67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಬೆಂಗಳೂರು : ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯದ ಪ್ರಮುಖ ಸಾಹಿತಿಗಳು,ತೆರೆಮರೆಯ ಸಾಧಕರು, ಕ್ರೀಢಾ ಪಟುಗಳು ಸಮಾಜ ಸೇವಕರು ಸೇರಿದಂತೆ 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ.

ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್‌ ಕುಮಾರ್‌ ಮೊದಲೇ ಪ್ರಕಟಿಸಿದ್ದರು. ಆದಾಗಿಯೂ ಸಾಕಷ್ಟು ಅರ್ಜಿಗಳು ಬಂದಿದ್ದವು. ಈ ಪಟ್ಟಿಯಲ್ಲಿರುವ ಕೆಲ ಸಾಧಕರನ್ನೂ ಆಯ್ಕೆ ಸಮಿತಿ ಪರಿಗಣಿಸಿದೆ.

ಇಸ್ರೋ ಮಾಜಿ ನಿರ್ದೇಶಕ ಶಿವನ್‌, ಹಿರಿಯ ಸಾಹಿತಿ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲೀಷ್‌ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಪಟು ರಾಘವೇಂದ್ರ ಅಣ್ವೇಕರ್‌, ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌, ಸೋಲಿಗ ಸಮುದಾಯದಲ್ಲಿ ಸಹಕಾರದ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ವನಸಂರಕ್ಷಣೆಗಾಗಿ ಜೀವನವನ್ನೇ ಮುಡುಪಾಗಿಟ್ಟ ರಾಮನಗರದ ಸಾಲುಮರದ ನಿಂಗಣ್ಣ, ಹಿರಿಯ ಚಲನಚಿತ್ರನಟರಾದ ದತ್ತಣ್ಣ, ಅವಿನಾಶ್‌, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಕಲಾವಿದರಾದ ಡಾ. ಎಂ.ಪ್ರಭಾಕರ ಜೋಷಿ, ಸುಬ್ರಹ್ಮಣ್ಯ ಧಾರೇಶ್ವರ, ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್‌ ಸೇರಿದಂತೆ 67 ಜನರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

 

 

Donate Janashakthi Media

One thought on “67 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

  1. ನಾನು ವೀರಗಾಸೆ ಕಲಾವಿದರು ವೀರೇಶ್
    ಶ್ರೀ ವೀರಭದ್ರೇಶ್ವರ ವೀರಗಾಸೆ ಕುಣಿತ ಕಲಾವಿದರು ಸಂಘ (ರಿ) ಬೂದಗುಂಪ್/ಸಾ
    ತಾಲ್ಲುಕು//ಕಾರಟಿಗಿ. ಜಿಲ್ಲೆ//ಕೊಪ್ಪಳ
    ಮೊಬೈಲ್.-8105270055

Leave a Reply

Your email address will not be published. Required fields are marked *