ಪ್ಯಾಲೆಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ

ಬೆಂಗಳೂರು:ಪ್ಯಾಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿ ವಿರೋಧಿಸಿ ಬೆಂಗಳೂರಿನ ರಂಗಶಂಕರದಲ್ಲಿ ಆಯೋಜಿದ್ದ ಕಾರ್ಯಕ್ರಮಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಲಾವಿದರಿಂದ ಆಕ್ರೋಶ ವ್ಯಕ್ತವಾಗಿದೆ.

ಪೊಲೀಸರು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದು, ಈ ಬಗ್ಗೆ ಗಾಯಕಿ ಎಂಡಿ ಪಲ್ಲವಿ ಅವರು ಮಾಹಿತಿ ನೀಡಿದ್ದಾರೆ. “ಕಾರ್ಯಕ್ರಮ ರದ್ದಾಗಿದೆ. ಪೊಲೀಸರು ಅನುಮತಿ ನಿರಾಕರಿಸಿದ್ದಾರೆ” ಎಂದು ಫೇಸ್‌ಬುಕ್‌ನಲ್ಲಿ ಪಲ್ಲವಿ ಪೋಸ್ಟ್‌ ಮಾಡಿದ್ದಾರೆ.

ನ.29ರ (ಇಂದು) ಸಂಜೆ 5:30ಕ್ಕೆ ಕಾವ್ಯಗೋಷ್ಠಿ, ಕಿರು ನಾಟಕ ಸೇರಿದಂತೆ ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ಹತ್ಯಾಕಾಂಡವನ್ನು ವಿರೋಧಿಸಿ ವಿವಿಧ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಖ್ಯಾತ ಕಲಾವಿದರಾದ ಎಂ.ಡಿ ಪಲ್ಲವಿ ಶ್ವೇತಾಂಶು ಬೋರ, ರಮಣೀಕ್ ಸಿಂಗ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಕಾರ್ಯಕ್ರಮವನ್ನು ರದ್ದುಗೊಳಿಸುವಂತೆ ರಂಗಶಂಕರದಂತಹ ಸಂಸ್ಥೆಯನ್ನು ಹೆದರಿಸುವ ಕೆಲಸವನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಇದು ಪ್ರಜಾಪ್ರಭುತ್ವದ ಮೇಲಿನ ದಾಳಿ ಎಂದು ಸಂಘಟಕರು ಆರೋಪಿಸಿದ್ದಾರೆ.

ಒಳಾಂಗಣ ಕಾರ್ಯಕ್ರಮಕ್ಕೆ ಯಾವುದೇ ಪೊಲೀಸ್ ಅನುಮತಿ ಅಗತ್ಯವಿಲ್ಲ ಬೆಂಗಳೂರು ಪೊಲೀಸರು ಮತ್ತು ಕರ್ನಾಟಕ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ರಮಣೀಕ್ ಸಿಂಗ್ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *