ರನ್ಯಾ ರಾವ್‌ ಚಿನ್ನ ಕಳ್ಳಸಾಗಾಣೆ ಪ್ರಕರಣ: ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್‌ ಬಗ್ಗೆ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದೂ, ಗೌರವ್ ಗುಪ್ತಾ ನೇತೃತ್ವದ ತನಿಖಾ ತಂಡ 230 ಪುಟಗಳ ತನಿಖಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ತನಿಖೆ ವೇಳೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಿಷ್ಟಾಚಾರವನ್ನು ದುರುಪಯೋಗಪಡಿಸಿಕೊಂಡಿದೆ ಎನ್ನುವ ವಿಚಾರವನ್ನು ಬಹಿರಂಗಪಡಿಸಿದೆ. ಚಿನ್ನ
ದುಬೈಗೆ ಹಲವು ಬಾರಿ ಪ್ರಯಾಣ ಮಾಡುತ್ತಿದ್ದ ರನ್ಯಾ ರಾವ್‌ ಅವರಿಗೆ ವಿಮಾನ ನಿಲ್ದಾಣದಲ್ಲಿ ಹಲವು ಬಾರಿ ವಿಶೇಷ ಸವಲತ್ತುಗಳನ್ನು ನೀಡಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ತನಿಖಾಧಿಕಾರಿಗಳಯ ಸಿಸಿಟಿವಿ ದೃಶ್ಯವಾಳಿಗಳನ್ನು ಕಲೆಹಾಕಿದ್ದು ರನ್ಯಾ ರಾವ್ ಭದ್ರತಾ ತಪಾಸಣೆ ತಪ್ಪಿಸಲು ಸರ್ಕಾರಿ ಕಾರುಗಳು ಮತ್ತು ಪೊಲೀಸ್ ವಾಹನಗಳನ್ನು ಬಳಸಿರುವುದು ದೃಢಪಟ್ಟಿದೆ. ಅಧಿಕಾರಿಗಲೇ ಇದರಲ್ಲಿ ಶಾಮೀಲಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ.

ಡಿಜಿಪಿ ರಾಮಚಂದ್ರರಾವ್ ಅವರಿಗೂ ತಿಳಿದಿತ್ತು?

ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರರಾವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ, ಅವರು ಮದುವೆಯಾದ ಬಳಿಕ ಬೇರೆ ವಾಸಿಸುತ್ತಿದ್ದಾರೆ ಎಂದು ಹೇಳಿದ್ದರು. ಆದರೆ ತನಿಖಾ ವರದಿಯಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರಿಗೂ ರನ್ಯಾ ರಾವ್‌ಗೆ ಸಿಗುತ್ತಿದ್ದ ವಿಶೇಷ ಸವಲತ್ತುಗಳ ಬಗ್ಗೆ ಮಾಹಿತಿ ಇತ್ತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಬಿಲಾಸ್ಪುರ| ಕನ್ಯತ್ವ ಪರೀಕ್ಷೆಗೆ ಒತ್ತಾಯಿಸುವಂತಿಲ್ಲ: ಛತ್ತೀಸಗಢ ಹೈಕೋರ್ಟ್

ಆದರೆ ಅವರು ನೇರವಾಗಿ ಮಗಳಿಗೆ ಈ ಸೌಲಭ್ಯ ಒದಗಿಸಿದ್ದಾರೆ ಎನ್ನುವುದಕ್ಕೆ ಸಾಕ್ಷಿಗಳಿಲ್ಲ ಎಂದು ಹೇಳಲಾಗಿದೆ. ಆದರೂ, ರನ್ಯಾ ರಾವ್ ವೈಯಕ್ತಿಕ ಲಾಭಕ್ಕಾಗಿ ವ್ಯವಸ್ಥೆಯನ್ನು ಹೇಗೆ ದುರ್ಬಳಕೆ ಮಾಡಿಕೊಂಡರು ಎನ್ನುವುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕಿದ್ದಾರೆ.

ತನಿಖಾ ವರದಿಯಲ್ಲಿ ಹಲವು ಮಾಹಿತಿಗಳು ಬಹಿರಂಗವಾದ ಬಳಿಕ ಇದೀಗ ರನ್ಯಾ ರಾವ್ ಮತ್ತು ಡಿಜಿಪಿ ರಾಮಚಂದ್ರ ರಾವ್ ವಿರುದ್ಧದ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸುವ ಸಾಧ್ಯತೆಯಿದೆ. ಶಿಷ್ಟಾಚಾರದ ದುರುಪಯೋಗ ಮಾಡಿಕೊಂಡಿರುವುದು ಹಲವು ವಲಯಗಳಲ್ಲಿ ಸಂಭವನೀಯ ಒಪ್ಪಂದವನ್ನು ಸೂಚಿಸುತ್ತದೆ, ಇದು ಚಿನ್ನ ಕಳ್ಳಸಾಗಾಣಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಆಯಾಮವನ್ನು ನೀಡುತ್ತದೆ.

ಸರ್ಕಾರ ವರದಿಯನ್ನು ಸ್ವೀಕರಿಸಿದ್ದು ಪರಿಶೀಲನೆ ಮಾಡಿದ ಬಳಿಕ ಕಾನೂನು ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ. ದಿನದಿಂದ ದಿನಕ್ಕೆ ಪ್ರಕರಣ ಗಂಭೀರವಾಗುತ್ತಿದೆ. ಪ್ರಕರಣದಲ್ಲಿ ದೊಡ್ಡ ದೊಡ್ಡ ಕುಳಗಳು, ಪ್ರಭಾವಿಗಳು ಭಾಗಿಯಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದು, ಇದನ್ನು ಪತ್ತೆಹಚ್ಚಲು ಅಧಿಕಾರಿಗಲು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ನೋಡಿ: ಮಂಗಳೂರು | ಪೌರ ಕಾರ್ಮಿಕರೊಂದಿಗೆ ಸಾಮೂಹಿಕ ಇಫ್ತಾರ್ ಕೂಟ Janashakthi Media

Donate Janashakthi Media

Leave a Reply

Your email address will not be published. Required fields are marked *