ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಐಪಿಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್

Please follow and like us:
ಮುಂಬೈ: ಮಹಾರಾಷ್ಟ್ರದ ನಾಗ್ಪುರದಲ್ಲಿ ಮಹಿಳಾ ವೈದ್ಯೆಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಮೇಲೆ 30 ವರ್ಷದ ಐಪಿಎಸ್ ಅಧಿಕಾರಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಏಪ್ರಿಲ್‌ 13 ಭಾನುವಾರದಂದು ತಿಳಿಸಿದ್ದಾರೆ.

ಮಹಿಳೆಯು ಇತ್ತೀಚೆಗೆ ನಾಗ್ಪುರದ ಇಮಾಮ್ವಾಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಅವರು ಹೇಳಿದರು.

ದೂರುದಾರರ ಪ್ರಕಾರ, ವೈದ್ಯೆ ಮತ್ತು ಆ ವ್ಯಕ್ತಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕಕ್ಕೆ ಬಂದಿದ್ದಾರೆ. ಆಗ ಆರೋಪಿಯು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರೆ, ಮಹಿಳೆ ಎಂಬಿಬಿಎಸ್ ಕೋರ್ಸ್ ಓದುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ʼಗಿಗ್‌ ಕಾರ್ಮಿಕ’ರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸಚಿವ ಸಂಪುಟ ತೀರ್ಮಾನ

ಅವರಿಬ್ಬರು ಸ್ನೇಹಿತರಾದ ನಂತರ, ಆರೋಪಿ ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಗೆ ಆಯ್ಕೆಯಾದ ನಂತರ, ಆರೋಪಿ ಮಹಿಳೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾನೆ ಮತ್ತು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಅಧಿಕಾರಿ ಹೇಳಿದರು.

ಆ ವ್ಯಕ್ತಿಯ ಪೋಷಕರು ಕೂಡ ಮಹಿಳೆಗೆ ಸ್ಪಂದಿಸಿಲ್ಲ. ಇದರಿಂದ ಆಕೆ ಅಸಮಾಧಾನಗೊಂಡು ಇಮಾಮ್‌ವಾಡಾ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ.

ಆಕೆಯ ದೂರಿನ ಆಧಾರದ ಮೇಲೆ, ಐಪಿಎಸ್ ಅಧಿಕಾರಿಯ ವಿರುದ್ಧ ಅತ್ಯಾಚಾರ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.

ಇದನ್ನೂ ನೋಡಿ: ಬ್ಯಾಟಿಂಗ್‌ ಪಿಚ್‌ನಲ್ಲಿ RR ಸೋತಿದ್ದ್ಯಾಕೆ? DC ಓಟಕ್ಕೆ ಬ್ರೇಕ್‌ ಹಾಕುತ್ತಾ RCB! #ipl2025 #RCB #DC

Please follow and like us:
Donate Janashakthi Media

Leave a Reply

Your email address will not be published. Required fields are marked *