ಕೇಂದ್ರ ಸಚಿವ ರಾಮ್‌ ವಿಲಾಸ್ ಪಾಸ್ವಾನ್‌ ನಿಧನ

ನವದೆಹಲಿ: ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌(74) ಗುರುವಾರ ನಿಧನರಾದರು.
ಆ ಬಗ್ಗೆ ಪುತ್ರ ಚಿರಾಗ್‌ ಪಾಸ್ವಾನ್‌ ಟ್ವೀಟ್‌ ಮಾಡಿದ್ದಾರೆ.

ಕೇಂದ್ರ ಸಚಿವ, ಬಿಹಾರದ ಲೋಕ ಜನಶಕ್ತಿ ಪಕ್ಷದ ನಾಯಕ ರಾಮ್‌ವಿಲಾಸ್‌ ಪಾಸ್ವಾನ್ ಅವರು ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಎದೆ ನೋವಿನ ಕಾರಣ ಕೆಲವು ವಾರಗಳ ಹಿಂದೆ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ಚಿರಾಗ್‌ ‘ಅಪ್ಪಾ…ಈಗ ನೀವು ಈ ಜಗತ್ತಿನಲ್ಲಿ ಇಲ್ಲ, ಆದರೆ ನನಗೆ ತಿಳಿದಿದೆ ನೀವು ಎಲ್ಲೇ ಇದ್ದರೂ ಸದಾ ನನ್ನೊಂದಿಗೆ ಇರುತ್ತೀರ. ಮಿಸ್‌ ಯು ಪಾಪಾ…’ ಎಂದಿದ್ದಾರೆ.

‘ಶನಿವಾರ (ಅ.3) ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಪುನಃ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಅಗತ್ಯಬಿದ್ದರೆ ಕೆಲವು ವಾರಗಳ ನಂತರ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು’ ಎಂದು ಪುತ್ರ ಚಿರಾಗ್ ಭಾನುವಾರ ಹೇಳಿದ್ದರು.

ಬಿಹಾರ ವಿಧಾನಸಭಾ ಚುನಾವಣೆ ಘೋಷಣೆಯಾದ ಬಳಿಕ  ಲೋಕಜನಶಕ್ತಿ ಪಕ್ಷದ ನೇತಾರ ನಿಧನರಾಗಿರುವುದು ಎಲ್ಜೆಪಿಗೆ ತೀವ್ರ ಹಿನ್ನಡೆಯಾಗಿದೆ. ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ದಲ್ಲಿ ಇದ್ದ ಎಲ್ಜೆಪಿ ಬಿಜೆಪಿ ನೇತೃತ್ವದ ಎನ್ಡಿಎ ಬೇಕು ಎಂದು ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿತ್ತು.

Donate Janashakthi Media

Leave a Reply

Your email address will not be published. Required fields are marked *