ಮಹಾರಾಷ್ಟ್ರ: ವ್ಯಕ್ತಿಯೊಬ್ಬ ಥಾಣೆ ಜಿಲ್ಲೆಯ ಹೋಟೆಲ್‌ವೊಂದರ ಮಹಿಳಾ ಭದ್ರತಾ ಸಿಬ್ಬಂದಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಔಷಧಿ
ಆರೋಪಿಯನ್ನು ಅಭಿಷೇಕ್ ಸಿಂಗ್ ಎಂದು ಗುರುತಿಸಲಾಗಿದೆ.
ಇಲ್ಲಿನ ಹೋಟೆಲ್‌ವೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ (ಸೆಕ್ಯುರಿಟಿ ಗಾರ್ಡ್) ಕಾರ್ಯನಿರ್ವಹಿಸುತ್ತಿದ್ದ ಮಹಿಳೆಗೆ ಖಾಯಂ ಕೆಲಸ ಕೊಡಿಸುವುದಾಗಿ ಆರೋಪಿ ಆಮಿಷವೊಡ್ಡಿದ್ದಾನೆ.
ಆಕೆಗೆ ಭೇಟಿ ಮಾಡುವಂತೆ ಸೂಚಿಸಿದ್ದಾನೆ. ಭೇಟಿಯ ವೇಳೆ ಆಕೆ ಕುಡಿಯುವ ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ಬೇರಸಿ ಪ್ರಜ್ಞೆ ತಪ್ಪಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: 5,000 ರೂ.ಗಳ ನೋಟುಗಳು ನಿಜಕ್ಕೂ ಚಲಾವಣೆಗೆ ಬರಲಿವೆಯೇ? ಇಲ್ಲಿದೆ ಆರ್‌ಬಿಐ ನೀಡಿರುವ ಸ್ಪಷ್ಟನೆ
ಈ ಘಟನೆ ಡಿಸೆಂಬರ್ 30ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆಗೆ ಪ್ರಜ್ಞೆ ಬಂದಾಗ ಆಕೆ ಮೋಸ ಹೋಗಿರುವುದನ್ನು ಅರಿತುಕೊಂಡರು. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿದ್ದಾರೆ.
ಮಹಿಳೆಯ ದೂರು ಆಧರಿಸಿ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಇದನ್ನೂ ನೋಡಿ: ಕುವೆಂಪು 120| ಕುವೆಂಪು ಗೀತೆಗಳ ಗಾಯನ ಉಮೇಶ್ ಎಚ್.ಸಿ Janashakthi Media