ಅತ್ಯಾಚಾರ ಪ್ರಕರಣ;ಪ್ರತಿಭಟನೆ ಮುಂದುವರಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ನವದೆಹಲಿ: ಬಾಲಕಿ ಮೇಲೆ ಹಲವು ಬಾರಿ ಅತ್ಯಾಚಾರ ನಡೆಸಿ,ಆಕೆ ಗರ್ಭಧರಿಸಲು ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯನ್ನು ಭೇಟಿಯಾಗಲು ಅವಕಾಶ  ನೀಡುತ್ತಿಲ್ಲ ಎಂದು ಆರೋಪಿಸಿ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಲ್‌ ದೆಹಲಿಯ ಆಸ್ಪತ್ರೆಯ ಎದುರು ಪ್ರತಿಭಟನೆ ಮುಂದುವರಿಸಿದ್ದಾರೆ.

ಬಾಲಕಿಯನ್ನು ಸೇಂಟ್ ಸ್ಟೀಫನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಭೇಟಿಗೆ ನಿರಾಕರಿಸಿರುವುದರಿಂದ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಲ್  ಸೋಮವಾರ ಬೆಳಗ್ಗೆ ಧರಣಿ ಕುಳಿತಿದ್ದರು. ಸ್ವಾತಿ ಮಾಲೀವಾಲ್‌ ಇಂದು ಸಹ ತಮ್ಮ ಧರಣಿಯನ್ನು ಮುಂದುವರೆಸಿದ್ದಾರೆ.

ಇದನ್ನೂ ಓದಿ:ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಕಾನ್‌ಸ್ಟೆಬಲ್‌

ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮೋದಯ್ ಖಾಖಾ ನವೆಂಬರ್ 2020 ಮತ್ತು ಜನವರಿ 2021 ರ ನಡುವೆ ಬಾಲಕಿಯ ಮೇಲೆ ಅನೇಕ ಬಾರಿ ಅತ್ಯಾಚಾರವೆಸಗಿದ್ದು, ಗರ್ಭಪಾತಕ್ಕಾಗಿ ಆತನ ಪತ್ನಿ ಬಾಲಕಿಗೆ ಔಷಧಿ ನೀಡಿದ್ದಾಳೆ ಎನ್ನಲಾಗಿದೆ. ಖಾಖಾ ಮತ್ತು ಅವರ ಪತ್ನಿ ಸೀಮಾ ರಾಣಿ ಅವರನ್ನು ಸೋಮವಾರ ಬಂಧಿಸಲಾಗಿದೆ.

Donate Janashakthi Media

Leave a Reply

Your email address will not be published. Required fields are marked *