ರಾಜ್ಯಸಭಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ  ಡಾ. ಕೆ. ನಾರಾಯಣ್‌ ನಾಮಪತ್ರ ಸಲ್ಲಿಕೆ

Please follow and like us:
  • ಅಶೋಕ್ ಗಸ್ತಿ ಅವರಿಂದ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆ

ಬೆಂಗಳೂರು: ಇತ್ತೀಚಿಗೆ ಕೋವಿಡ್-19 ನಿಂದ ನಿಧನರಾದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಂದ ತೆರವಾದ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಕೆ.ನಾರಾಯಣ್ ಅವರು ಬುಧವಾರ (ನ.18) ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ನಾಮಪತ್ರ  ಸಲ್ಲಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ತೋಟಗಾರಿಕೆ ಸಚಿವ ನಾರಾಯಣ ಗೌಡ, ಶಾಸಕರಾದ ಸುನಿಲ್ ಕುಮಾರ್ ಅವರು ಉಪಸ್ಥಿತರಿದ್ದರು.

ರಾಜ್ಯಸಭಾ ಚುನಾವಣೆ: ಡಾ. ಕೆ ನಾರಾಯಣ್​ಗೆ ಬಿಜೆಪಿ ಟಿಕೆಟ್

ಅಶೋಕ್ ಗಸ್ತಿ ನಿಧನಾ ನಂತರ ತೆರವಾಗಿದ್ದ ಸ್ಥಾನಕ್ಕೆ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ನೇಕಾರ ಸಮಾಜಕ್ಕೆ ಸೇರಿದ ಡಾ.ಕೆ.ನಾರಾಯಣ್‌ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಈ ಮೂಲಕ ನೇಕಾರರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪ ತಳ್ಳಿ ಹಾಕಿ ಆ ಸಮಾಜಕ್ಕೆ ಪ್ರಾತಿನಿಧ್ಯ ನೀಡುವ ಕೆಲಸವನ್ನು ಬಿಜೆಪಿ ಮಾಡಿತ್ತು.
ದೇವಾಂಗ (ನೇಕಾರ) ಸಮಾಜಕ್ಕೆ ಸೇರಿದ ಕೆ.ನಾರಾಯಣ್‌ ಕಳೆದ ಐದು ದಶಕಗಳಿಂದಲೂ ಪಕ್ಷದ ಪ್ರಾಮಾಣಿಕ ಕಾರ್ಯಕರ್ತರಾಗಿದ್ದು, ಆರ್‌ಎಸ್‌ಎಸ್‌ನಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಡಾ.ಕೆ.ನಾರಾಯಣ್‌ ನಾಮಪತ್ರ ಸಲ್ಲಿಸಿದ್ದು, ನೇಕಾರ ಸಮುದಾಯ ಅಭಿನಂದಿಸಿದೆ.
ಅಶೋಕ್‌ ಗಸ್ತಿ ನಿಧನದಿಂದ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಡಿಸೆಂಬರ್‌ 1 ರಂದು ಉಪಚುನಾವಣೆ ನಡೆಯಲಿದ್ದು, ಬುಧವಾರವೇ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *