ನವದೆಹಲಿ: ಬಾಬರಿ ಮಸೀದಿ ಒಡೆದು ಕಟ್ಟಿದ ಅಯೋಧ್ಯೆಯ ರಾಮಮಂದಿರ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ಕಾಂಗ್ರೆಸ್ ಕೊನೆಗೂ ಬುಧವಾರ ತೀರ್ಮಾನ ಕೈಗೊಂಡಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್ ನಿರಾಕರಿಸಿದ್ದು, ರಾಮಮಂದಿರ ಬಿಜೆಪಿ ಮತ್ತು ಆರೆಸ್ಸೆಸ್‌ನ ರಾಜಕೀಯ ಯೋಜನೆಯಾಗಿದ್ದು, ಅಪೂರ್ಣ ದೇವಾಲಯವನ್ನು ಉದ್ಘಾಟಿಸುತ್ತಿರುವುದು ರಾಜಕೀಯ ರಾಭಕ್ಕಾಗಿ ಮಾತ್ರವಾಗಿದೆ ಎಂದು ಪಕ್ಷವೂ ಹೇಳಿದೆ. ಬಾಬರಿ ಮಸೀದಿ ಒಡೆದು ಕಟ್ಟಿದ ಅಯೋಧ್ಯೆಯ ಈ ಕಟ್ಟಡವನ್ನು ಜನವರಿ 22ರಂದು ಉದ್ಘಾಟನೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಅಧೀರ್ ರಂಜನ್ ಚೌಧರಿ ಅವರು ಭಾಗವಹಿಸಲು ನಿರಾಕರಿಸಿದ್ದಾರೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ಹೇಳಿಕೆ ನೀಡಿದೆ.
“ನಮ್ಮ ದೇಶದಲ್ಲಿ ಲಕ್ಷಾಂತರ ಜನರು ರಾಮನನ್ನು ಪೂಜಿಸುತ್ತಾರೆ. ಧರ್ಮವು ವೈಯಕ್ತಿಕ ಗುರುವಾಗಿದೆ. ಆದರೆ ಆರೆಸ್ಸೆಸ್/ಬಿಜೆಪಿ ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರದ ರಾಜಕೀಯ ಯೋಜನೆಯನ್ನು ಮಾಡುತ್ತಿದೆ” ಎಂದು ಕಾಂಗ್ರೆಸ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಉತ್ತರ ಪ್ರದೇಶ | ಸಾರಿಗೆ ಕಚೇರಿಯೊಳಗೆ 40 ಉದ್ಯೋಗಿಗಳು ಇದ್ದಾಗಲೇ ಬೀಗ ಜಡಿದ ನಗರ ಸಭೆ!
“ಕಾಂಗ್ರೆಸ್ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಕಳೆದ ತಿಂಗಳು ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ ಸ್ವೀಕರಿಸಿದ್ದಾರೆ” ಎಂದು ಕಾಂಗ್ರೆಸ್ ತನ್ನ ಹೇಳಿಕೆಯಲ್ಲಿ ಹೇಳಿದೆ.
“ಶ್ರೀರಾಮನನ್ನು ನಮ್ಮ ದೇಶದಲ್ಲಿ ಲಕ್ಷಾಂತರ ಜನರು ಪೂಜಿಸುತ್ತಾರೆ. ಧರ್ಮವು ವೈಯಕ್ತಿಕ ಗುರುವಾಗಿದೆ. ಆದರೆ ಆರೆಸ್ಸೆಸ್ ಹಾಗೂ ಬಿಜೆಪಿ ಬಹಳ ಹಿಂದಿನಿಂದಲೂ ಅಯೋಧ್ಯೆಯಲ್ಲಿ ಮಂದಿರದ ರಾಜಕೀಯ ಯೋಜನೆಯನ್ನಾಗಿ ಮಾಡಿದೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರಿಂದ ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಮುಂದಿಡಲಾಗಿದೆ ಎಂಬುವುದು ಸ್ಪಷ್ಟವಾಗಿದೆ” ಎಂದು ಪಕ್ಷವೂ ಹೇಳಿದೆ.
“2019 ರ ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ಧರಾಗಿ ಮತ್ತು ಭಗವಾನ್ ರಾಮನನ್ನು ಪೂಜಿಸುವ ಲಕ್ಷಾಂತರ ಜನರ ಭಾವನೆಗಳನ್ನು ಗೌರವಿಸುತ್ತಲೆ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಅಧೀರ್ ರಂಜನ್ ಚೌಧರಿ ಅವರು ಸ್ಪಷ್ಟವಾಗಿ ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕ್ರಮದ ಆಹ್ವಾನವನ್ನು ಗೌರವದಿಂದ ನಿರಾಕರಿಸಿದ್ದಾರೆ” ಎಂದು ಕಾಂಗ್ರೆಸ್ ಹೇಳದೆ.
ವಿಡಿಯೊ ನೋಡಿ: ಹೆಂಚುಗಳು ನಿರ್ಮಾಣವಾಗುವುದು ಹೇಗೆ? ಅದರ ಹಿಂದಿರುವ ಕಾರ್ಮಿಕರ ಶ್ರಮ ಎಂತದ್ದು? ಈ ವಿಡಿಯೋ ನೋಡಿ Janashakthi Media