ಬೆಳಗಾವಿ: ಅಂಗನವಾಡಿಗೆ ನುಗ್ಗಿ ಶಿಕ್ಷಕೀಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.
ಹೌದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಅಂಗನವಾಡಿಯಲ್ಲಿ ಅಡುಗೆ ಮಾಡುವ ಮಹಿಳಾ ಸಹಾಯಕಿಯ ಗಂಡನೊಬ್ಬ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಅಂಗನವಾಡಿ ಕೇಂದ್ರದ ಅಡುಗೆ ಸಿಬ್ಬಂದಿ ಸಾವಿತ್ರಿ ಕರ್ಲಟ್ಟಿ ಎಂಬುವವರಿಗೆ ಅಂಗನವಾಡಿ ಶೌಚಾಲಯ ಸ್ವಚ್ಛ ಮಾಡುವಂತೆ ಅಂಗನವಾಡಿ ಶಿಕ್ಷಕಿ ಹೇಳಿದ್ದರಂತೆ. ಈ ವಿಷಯವನ್ನು ಅಡುಗೆ ಸಿಬ್ಬಂದಿ ಸಾವಿತ್ರಿ ಕರ್ಲಟ್ಟಿ ತನ್ನ ಪತಿ ಸದ್ರಾಯಿಗೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ಆತ ಅಂಗನವಾಡಿ ಕೇಂದ್ರಕ್ಕೆ ಧಾವಿಸಿ ಬಂದು ತನ್ನ ಪತ್ನಿಗೆ ಶೌಚಾಲಯ ಕ್ಲೀನ್ ಮಾಡಲು ಹೇಳ್ತೀಯಾ ಎಂದು ಅವಾಚ್ಯವಾಗಿ ನಿಂದಿಸಿದ್ದಾನೆ. ಅಷ್ಟೇ ಅಲ್ಲ ಶಿಕ್ಷಕಿಯ ಸೀರೆ ಎಳೆದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ: ರೈತ ನಾಯಕ ಶ್ರೀ ಜಗಜಿತ್ ಸಿಂಗ್ ದಲ್ಲೆವಾಲ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ
ಇನ್ನು ಶಿಕ್ಷಕಿ ಬ್ರೈನ್ ಟ್ಯೂಮರ್ದಿಂದ ಬಳಲುತ್ತಿದ್ದು, ಮಾನಸಿಕ ಕಿರುಕುಳ ತಾಳಲಾರದೇ ಆತ್ಮಹತ್ಯೆಗೂ ಯತ್ನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ನೋಡಿ: ಮುಖ್ಯಮಂತ್ರಿಗೆ ಘೇರಾವ್ : DYFI ಕಾರ್ಯಕರ್ತರ ಬಂಧನ Janashakthi Media