ನವದೆಹಲಿ: ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ನಿರ್ದೇಶಕ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಆರೋಪ ದಾಖಲಾಗಿದ್ದೂ, ಸ್ವಾಮೀಜಿಯನ್ನು ಆರೋಪ ಕೇಳಿಬಂದ ಕೂಡಲೇ ವಜಾಗೊಳಿಸಲಾಗಿದೆ.
ಶ್ರೀ ಶಾರದಾ ಇನ್ ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ರಾಜ್ಯದ ಶಾರದಾ ಮಠದ ಅಧೀನ ಸಂಸ್ಥೆಯಾಗಿದೆ.
ಶಾರದಾ ಇನ್ ಸ್ಟಿಟ್ಯೂಟ್ ನಲ್ಲಿ ವ್ಯಾಸಂಗ ಮಾಡುತ್ತಿರುವ 32 ವಿದ್ಯಾರ್ಥಿನಿಯರ ಪೈಕಿ ಸುಮಾರು 16 ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಸ್ವಾಮೀಜಿ ಮೇಲಿದೆ. ವಿದ್ಯಾರ್ಥಿನಿಯರನ್ನು ವ್ಯವಸ್ಥಿತವಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ತಮ್ಮ ಕೋಣೆಗೆ ಕರೆಸಿಕೊಳ್ಳುತ್ತಿದ್ದ ಸ್ವಾಮೀಜಿ, ನಾನು ಹೇಳಿದಂತೆ ಕೇಳಿಲ್ಲ ಅಂದರೆ ಕಡಿಮೆ ಅಂಕ ಕೊಡಿಸುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ವರದಿಯಾಗಿದೆ.
ಇದನ್ನೂ ಓದಿ: ಬೆಂಗಳೂರು | ಪೊಲೀಸ್ ಪೇದೆ ಹುದ್ದೆ ಮತ್ತು ಪೊಲೀಸ್ ಇಲಾಖೆಯ ನೇಮಕಾತಿಗಳಲ್ಲಿ ವಯೋಮಿತಿ ಸಡಿಲಿಕೆಗೆ ಎಸ್ಎಫ್ಐ ಒತ್ತಾಯ
ಅಶ್ಲೀಲ ವಾಟ್ಸಾಪ್ ಸಂದೇಶ ಮತ್ತು ಸಮ್ಮತಿಯಿಲ್ಲದ ಲೈಂಗಿಕ ಸಂಪರ್ಕ ಹೊಂದುತ್ತಿದ್ದ ಆರೋಪವೂ ಸ್ವಾಮೀಜಿ ಮೇಲಿದೆ. ಕೆಲವರಿಗೆ ವಿದೇಶ ಪ್ರವಾಸದ ಭರಸೆ ನೀಡಿ ಲೈಂಗಿಕ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಇದರ ಜೊತೆಗೆ, ಶೃಂಗೇರಿ ಮಠದ ಆಡಳಿತಾಧಿಕಾರಿ ಸಹ ಸ್ವಾಮೀಜಿ ವಿರುದ್ಧ ದೂರು ನೀಡಿದ್ದರು ಎನ್ನಲಾಗಿದೆ. ಸದ್ಯ ಪಟಿಯಾಲ ಹೌಸ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲೂ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದೆ.
ವಿಚಾರ ತಿಳಿದ ತಕ್ಷಣ ಶೃಂಗೇರಿ ಮಠದ ಆಡಳಿತ ತಕ್ಷಣ ಸ್ವಾಮೀಜಿಯನ್ನು ವಜಾ ಮಾಡಿದೆ. ಕೇಸ್ ದಾಖಲಾಗುತ್ತಿದ್ದಂತೆಯೇ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ನಾಪತ್ತೆಯಾಗಿದ್ದಾರೆ.
ಇದನ್ನೂ ನೋಡಿ: ಧರ್ಮಸ್ಥಳ :ಅಧಿಕ ಬಡ್ಡಿ, ಸಾಲ ವಸೂಲಿ ನೆಪದಲ್ಲಿ ಕಿರುಕುಳ : ನೂರಾರು ಜನರು ಆತ್ಮಹತ್ಯೆ – ಜಯಂತ್ ಟಿ
