಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ʻರಾಜ್ಯದಲ್ಲಿ ಎದುರಾಗಿರುವ ಕೊರೊನಾ ಗಂಭೀರ ಸಮಸ್ಯೆಗಳು ಮತ್ತು ಆಕ್ಸಿಜನ್, ಬೆಡ್, ವೆಂಟಿಲೇಟರ್ ಗಳ ಕೊರತೆಯನ್ನು ನೀಗಿಸುವಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದುಕೊಂಡಿರುವೆʼ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಭೆಯಲ್ಲಿ ಅವರೊಂದಿಗೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ಅಗತ್ಯಕ್ಕೆ ಅನುಗುಣವಾಗಿ ಆಕ್ಷಿಜನ್ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿಕೊಂಡಿದ್ದಾರೆ. ಈ ಬಗ್ಗೆ ಈ ಬಗ್ಗೆ ಗಮನ ಹರಿಸಿರುವುದಾಗಿ ಅಧಿಕಾರಿಗಳು ತಿಳಿಸಿರುತ್ತಾರೆ.

ಇದನ್ನು ಓದಿ:

ಚಾಮರಾಜನಗರ ದುರಂತದ ಬಗ್ಗೆ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದು ಇದಕ್ಕೆ ನನ್ನ ಸ್ವಾಗತವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲೊ ಕೋವಿಡ್‌ ಪ್ರಕರಣಗಳು ತೀವ್ರವಾಗಿದ್ದು ಈಗಾಗಲೇ ಬೆಂಗಳೂರು, ಕೋಲಾರ, ಬೆಳಗಾವಿ, ಯಾದಗಿರಿ, ಬೀದರ್, ಕಲಬುರ್ಗಿಯಲ್ಲಿಯೂ ಆಕ್ಸಿಜನ್ ಕೊರತೆಯಿಂದ ಸಾವುಗಳು ಹೆಚ್ಚಾಗುತ್ತಿರುವ ಬಗ್ಗೆ ವರದಿಗಳು ಬರುತ್ತಿದ್ದು ಈ ಬಗ್ಗೆಯೂ ನ್ಯಾಯಾಂಗ ತನಿಖೆಯಾಗಬೇಕು ಎಂದು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ.

ಕೇರಳದಲ್ಲಿ ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಉತ್ಪಾದನೆ ಮಾಡಿಕೊಳ್ಳುತ್ತಾರೆ. ನಮ್ಮಲ್ಲಿ ಏಕೆ ಹೀಗಿಲ್ಲ? ತಜ್ಞರ ವರದಿ ಪ್ರಕಾರ ಮೇ ತಿಂಗಳಲ್ಲಿ ಕೊರೊನಾ ಸೋಂಕು ಇನ್ನೂ ಹೆಚ್ಚಾಗುತ್ತದೆ. ಆದ್ದರಿಂದ ಎಲ್ಲ ಜಿಲ್ಲೆಗಳಲ್ಲಿ ಆಕ್ಸಿಜನ್ ತಯಾರಿಸಲು ರಾಜ್ಯದ ಬಿಜೆಪಿ ಸರಕಾರ ತೀವ್ರರೀತಿಯ ಕ್ರಮವಹಿಸಬೇಕೆಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *